ಮೆಟ್ರೋ ದರ ಏರಿಕೆ ಇಲ್ಲ.. ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರು..!

ಮೆಟ್ರೋ ಪ್ರಯಾಣಿಕರಿಗೆ ಕೊನೆಗೂ ನೆಮ್ಮದಿಯ ಸುದ್ದಿ ಸಿಕ್ಕಿದೆ. ಟಿಕೆಟ್ ದರ ಏರಿಕೆಯಾಗಲಿದೆ ಎಂಬ ಆತಂಕದಲ್ಲಿದ್ದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ. ಸಾರ್ವಜನಿಕರ ಆಕ್ರೋಶ ಮತ್ತು ಸಂಸದರ ಮನವಿಯ ಮೇರೆಗೆ ಕೇಂದ್ರ ಸರ್ಕಾರ ದರ ಏರಿಕೆಗೆ ಬ್ರೇಕ್ ಹಾಕಿದೆ.

author-image
Ganesh Kerekuli
namma metro(3)
Advertisment

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಕೊನೆಗೂ ನೆಮ್ಮದಿಯ ಸುದ್ದಿ ಸಿಕ್ಕಿದೆ. ಟಿಕೆಟ್ ದರ ಏರಿಕೆಯಾಗಲಿದೆ ಎಂಬ ಆತಂಕದಲ್ಲಿದ್ದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ. ಸಾರ್ವಜನಿಕರ ಆಕ್ರೋಶ ಮತ್ತು ಸಂಸದರ ಮನವಿಯ ಮೇರೆಗೆ ಕೇಂದ್ರ ಸರ್ಕಾರ ದರ ಏರಿಕೆಗೆ ಬ್ರೇಕ್ ಹಾಕಿದ್ದು, ಸದ್ಯಕ್ಕೆ ‘ನಮ್ಮ ಮೆಟ್ರೋ’ ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟವಾಗಿದೆ.

ಕೇಂದ್ರ ಸಚಿವರ ಬ್ರೇಕ್!

ನಮ್ಮ ಮೆಟ್ರೋ ದರವನ್ನು ಶೇ. 5ರಷ್ಟು ಏರಿಕೆ ಮಾಡಲು ಬಿಎಂಆರ್‌ಸಿಎಲ್ (BMRCL) ನಿರ್ಧರಿಸಿತ್ತು. ಆದರೆ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರು ಬಿಎಂಆರ್‌ಸಿಎಲ್ ಎಂಡಿ ರವಿಶಂಕರ್ ಅವರಿಗೆ ಇಮೇಲ್ ಮೂಲಕ ಮಹತ್ವದ ಸೂಚನೆ ನೀಡಿದ್ದು, ಸದ್ಯಕ್ಕೆ ಮೆಟ್ರೋ ದರ ಏರಿಕೆ ಮಾಡದಂತೆ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ ಎಂದಿನ ದರದಲ್ಲೇ ಪ್ರಯಾಣಿಕರು ಸಂಚರಿಸಬಹುದಾಗಿದೆ.

ಕಳೆದ ನಾಲ್ಕು ದಿನಗಳ ಹಿಂದಷ್ಟೇ ಸಂಸದ ತೇಜಸ್ವಿ ಸೂರ್ಯ ಅವರು ದೆಹಲಿಯಲ್ಲಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿಯಾಗಿ, ದರ ಏರಿಕೆಗೆ ತಡೆ ನೀಡುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ:ವಾಣಿಜ್ಯ ನಗರಿಯಲ್ಲಿ ಸಾಂಸ್ಕೃತಿಕ ರಸದೌತಣ; ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಅದ್ದೂರಿ ತೆರೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

tejaswi surya Namma metro
Advertisment