/newsfirstlive-kannada/media/media_files/2025/11/03/tunnel-road-in-bangalore02-2025-11-03-13-43-07.jpg)
ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಿಸಲು ಸಿಎಂಗೆ ಐಡಿಯಾ ಕೊಟ್ಟಿದ್ದೇ ನಿತಿನ್ ಗಡ್ಕರಿ!
ಕರ್ನಾಟಕದಲ್ಲಿ ಈಗ ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಗೆ ಹೆಬ್ಬಾಳ ಜಂಕ್ಷನ್ ನಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೂ ಸುರಂಗ ಮಾರ್ಗದ ರಸ್ತೆ ನಿರ್ಮಾಣ ಮಾಡಬೇಕೇ ಬೇಡವೇ ಎಂಬುದು ಕಾಂಗ್ರೆಸ್ ಸರ್ಕಾರ ಹಾಗೂ ಬೆಂಗಳೂರಿನ ಬಿಜೆಪಿ ನಾಯಕರ ಮಧ್ಯೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಬೆಂಗಳೂರಿನ ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಸುರಂಗ ಮಾರ್ಗದ ರಸ್ತೆ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ನಿನ್ನೆ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಸುರಂಗ ರಸ್ತೆ ನಿರ್ಮಾಣದ ವಿರುದ್ಧ ಜನರ ಸಹಿ ಸಂಗ್ರಹ ಅಭಿಯಾನವನ್ನೇ ನಡೆಸಿದ್ದಾರೆ.
ಆದರೇ, ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಗೆ ಸುರಂಗ ಮಾರ್ಗದ ರಸ್ತೆ ನಿರ್ಮಾಣದ ಐಡಿಯಾವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಕೊಟ್ಟಿರೋದು ಬೇರಾರು ಅಲ್ಲ. ಕೇಂದ್ರದ ಹೆದ್ದಾರಿ ಮತ್ತು ಭೂ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ. ಇದನ್ನು ಖುದ್ದಾಗಿ ನಿತಿನ್ ಗಡ್ಕರಿ ಅವರೇ ಹೇಳಿದ್ದಾರೆ. ನಿತಿನ್ ಗಡ್ಕರಿ ಅವರು ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಗೆ ಸುರಂಗ ಮಾರ್ಗದ ರಸ್ತೆ ನಿರ್ಮಾಣ ಮಾಡಿ ಎಂದು ಸಿಎಂ ಸಿದ್ದರಾಮಯ್ಯಗೆ ಐಡಿಯಾ ನೀಡಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಸುರಂಗ ರಸ್ತೆ ನಿರ್ಮಿಸುವಾಗ ಗ್ರಾನೈಟ್ ಕೂಡ ಸಿಗಬಹುದು. ಅದನ್ನು ಮಾರಾಟ ಮಾಡಬಹುದು. ಸುರಂಗ ಮಾರ್ಗದ ರಸ್ತೆ ನಿರ್ಮಾಣದಿಂದ ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಯಾಗುತ್ತೆ. ಸುರಂಗ ರಸ್ತೆಯಲ್ಲಿ ಪ್ರಯಾಣಿಸುವ ವಾಹನಗಳಿಂದ ಟೋಲ್ ಕೂಡ ಸಂಗ್ರಹಿಸಿ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.
ಈ ವಿಡಿಯೋವನ್ನು ಈಗ ಬೆಂಗಳೂರಿನ ಸುರಂಗ ರಸ್ತೆ ನಿರ್ಮಾಣವನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರಿಗೆ ಪ್ರತ್ಯುತ್ತರ ನೀಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಟ್ವೀಟರ್ ಖಾತೆಯಿಂದ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಫಸ್ಟ್, ಪಾಲಿಟಿಕ್ಸ್ ನೆಕ್ಸ್ಟ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಶೀರ್ಷಿಕೆ ನೀಡಿ ವಿಡಿಯೋ ಟ್ವೀಟ್ ಮಾಡಿದ್ದಾರೆ. ನಿತಿನ್ ಗಡ್ಕರಿ ಅವರ ಹೇಳಿಕೆಯ ವಿಡಿಯೋವನ್ನು ಡಿಸಿಎಂ ಡಿಕೆಶಿ ಟ್ವೀಟ್ ಮಾಡಿರುವುದರ ಲಿಂಕ್ ಅನ್ನು ಇಲ್ಲಿ ನೀಡಿದ್ದೇವೆ. ತಾವು ನೋಡಬಹುದು.
Bengaluru first, politics later!
— DK Shivakumar (@DKShivakumar) November 3, 2025
The Tunnel Road is not my personal project - it’s a public initiative for Bengaluru’s future. We had a meeting with Union Minister Shri Nitin Gadkari who advised us and supported on the Tunnel Project as a solution to our city’s traffic woes.… pic.twitter.com/xwlTQXHthr
ಬೆಂಗಳೂರಿನ ಬಿಜೆಪಿ ನಾಯಕರಿಗೆ ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿಯ ನಿತಿನ್ ಗಡ್ಕರಿ ಅವರೇ ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಿಸಲು ಸಲಹೆ ಕೊಟ್ಟಿದ್ದಾರೆ. ಬಿಜೆಪಿ ಆಳ್ವಿಕೆ ಇರುವ ಮಹಾರಾಷ್ಟ್ರದ ಮುಂಬೈನಲ್ಲಿ ಸುರಂಗ ರಸ್ತೆ ನಿರ್ಮಿಸಲಾಗಿದೆ ಎಂದು ತೇಜಸ್ವಿ ಸೂರ್ಯ, ಆರ್.ಅಶೋಕ್ ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತ್ಯುತ್ತರ ನೀಡಿದ್ದಾರೆ.
ಈಗ ನಿತಿನ್ ಗಡ್ಕರಿ ಅವರೇ ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಿಸಲು ಸಿಎಂ ಸಿದ್ದರಾಮಯ್ಯಗೆ ಹೇಳಿದ್ದೇನೆ ಎಂದಿರುವ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ತೇಜಸ್ವಿ ಸೂರ್ಯ, ಆರ್. ಅಶೋಕ್‌ಗೆ ತಿರುಗೇಟು ನೀಡಿದ್ದಾರೆ.
ಆದರೇ, ನಿತಿನ್ ಗಡ್ಕರಿ ಅವರ ಹೇಳಿಕೆಯ ಪೂರ್ತಿ ವಿಡಿಯೋವನ್ನು ಹಾಕದೇ, ಕಟ್ ಅಂಡ್ ಪೇಸ್ಟ್ ವಿಡಿಯೋ ಹಾಕಿದ್ದಾರೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
/filters:format(webp)/newsfirstlive-kannada/media/media_files/2025/11/03/tunnel-road-in-bangalore-2025-11-03-13-45-18.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us