/newsfirstlive-kannada/media/media_files/2025/10/24/bangalore-city-civil-court-2025-10-24-15-45-48.jpg)
ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್
ದರ್ಶನ್ ಅಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನಕುಮಾರ್ ಅವರು ಕೋರ್ಟ್ ಗೆ ಮೆಮೋ ಒಂದು ಅನ್ನು ಸಲ್ಲಿಸಿದ್ದಾರೆ. ಇದರಲ್ಲಿ ಉದ್ದೇಶಪೂರ್ವಕವಾಗಿಯೇ ಆರೋಪಿಗಳು ಕೋರ್ಟ್ ನಲ್ಲಿ ವಿಚಾರಣೆ ವಿಳಂಬವಾಗುವಂತೆ ಮಾಡುತ್ತಿದ್ದಾರೆ. ಆದಷ್ಟು ಬೇಗ ವಿಚಾರಣೆ ಮುಗಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಪ್ರಕರಣದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಕೋರಿ ಅರ್ಜಿಗಳನ್ನು ಸಲ್ಲಿಸುವ ಮೂಲಕ ವಿಚಾರಣೆ ವಿಳಂಬ ಮಾಡುವ ಯತ್ನ ಮಾಡುತ್ತಿದ್ದಾರೆ ಎಂದು ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಕೋರ್ಟ್ ಗೆ ಮೆಮೊ ಸಲ್ಲಿಸಿದ್ದಾರೆ.
/filters:format(webp)/newsfirstlive-kannada/media/media_files/2025/08/14/darshan_gang-2025-08-14-13-33-48.jpg)
ಕೇಸ್ ನಿಂದ ತಮ್ಮನ್ನು ಮುಕ್ತಗೊಳಿಸುವಂತೆ ಸಲ್ಲಿಸುವ ಅರ್ಜಿಗಳನ್ನೆಲ್ಲಾ ಎಲ್ಲ ಆರೋಪಿಗಳು ಒಟ್ಟಿಗೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು . ಆದರೇ, ಈಗ ಒಬ್ಬರ ನಂತರ ಒಬ್ಬರು ಕೇಸ್ ನಿಂದ ಮುಕ್ತಿಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸುತ್ತಿದ್ದಾರೆ. ಆರೋಪಿಗಳ ಪರ ವಕೀಲರಿಂದ ಉದ್ದೇಶಪೂರ್ವಕವಾಗಿ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ. ಕಳೆದ 2 ತಿಂಗಳಿನಿಂದ ಕೋರ್ಟ್ ಸಮಯವನ್ನು ಹಾಳು ಮಾಡುವ ಯತ್ನ ನಡೆಯುತ್ತಿದೆ . ಹೀಗಾಗಿ ಕೆಳ ನ್ಯಾಯಾಲಯದಲ್ಲಿ ಆದಷ್ಟು ಬೇಗ ವಿಚಾರಣೆ ಆರಂಭಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಕಳೆದ 2 ತಿಂಗಳಿನಿಂದ ನಡೆದ ವಿಳಂಬ ಪ್ರಕ್ರಿಯೆಯನ್ನು ಉಲ್ಲೇಖಿಸಿ ಕೋರ್ಟ್ ಗೆ ಮನವಿಯನ್ನು ಸಲ್ಲಿಕೆ ಮಾಡಲಾಗಿದೆ. ಕೊಲೆ ಕೇಸ್ ನಲ್ಲಿ ರಾಜ್ಯ ಸರ್ಕಾರದಿಂದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕವಾಗಿರುವ ಪ್ರಸನ್ನಕುಮಾರ್ ಅವರು ಕೋರ್ಟ್ ಗೆ ಈ ಮೆಮೊ ಸಲ್ಲಿಸಿದ್ದಾರೆ.
/filters:format(webp)/newsfirstlive-kannada/media/media_files/2025/10/24/bangalore-city-civil-court02-2025-10-24-15-47-47.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us