ಶಾಸಕ ಭೈರತಿ ಬಸವರಾಜುಗೆ ಇಂದು ಸಿಗದ ನಿರೀಕ್ಷಣಾ ಜಾಮೀನು: ಕೋರ್ಟ್ ವಿಚಾರಣೆ ನಾಳೆಗೆ ಮುಂದೂಡಿಕೆ

ಕೆ.ಆರ್.ಪುರ ಕ್ಷೇತ್ರದ ಶಾಸಕ ಭೈರತಿ ಬಸವರಾಜುಗೆ ಇಂದು ನಿರೀಕ್ಷಣಾ ಜಾಮೀನು ಸಿಕ್ಕಿಲ್ಲ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಭೈರತಿ ಬಸವರಾಜು ಹೊರತುಪಡಿಸಿ ಉಳಿದ ಆರೋಪಿಗಳ ವಿರುದ್ಧ ಚಾರ್ಜ್ ಷೀಟ್ ಸಲ್ಲಿಕೆಯಾಗಿದೆ. ನಾಳೆ ಭೈರತಿ ಬಸವರಾಜು ಅರ್ಜಿ ವಿಚಾರಣೆ ನಡೆಯಲಿದೆ.

author-image
Chandramohan
ರೌಡಿ ಶೀಟರ್‌ ಬಿಕ್ಲು ಶಿವ ಕೊ*ಲೆ ಪ್ರಕರಣ; ಶಾಸಕ ಬೈರತಿ ಬಸವರಾಜ್ ವಿರುದ್ಧ FIR

ಶಾಸಕ ಭೈರತಿ ಬಸವರಾಜುಗೆ ಸಿಗದ ನಿರೀಕ್ಷಣಾ ಜಾಮೀನು

Advertisment

ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಡೆಸಿತು. 
ಶಾಸಕ ಭೈರತಿ ಬಸವರಾಜು ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಿರುವುದಾಗಿ ತಿಳಿದುಬಂದಿದೆ.
ತನಿಖೆಯಿಂದ ಪಾರಾಗಲು ಭೈರತಿ ಬಸವರಾಜು ಯತ್ನಿಸಿಲ್ಲ. ತನಿಖೆಗೆ ಸಹಕರಿಸುವುದಾಗಿ ಹೇಳಿಯೇ ಸಿಆರ್ ಪಿಸಿ 482 ಅರ್ಜಿ ಹಿಂಪಡೆದಿದ್ದಾರೆ. ಸಿಬಿಐ ತನಿಖೆಗೆ ವಹಿಸುವಂತೆ ಸ್ಪೀಕರ್ ಗೂ ಭೈರತಿ ಬಸವರಾಜು ಪತ್ರ ಬರೆದಿದ್ದಾರೆ. ನಿಜವಾದ ಆರೋಪಿ ಯಾರೆಂಬ ಬಗ್ಗೆ ತನಿಖೆಯಾಗಬೇಕು. ಸಿಐಡಿ ಪೊಲೀಸರು ಒಮ್ಮೆಯೂ ಸಮನ್ಸ್ ನೀಡಿಲ್ಲ ಎಂದು  ಭೈರತಿ ಬಸವರಾಜು ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಾಡಿದ್ದರು. 
ಇನ್ನೂ ಸಂಜೆ ಕೋರ್ಟ್ ಗೆ ಸಿಐಡಿ ಅಧಿಕಾರಿಗಳು  ಜಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು.  4236 ಪುಟಗಳ ಚಾರ್ಜ್ ಶೀಟ್ ಅನ್ನು ಸಿಐಡಿ ಅಧಿಕಾರಿಗಳು ಕೋರ್ಟ್ ಗೆ ಸಲ್ಲಿಕೆ ಮಾಡಿದ್ದರು. ಒಂದನೇ ಆರೋಪಿಯಿಂದ ನಾಲ್ಕು ಹಾಗೂ ಆರರಿಂದ 19ನೇ ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.  ಐದನೇ ಆರೋಪಿ  ಶಾಸಕ ಭೈರತಿ ಬಸವರಾಜ್ ವಿರುದ್ದ ಸದ್ಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿಲ್ಲ.  ಶಾಸಕ ಭೈರತಿ ಬಸವರಾಜು ತಲೆ ಮರೆಸಿಕೊಂಡಿದ್ದು, ಹುಡುಕಾಟ ಮುಂದುವರೆದಿದೆ ಎಂದು  ಭೈರತಿ ಬಸವರಾಜು ಬಗ್ಗೆ ಚಾರ್ಜ್ ಷೀಟ್ ನಲ್ಲಿ  ಉಲ್ಲೇಖ ಮಾಡಲಾಗಿದೆ.  ಭೈರತಿ ಬಸವರಾಜು ಬಂಧನವೂ ಆಗಿಲ್ಲ..ವಿಚಾರಣೆಯೂ ನಡೆದಿಲ್ಲ. ಹೀಗಾಗಿ ಶಾಸಕ ಭೈರತಿ ಬಸವರಾಜ್ ವಿರುದ್ದ ತನಿಖೆ ಮುಂದುವರೆದಿರೋದಾಗಿ ಮಾಹಿತಿಯನ್ನು ಉಲ್ಲೇಖಿಸಿದ್ದಾರೆ.  ಇಪ್ಪತ್ತನೇ ಆರೋಪಿ ಅಜಿತ್ ವಿರುದ್ದವೂ ತನಿಖೆ ಮುಂದುವರೆದಿದೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. 


ಇದರಿಂದಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಇಂದು ಶಾಸಕ ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ಅರ್ಜಿ ಬಗ್ಗೆ ಯಾವುದೇ ಆದೇಶ ಬಂದಿಲ್ಲ. ನಾಳೆಯೂ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ಮುಂದುವರಿಯಲಿದೆ. ಬಳಿಕ ಭೈರತಿ ಬಸವರಾಜುಗೆ ನಿರೀಕ್ಷಣಾ ಜಾಮೀನು ಸಿಗುತ್ತೋ ಇಲ್ಲವೋ ಎಂಬುದು ನಿರ್ಧಾರವಾಗಲಿದೆ. 

Bangalore city civil court




ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

MLA Byrathi basavaraju didn't get anticipatory Bail in murder case
Advertisment