/newsfirstlive-kannada/media/media_files/2025/12/21/siddaramaiah-7-2025-12-21-16-18-55.jpg)
ಬೆಂಗಳೂರು: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ ಒಲಿಂಪಿಕ್ಸ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಿಂಪಿಕ್ಸ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, 1958 ರಲ್ಲಿ ಪ್ರಾರಂಭವಾದ ಒಲಿಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ.
ಇದನ್ನೂ ಓದಿ: ನೈಟ್ ಶಿಫ್ಟ್ ಕೆಲಸ ಡೇಂಜರ್​.. ಆತಂಕಕಾರಿ ವಿಷಯ ಬಿಚ್ಚಿಟ್ಟ ಹೊಸ ಸಂಶೋಧನೆ..!
ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ. ನನ್ನ ಅವಧಿಯಲ್ಲಿಯೇ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನಾನೇ ನೆರವೇರಿಸಿದ್ದೇನೆ. ಇಡೀ ದೇಶದಲ್ಲಿಯೇ ಆಂಧ್ರ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯು ಎಲ್ಲಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದರು.
ಕ್ರೀಡಾ ಕ್ಷೇತ್ರಕ್ಕೆ ಸರ್ಕಾರದ ಆದ್ಯತೆ
ನಮ್ಮ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ನಗದು ಬಹುಮಾನವನ್ನು ಘೋಷಿಸಲಾಗಿದೆ. ಅಂತೆಯೇ ಬೆಳ್ಳಿ ಪದಕ ಪಡೆದರೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದರೆ 3 ಕೋಟಿ ರೂ. ನಗದು ಬಹುಮಾನವನ್ನು ಸರ್ಕಾರ ಘೋಷಿಸಿದೆ. ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದರು.
ಇದನ್ನೂ ಓದಿ:‘ಟಾಕ್ಸಿಕ್’ ಚಿತ್ರದಿಂದ ನಟಿ ಕಿಯಾರಾ ಅಡ್ವಾಣಿ ಫಸ್ಟ್ ಲುಕ್ ರಿಲೀಸ್
ಕ್ರೀಡೆಯಲ್ಲಿ ಕ್ರೀಡಾಸ್ಫೂರ್ತಿ ಅವಶ್ಯಕ
ಕಠಿಣ ಪರಿಶ್ರಮ ಹಾಗೂ ಗುರಿಸಾಧನೆ ಮಾಡುವ ಛಲವಿದ್ದರೆ, ಕರ್ನಾಟಕದ ಕ್ರೀಡಾಪಟು ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲಬಹುದಾಗಿದೆ. ಕರ್ನಾಟಕದ ಕ್ರೀಡಾಪಟುಗಳು ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ. ಕ್ರೀಡೆಯಲ್ಲಿ ಕ್ರೀಡಾಸ್ಫೂರ್ತಿ ಅತ್ಯಂತ ಅವಶ್ಯಕ. ಗುರಿಸಾಧನೆಯೇ ಜೀವನದ ಧ್ಯೇಯವಾಗಬೇಕು ಎಂದರು.
ಕ್ರೀಡಾ ಮೀಸಲಾತಿಯಡಿ ಸರ್ಕಾರಿ ಉದ್ಯೋಗ: ಜನವರಿ 2026 ರಲ್ಲಿ ಆದೇಶ
ಕ್ರೀಡಾಪಟುಗಳಿಗೆ ಸರ್ಕಾರದ ನೇಮಕಾತಿಯಲ್ಲಿಯೂ ಮೀಸಲಾತಿಯನ್ನು ಒದಗಿಸಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ. 3 ರಷ್ಟು ಹಾಗೂ ಇನ್ನುಳಿದ ಇಲಾಖೆಗಳಲ್ಲಿ ಶೇ. 2 ರಷ್ಟು ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು. ಜನವರಿಯಲ್ಲಿ ಕ್ರೀಡಾಮೀಸಲಾತಿಯಡಿಯಲ್ಲಿ ಸರ್ಕಾರಿ ಉದ್ಯೋಗದ ನೇಮಕಾತಿಗೆ ಸರ್ಕಾರಿ ಆದೇಶವನ್ನು ಹೊರಡಿಸಲಾಗುತ್ತದೆ. ಆದ್ದರಿಂದ ಹೆಚ್ಚಿನ ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಭಾಗಿಯಾಗಬೇಕೆಂದು ತಿಳಿಸಿದರು.
ಇದನ್ನೂ ಓದಿ: ಮಗಳ ಹುಟ್ಟುಹಬ್ಬಕ್ಕೆ ಕೇಕ್ ಕೊಂಡೊಯ್ತಿದ್ದ ಅಪ್ಪ ಹಠಾತ್ ನಿಧನ.. ಕಣ್ಣೀರಿಟ್ಟ ಶಾಸಕ ಟೆಂಗಿನಕಾಯಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us