ರೋಹಿಣಿ ಸಿಂಧೂರಿಗೆ ಬಿಗ್ ಶಾಕ್: ಡಿ. ರೂಪಾ ಸಲ್ಲಿಸಿದ್ದ ಮಾನನಷ್ಟ ಕೇಸ್​​ಗೆ ಹೊಸ ತಿರುವು

ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಾನೂನು ಹೋರಾಟದ ವಿಚಾರದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ಡಿ. ರೂಪಾ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸುವಂತೆ ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.

author-image
Ganesh Kerekuli
Rohini and D Roopa
Advertisment

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಾನೂನು ಹೋರಾಟದ ವಿಚಾರದಲ್ಲಿ ರೋಹಿಣಿ ಸಿಂಧೂರಿ ಅವರಿಗೆ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ಡಿ. ರೂಪಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು (Defamation Case) ರದ್ದುಪಡಿಸುವಂತೆ ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಇದರಿಂದಾಗಿ ವಿಚಾರಣಾ ನ್ಯಾಯಾಲಯದಲ್ಲಿ (Magistrate Court) ರೋಹಿಣಿ ಸಿಂಧೂರಿ ವಿರುದ್ಧದ ಮಾನನಷ್ಟ ಪ್ರಕರಣದ ವಿಚಾರಣೆ ಮುಂದುವರಿಯಲಿದೆ.

ಪ್ರಕರಣದ ಹಿನ್ನೆಲೆಯೇನು?

ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಐಪಿಎಸ್ ಅಧಿಕಾರಿ ಡಿ. ರೂಪಾ ಅವರು ಬೆಂಗಳೂರಿನ 7ನೇ ಎಸಿಎಂಎಂ (ACMM) ಕೋರ್ಟ್‌ನಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಈ ದೂರು ರದ್ದುಪಡಿಸುವಂತೆ ಕೋರಿ ರೋಹಿಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ರೋಹಿಣಿ ಅವರ ಅರ್ಜಿಯನ್ನು ತಿರಸ್ಕರಿಸಿದೆ.

ರೂಪಾ ಮೌದ್ಗಿಲ್ ದೂರಿನಲ್ಲೇನಿದೆ?

ದಿನಾಂಕ: 2023ರ ಫೆಬ್ರವರಿ 19 ರಂದು ರೋಹಿಣಿ ಸಿಂಧೂರಿ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. 
ಸಾಮಾಜಿಕ ಜಾಲತಾಣ: ಆ ಹೇಳಿಕೆಯನ್ನು ನಂತರ 'ಎಕ್ಸ್' (ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡಿದ್ದರು. ಅದರಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪಗಳನ್ನು ಮಾಡಲಾಗಿತ್ತು ಎಂದು ರೂಪಾ ದೂರಿದ್ದಾರೆ.

ಇದನ್ನೂ ಓದಿ: ಇವತ್ತು ಮಾನಸಿಕ ನೆಮ್ಮದಿಯಿಲ್ಲ, ಜಿಗುಪ್ಸೆ -ಈ ರಾಶಿಯವರಿಗೆ ಎಚ್ಚರ

ವೈರಲ್ ಪೋಸ್ಟ್: ರೋಹಿಣಿ ಸಿಂಧೂರಿ ಅವರ ಆ ಪೋಸ್ಟ್ ಅನ್ನು ಸುಮಾರು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದರು.
ವರ್ಗಾವಣೆ ಶಿಕ್ಷೆ: ರೋಹಿಣಿ ಅವರ ಈ ಹೇಳಿಕೆಯ ನಂತರ ತಮ್ಮನ್ನು ಹುದ್ದೆ ತೋರಿಸದೆ ವರ್ಗಾವಣೆ ಮಾಡಲಾಗಿತ್ತು. ಆರು ತಿಂಗಳ ಕಾಲ ಸಂಬಳವಿಲ್ಲದೆ ಮನೆಯಲ್ಲಿ ಉಳಿಯುವಂತಾಯಿತು ಎಂದು ರೂಪಾ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಮಾನಸಿಕ ವೇದನೆ: ರೋಹಿಣಿ ಅವರ ಹೇಳಿಕೆಯಿಂದಾಗಿ ತಮಗೆ ಮಾತ್ರವಲ್ಲದೆ, ತಮ್ಮ ಪತಿ, ತಂಗಿ ಮತ್ತು ಮಕ್ಕಳಿಗೂ ಮಾನಸಿಕ ಯಾತನೆ ಉಂಟಾಗಿದೆ ಎಂದು ಡಿ. ರೂಪಾ ಮೌದ್ಗಿಲ್ ಅವರು ಮಾನನಷ್ಟ ಮೊಕದ್ದಮೆಯಲ್ಲಿ ಆರೋಪಿಸಿದ್ದಾರೆ.

ಕೆಳಹಂತದ ನ್ಯಾಯಾಲಯ ಈಗಾಗಲೇ ರೋಹಿಣಿ ಸಿಂಧೂರಿ ಅವರಿಗೆ ನೋಟಿಸ್ ನೀಡಿತ್ತು. ಇದೀಗ ಹೈಕೋರ್ಟ್ ಕೂಡ ಅರ್ಜಿ ವಜಾಗೊಳಿಸಿರುವುದರಿಂದ ಪ್ರಕರಣದ ವಿಚಾರಣೆ ತೀವ್ರಗೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ: ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಸೂರ್ಯ ಪಡೆ.. ಭಾರತ ತಂಡಕ್ಕೆ ಹೀನಾಯ ಸೋಲು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

D Roopa Moudgil Rohini Sindhuri
Advertisment