ದರ್ಶನ್​ ಅಂಡ್​ ಗ್ಯಾಂಗ್​ ಮನೆ ಊಟ ವಿಚಾರ; ಕೋರ್ಟ್​ನಲ್ಲಿ ಮಹತ್ವದ ಬೆಳವಣಿಗೆ..!

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಗೆ ವಾರಕ್ಕೊಮ್ಮೆ ಮನೆ ಊಟ ನೀಡಲು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನ ಪ್ರಶ್ನಿಸಿ ರಾಜ್ಯ ಸರ್ಕಾರ ಹಾಗೂ ಜೈಲು ಅಧಿಕಾರಿಗಳು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು.

author-image
Ganesh Kerekuli
Darshan and pavitra Gowda (2)
Advertisment

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಗೆ ವಾರಕ್ಕೊಮ್ಮೆ ಮನೆ ಊಟ ನೀಡಲು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನ ಪ್ರಶ್ನಿಸಿ ರಾಜ್ಯ ಸರ್ಕಾರ ಹಾಗೂ ಜೈಲು ಅಧಿಕಾರಿಗಳು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು.

ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನ ಕಾಯ್ದಿರಿಸಿದೆ. ಕೆಲ ವಿಚಾರಣಾಧೀನ ಕೈದಿಗಳಿಗೆ ಮನೆ ಊಟ ನೀಡಲಾಗ್ತಿದೆ ಅನ್ನೋ ವಕೀಲ ಸುನೀಲ್ ವಾದಕ್ಕೆ ಹೈಕೋರ್ಟ್ ಕೆಲ ಪ್ರಶ್ನೆಗಳನ್ನ ಮಾಡಿದೆ. ನಿಮ್ಮದೇ ಕೇಸ್​ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಸವಲತ್ತು ನೀಡದಂತೆ ಸೂಚಿಸಿದೆಯಲ್ಲ.

ಮೆಡಿಕಲ್ ಬೋರ್ಡ್ ಮನೆ ಊಟ ನೀಡಬೇಕೆಂದು ಸೂಚಿಸಿದೆಯೇ.. ಕೈದಿಗಳಿಗೆ ಮನೆ ಊಟದ ಬಗ್ಗೆ ಮಾರ್ಗಸೂಚಿ ರೂಪಿಸಲಾಗುತ್ತೆ ಅಂತ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದ್ದು ಆದೇಶವನ್ನ ಕಾಯ್ದಿರಿಸಿದೆ.

ಇದನ್ನೂ ಓದಿ: ಸಂತ್ರಸ್ತ ಕುಟುಂಬಕ್ಕೆ ಕಮಲಾಕರ ಭಟ್ 1 ಕೋಟಿ ಪರಿಹಾರ ನೀಡುವಂತೆ ಪ್ರತಿಭಟನೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Actor Darshan Pavitra Gowda
Advertisment