/newsfirstlive-kannada/media/media_files/2025/10/03/darshan-2025-10-03-08-43-31.jpg)
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ (Renukaswamy case) ಎರಡನೇ ಬಾರಿಗೆ ಜೈಲು ಸೇರಿರುವ ದರ್ಶನ್​ಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಮೊದಲ ಬಾರಿಗೆ ಜೈಲು ಸೇರಿದಾಗ ದರ್ಶನ್​​ಗೆ (Darshan) ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದಾರೆ ಎಂಬ ಆರೋಪ ಇದೆ. ಅದಕ್ಕೆ ಸಂಬಂಧಿಸಿದ ಕೆಲವು ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಮೂಲಕ ಕೇಸ್​ ಬೆಳಕಿಗೆ ಬಂದಿತ್ತು.
ಇದನ್ನೂ ಓದಿ:ದರ್ಶನ್​ರ ಐಷಾರಾಮಿ ಕಾರುಗಳಿಗೆ ಆಯುಧ ಪೂಜೆ, ಫೋಟೋ ಹಂಚಿಕೊಂಡ ವಿಜಯಲಕ್ಷ್ಮೀ
ನಟ ದರ್ಶನ್, ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಭಾಗಿಯಾಗಿದ್ದ ರಾಜಾತಿಥ್ಯ ಕೇಸ್​​ ಇದಾಗಿದೆ. ಈ ಸಂಬಂಧ ದಾಖಲಾಗಿರುವ ಮೂರು ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ತನಿಖೆ ನಡೆಸಿ ಚಾರ್ಜ್ ಶೀಟ್ ತಯಾರಿ ಮಾಡಿರುವ ಪೊಲೀಸರು ಲೀಗಲ್ ಸೆಲ್​ನಲ್ಲಿ ಕಾನೂನು ಅಭಿಪ್ರಾಯ ಕೇಳಿದ್ದಾರೆ. ಲೀಗಲ್ ಸೆಲ್​ನಿಂದ ಅಭಿಪ್ರಾಯ ಬಂದ ಬೆನ್ನಲ್ಲೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ.
ಒಂದು ಮಾಹಿತಿಯ ಪ್ರಕಾರ ಈ ತಿಂಗಳಾಂತ್ಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಅಧಿಕಾರಿಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ತನಿಖೆ ವರದಿ ಕಾನೂನು ಅಭಿಪ್ರಾಯ ಪಡೆಯಲು ರವಾನೆಯಾಗಿದೆ. ಇದರ ಮಧ್ಯೆ ತನಿಖೆಗೆ ತಡೆ ಕೋರಿ ಓರ್ವ ಆರೋಪಿ ಕೋರ್ಟ್ ಮೊರೆ ಹೋಗಿದ್ದಾನೆ. ತಡೆಯಾಜ್ಞೆ ತೆರವಿಗಾಗಿ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಲು ಪೊಲೀಸರು ನಿರ್ಧಾರ ಮಾಡಿದ್ದಾರೆ.
ಇದನ್ನೂ ಓದಿ: ನನ್ನ ಹಣೆ ಬರಹ ಇದ್ದಂಗೆ ಆಗುತ್ತೆ, ಇಲ್ಲಿಗೆ ಬರಬೇಡ -ವಿಜಯಲಕ್ಷ್ಮೀ ಜೊತೆ ದರ್ಶನ್ ಭಾವುಕ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ