/newsfirstlive-kannada/media/media_files/2025/09/04/metro-elevated-corridor-bangalore-2025-09-04-20-17-46.jpg)
ಬೆಂಗಳೂರು: ಮೆಟ್ರೋ ಎಲಿವೇಟೆಡ್ ಕಾರಿಡಾರ್ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಏನಿದು ಮೆಟ್ರೋ ಎಲಿವೇಟೆಡ್ ಕಾರಿಡಾರ್..?
ಮಹಾನಗರ ಬೆಂಗಳೂರನ್ನು ತೀವ್ರವಾಗಿ ಕಾಡುತ್ತಿರುವ ಸಮಸ್ಯೆ ಅಂದರೆ ಸಂಚಾರ ದಟ್ಟಣೆ. ಅದಕ್ಕೆ ಶಾಶ್ವತವಾಗಿ ಪರಿಹಾರ ಕಂಡುಕೊಲ್ಳಲು 16 ಕ್ಕೂ ಹೆಚ್ಚು ಎಲಿವೇಟರ್ ಕಾರಿಡಾರ್ಗಳ (ಮೆಲ್ಸೇತುವೆ) ನಿರ್ಮಾಣಕ್ಕೆ ಗ್ರೇಟರ್ ಬೆಂಗಳೂರು ಅಥಾರಿಟಿ ಮುಂದಾಗಿದೆ. ಅದಕ್ಕಾಗಿ ಬರೋಬ್ಬರಿ 13 ಸಾವಿರ ಕೋಟಿ ಹಣ ಮೀಸಲಿಡಲು ನಿರ್ಧರಿಸಲಾಗಿದೆ.
ಇದನ್ನೂ ಓದಿ:EVM ಬೇಡ, ಬ್ಯಾಲೆಟ್ ಪೇಪರ್ಗೆ ಆದ್ಯತೆ ನೀಡಿ - ಚುನಾವಣಾ ಆಯೋಗಕ್ಕೆ ಸರ್ಕಾರ ಶಿಫಾರಸು
ಮೆಟ್ರೋ ಎಲಿವೇಟೆಡ್ ಕಾರಿಡಾರ್ ಎಂದರೆ ನೆಲದ ಮಟ್ಟಕ್ಕಿಂತ ಎತ್ತರದಲ್ಲಿ ನಿರ್ಮಿಸಲಾಗುವ ರಸ್ತೆ ಅಥವಾ ರೈಲು ಮಾರ್ಗ. ಈಗಾಗಲೇ ಇರುವ ರಸ್ತೆ ಮತ್ತು ಮೆಟ್ರೋ ಜಾಲಕ್ಕೆ ಉತ್ತಮ ಸಂಪರ್ಕ ಕಲ್ಪಿಸಲು, ಟ್ರಾಫಿಕ್ ಜಾಮ್ ಕಡಿಮೆ ಮಾಡಲು ಮತ್ತು ನಗರದ ಅಭಿವೃದ್ಧಿಗೆ ಸಹಾಯವಾಗಲು ಈ ಎಲಿವೇಟೆಡ್ ಕಾರಿಡಾರ್‌ಗಳನ್ನು ನಿರ್ಮಿಸಲಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು ಮತ್ತು ಜಂಕ್ಷನ್‌ಗಳನ್ನು ಸಂಪರ್ಕಿಸುವ ಮೂಲಕ ಪ್ರಸ್ತುತ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡಲಿದೆ.
ಇದನ್ನೂ ಓದಿ:ಧೋನಿ vs ಶಾರುಖ್ ಖಾನ್! ಕೊನೆಯಲ್ಲಿ ಗೆದ್ದಿದ್ದು ತಲಾ..!
ಉತ್ತರ-ದಕ್ಷಿಣ ಕಾರಿಡಾರ್‌ನ ಹೆಬ್ಬಾಳದ ಎಸ್ಟೀಮ್ ಮಾಲ್ ಜಂಕ್ಷನ್‌ನಿಂದ ಸಿಲ್ಕ್‌ಬೋರ್ಡ್ ಜಂಕ್ಷನ್‌ವರೆಗೆ 17,780.13 ಕೋಟಿ ರೂಪಾಯಿ ವೆಚ್ಚದಲ್ಲಿ 16.745 ಕಿ.ಮೀ ಉದ್ದದ ಅವಳಿ ಸುರಂಗ ಮಾರ್ಗ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ಸಿಕ್ಕಿದೆ.
ಒಂದು ಅಂದಾಜಿನ ಪ್ರಕಾರ ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ದಾಟಿದೆ. 1.20 ಕೋಟಿಗಿಂತ ಹೆಚ್ಚು ವಾಹನಗಳಿವೆ. ಜೊತೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿವಿಧ ರಾಜ್ಯಗಳಿಂದ ನಿತ್ಯ ಲಕ್ಷಾಂತರ ವಾಹನಗಳು ಬಂದು ಹೋಗುತ್ತವೆ. ಜನಸಂಖ್ಯೆ ಹೆಚ್ಚಳ ಮತ್ತು ಆರ್ಥಿಕ ಅಭಿವೃದ್ಧಿಯಿಂದಾಗಿ ಬೆಂಗಳೂರಲ್ಲಿ ವಾಹನಗಳ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಪ್ರಸ್ತುತ ಇರುವ ಹಾಲಿ ರಸ್ತೆಗಳು ಹಾಗೂ ಮೂಲತ ಸೌಕರ್ಯಗಳ ಸಮಸ್ಯೆ ಎದುರಾಗಿದೆ.
ಇದನ್ನೂ ಓದಿ:ನಮ್ಮ ಮೆಟ್ರೋದ ಹಳದಿ ಮಾರ್ಗದ ವಿಶೇಷತೆಗಳು ಏನೇನು..? ಕಂಪ್ಲೀಟ್ ಮಾಹಿತಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ