/newsfirstlive-kannada/media/media_files/2025/09/01/bengalore-roin-1-2025-09-01-18-57-51.jpg)
ಬೆಂಗಳೂರು: ಮಳೆ ಅವಾಂತರಕ್ಕೆ ಬೆಂಗಳೂರಲ್ಲಿ ಓರ್ವನ ದುರಂತ ಅಂತ್ಯವಾಗಿದೆ. ಮಣ್ಣು ಕುಸಿದು ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಟ್ಟಡ ನಿರ್ಮಾಣಕ್ಕೆ ಮಣ್ಣು ಅಗೆಯುವಾಗ ದುರ್ಘಟನೆ ನಡೆದಿದೆ. ಎಂಬಾಸಿ ಗ್ರೂಪ್ಗೆ ಸೇರಿದ ಕಟ್ಟಡ ಕಾಮಗಾರಿ. ಮಳೆ ನೀರು ಜಾಸ್ತಿ ಹರಿದ ಪರಿಣಾಮ ಮಣ್ಣು ಕುಸಿದಿದೆ.
ಆಂಧ್ರ ಮೂಲದ ಕಾರ್ಮಿಕ ಮೃತಪಟ್ಟಿದ್ದಾನೆ. ಮತ್ತೋರ್ವನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸ್ತಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸಂಜೆ ಆಗುತ್ತಿದ್ದಂಗೆ ಮಳೆ ಆರಂಭವಾಗಿದೆ. ಮಳೆಯಿಂದಾಗಿ ವಾಹನಗಳ ಸಂಚಾರಕ್ಕೆ ಅಡಚಣೆ ಆಗಿದೆ. ಜಯನಗರ 4ನೇ ಬ್ಲಾಕ್, ರಾಜಾಜಿನಗರ, ಶಾಂತಿನಗರ, ಯಶವಂತಪುರ, ಕೆ.ಆರ್.ಮಾರುಕಟ್ಟೆ, ಮೈಸೂರು ರಸ್ತೆ, ವಿಜಯನಗರ, ಬಸವನಗುಡಿ, ಶ್ರೀನಿವಾಸನಗರ, ಕತ್ರಿಗುಪ್ಪೆ, ವಿದ್ಯಾಪೀಠ, ನಾಗರಬಾವಿ, ಬನಶಂಕರಿ ಸೇರಿದಂತೆ ಹಲವೆಡೆ ಮಳೆಯಾಗಿದೆ.
ನಾಯಂಡಹಳ್ಳಿ ರಸ್ತೆಯಲ್ಲಿ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ಇದರಿಂದ ವಾಹನ ಸವಾರರು ಪರಾದಾಟ ನಡೆಸಿದ್ದಾರೆ. ಇನ್ನು ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ಮೂರು ಗಂಟೆಯಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ:ಪೊಲೀಸರು ಹಳೇ ಕೇಸು ರೀ-ಓಪನ್ ಮಾಡ್ತೀನಿ ಎಂದ ಆರೋಪ -ಮಗು ಜೊತೆ ತಾಯಿ ದುರಂತ ಅಂತ್ಯ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ