/newsfirstlive-kannada/media/media_files/2026/01/12/gba-election-by-june-30-2026-2026-01-12-13-37-21.jpg)
ಬೆಂಗಳೂರಿನ ಐದು ಪಾಲಿಕೆಗೂ ಜೂನ್ 30 ರೊಳಗೆ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಆದೇಶ
ಜೂನ್,30, 2026 ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲ ಐದು ಪಾಲಿಕೆಗೆಳಿಗೆ ಚುನಾವಣಾ ಪ್ರಕ್ರಿಯೆ ಮುಗಿಸಲು ಸುಪ್ರೀಂಕೋರ್ಟ್ ಆದೇಶ ನೀಡಿದೆ. ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿಂದ ಮಹತ್ವದ ನಿರ್ದೇಶನ ನೀಡಲಾಗಿದೆ.
ಫೆಬ್ರವರಿ 20 ರೊಳಗೆ ವಾರ್ಡವಾರು ಅಂತಿಮಮೀಸಲಾತಿ ಪಟ್ಟಿ ಪ್ರಕಟಿಸಲು ಸೂಚನೆಯನ್ನು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೀಡಿದೆ. ಸುಪ್ರೀಂಕೋರ್ಟ್ ನ ಸಿಜೆಐ ಸೂರ್ಯಕಾಂತ್ ಪೀಠದಿಂದ ಆದೇಶ ನೀಡಲಾಗಿದೆ.
ಮೀಸಲಾತಿ ಅಂತಿಮ ಪಟ್ಟಿ ಪ್ರಕಟಿಸುವುದು ಇನ್ನೊಂದು ತಿಂಗಳಲ್ಲಿ ಪೂರ್ಣವಾಗುತ್ತೆ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ರಾಜ್ಯ ಸರ್ಕಾರದ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡನೆ ಮಾಡಿದ್ದರು.
ಗ್ರೇಟರ್ ಬೆಂಗಳೂರು ಅಥಾರಿಟಿಗೆ ಚುನಾವಣೆ ನಡೆಸಲು ಮತ್ತೆ ಯಾವುದೇ ಕಾಲಾವಕಾಶ ವಿಸ್ತರಣೆಯನ್ನು ಮತ್ತೆ ನೀಡಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಅಂತಿಮ ಮತದಾರರ ಪಟ್ಟಿಯನ್ನು 2026ರ ಮಾರ್ಚ್ 16 ರೊಳಗೆ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ, ಸುಪ್ರೀಂಕೋರ್ಟ್ ಗೆ ತಿಳಿಸಿದೆ.
ಮೇ ತಿಂಗಳ ಅಂತ್ಯದೊಳಗೆ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗವು ಸುಪ್ರೀಂಕೋರ್ಟ್ ಗೆ ತಿಳಿಸಿತು. ಶಾಲಾ ಕಾಲೇಜುಗಳ ಪರೀಕ್ಷೆಯ ನಂತರ ಶಾಲಾ ಕಾಲೇಜುಗಳ ಕಟ್ಟಡಗಳು ಚುನಾವಣೆಗೆ ಲಭ್ಯವಾಗುತ್ತಾವೆ ಎಂದು ಚುನಾವಣಾ ಆಯೋಗ ಸುಪ್ರೀಂಕೋರ್ಟ್ ಗೆ ಹೇಳಿದೆ.
ಮೇ, 26ರ ನಂತರ ಪರೀಕ್ಷೆಗಳು ಮುಗಿಯುತ್ತಿದ್ದಂತೆ, ಚುನಾವಣೆ ನಡೆಸುತ್ತೇವೆ ಎಂದು ಚುನಾವಣಾ ಆಯೋಗ ಸುಪ್ರೀಂಕೋರ್ಟ್ ತಿಳಿಸಿದೆ.
/filters:format(webp)/newsfirstlive-kannada/media/media_files/2025/08/04/supreme-court-2025-08-04-13-18-14.jpg)
ಶಾಲಾ ಕಾಲೇಜುಗಳ ಪರೀಕ್ಷೆಗಳ ಮುಗಿಯುತ್ತಿದ್ದಂತೆ, ಚುನಾವಣೆ ಮುಗಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಎಂಥದ್ದೇ ಪರಿಸ್ಥಿತಿಯಲ್ಲೂ ಜಿಬಿಎ ಚುನಾವಣೆಯನ್ನು 2026ರ ಜೂನ್ 30 ರೊಳಗೆ ಮುಗಿಸಬೇಕೆಂದು ಸುಪ್ರೀಂಕೋರ್ಟ್ ಇಂದು ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ ಈ ವರ್ಷದ ಜೂನ್ 30 ರೊಳಗೆ ಜಿಬಿಎ ಅಧೀನದ ಎಲ್ಲ ಐದು ಪಾಲಿಕೆಗಳಿಗೂ ಚುನಾವಣೆ ನಡೆಯಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us