/newsfirstlive-kannada/media/media_files/2025/09/18/bengalore-rain-2-2025-09-18-06-47-03.jpg)
ಬೆಂಗಳೂರು: ಸ್ವಲ್ವ ಬ್ರೇಕ್​​ ತಗೊಂಡಿದ್ದ ವರುಣದೇವ ಮತ್ತೆ ಆರ್ಭಟಿಸಲು ಮುಂದಾಗಿದ್ದಾನೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆಯಾಗಲಿದ್ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆಯಾಗಲಿದೆ?
ಕರ್ನಾಟಕದಾದ್ಯಂತ ಮತ್ತೆ ಮಳೆ ಶುರುವಾಗಿದ್ದು, ಕೆಲವೆಡೆ ಅವಾಂತರಗಳೇ ಸೃಷ್ಟಿಯಾಗಿವೆ. ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕ ಭಾಗಗಳಲ್ಲಿ ಮುಂಗಾರು ಚುರುಕಾಗಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಅದರಂತೆ ಇಂದಿನಿಂದ ಸೆಪ್ಟೆಂಬರ್​ 27ರವರೆಗೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ಉಡುಪಿ ಜಿಲ್ಲೆಯಾದ್ಯಂತ ನೆನ್ನೆ ರಾತ್ರಿ ಧಾರಾಕಾರ ಮಳೆಯಾಗಿದೆ. ತಾಪಮಾನ ಏರಿಕೆ, ಹವಾಮಾನ ವೈಪರಿತದಿಂದಾಗಿ ಉಡುಪಿ ಜಿಲ್ಲೆಯಲ್ಲಿ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಮುಸುಕಿದ ವಾತಾವರಣ ಇದ್ದು ಮಳೆ ಮುಂದುವರೆಯುವ ಸಾಧ್ಯತೆಯಿದೆ.