ಲೇಡಿ ಫಿಟ್ನೆಸ್‌ ಟ್ರೈನರ್‌ ಮೇಲೆ ಸಾಣೆ ಪ್ರೀತಿ.. ಹರಿಯಾಣದಿಂದ ಬೆಂಗಳೂರಿಗೆ ಓಡೋಡಿ ಬಂದ! ಮುಂದೇನಾಯ್ತು..?

ಇನ್ಸ್ಟಾಗ್ರಾಮ್ ಮೂಲಕ ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ನಿರಂತರ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಸುಧೀರ್ ಕುಮಾರ್ ಎಂಬಾತನನ್ನು ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

author-image
Ganesh Kerekuli
lady fitness trainer love
Advertisment

ಬೆಂಗಳೂರು: ಇನ್ಸ್ಟಾಗ್ರಾಮ್ ಮೂಲಕ ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ನಿರಂತರ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಸುಧೀರ್ ಕುಮಾರ್ ಎಂಬಾತನನ್ನು ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಲೇಡಿ ಫಿಟ್ನೆಸ್ ಹಾಗೂ ನ್ಯೂಟ್ರೀಷಿಯನ್ ಇನ್ಫ್ಲೂಯೆನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯನ್ನು ಇನ್ಸ್ಟಾಗ್ರಾಮ್‌ನಲ್ಲಿ ಫಾಲೋ ಮಾಡಿದ್ದ ಆರೋಪಿ, ನಂತರ ಅಶ್ಲೀಲ ಹಾಗೂ ಲೈಂಗಿಕವಾಗಿ ಪ್ರಚೋದಿಸುವ ಸಂದೇಶಗಳನ್ನು ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿ:ರಾಯಚೂರಿನಲ್ಲಿ ಭೀಕರ ಅಪಘಾತ.. ಸ್ಥಳದಲ್ಲೇ ಪ್ರಾಣಬಿಟ್ಟ ಐವರು..

ಇನ್ಸ್ಟಾಗ್ರಾಮ್ ಮೂಲಕ ಸಂಪರ್ಕ ಸಾಧಿಸಿದ ಆರೋಪಿ, ಬಳಿಕ ವಾಟ್ಸಾಪ್ ಸಂಖ್ಯೆಯನ್ನು ಪಡೆದು ಅಶ್ಲೀಲ ಮೆಸೇಜ್‌ಗಳ ಮೂಲಕ ಕಿರುಕುಳ ಮುಂದುವರಿಸಿದ್ದಾನೆ. ಹರಿಯಾಣದಲ್ಲಿರುವಾಗಲೇ ದೂರುದಾರೆಯ ಕುಟುಂಬ ಸದಸ್ಯರ ಮನೆಗೆ ಬಂದು ಇನ್ಸ್ಟಾಗ್ರಾಮ್‌ನಲ್ಲಿ ಸಂಪರ್ಕ ಸಾಧಿಸಿದ್ದ ಆರೋಪಿಯು, ಮಹಿಳೆಯನ್ನು ಬಿಡದೆ ಬೆಂಬಿಡದೇ ಕಾಡಲು ಶುರು ಮಾಡಿದ್ದಾನೆ.

ನಂತರ ಯುವತಿಯಿಗಾಗಿ ಹರಿಯಾಣದಿಂದ ಕರ್ನಾಟಕಕ್ಕೆ ಪ್ರಯಾಣ ಮಾಡಿದ ಆರೋಪಿ, ಬೆಂಗಳೂರಿಗೆ ಬಂದು ಜಿಮ್ ಹಾಗೂ ಯುವತಿಯ ಸಹೋದ್ಯೋಗಿಗಳ ಬಳಿ ಮಾಹಿತಿ ಕಲೆಹಾಕಲು ಪ್ರಯತ್ನಿಸಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆ ಆತಂಕಗೊಂಡ ಇನ್ಫ್ಲೂಯೆನ್ಸರ್ ದಕ್ಷಿಣ ವಿಭಾಗ ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾಳೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಸುಧೀರ್ ಕುಮಾರ್ ಅನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರಿದಿದೆ.

ಇದನ್ನೂ ಓದಿ:ಕೋಚ್ ಗಂಭೀರ್ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್.. ಅದೆಷ್ಟು ಸರಣಿ ಸೋಲು ಸಹಿಸೋದು..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

instagram love story instagram
Advertisment