/newsfirstlive-kannada/media/media_files/2025/10/25/techie-priyanaka-death-2025-10-25-15-01-06.jpg)
ರಾಜ್ಯದಲ್ಲಿ ರಸ್ತೆ ಗುಂಡಿಗಳು ವಾಹನ ಸವಾರರ ಜೀವ ಬಲಿ ಪಡೆಯುವ ದುರಂತಗಳು ಮುಂದುವರಿದಿವೆ. ಬೆಂಗಳೂರು ನಗರದ ಬಳಿಕ ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ರಸ್ತೆಗುಂಡಿಗಳಿಂದ ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಬೈಕ್ ನಲ್ಲಿ ಹೋಗುತ್ತಿದ್ದವರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಜೀವವನ್ನೇ ಕಳೆದುಕೊಳ್ಳಬೇಕಾದ ದಾರುಣ ಪರಿಸ್ಥಿತಿ ಬಂದಿದೆ. ನೆಲಮಂಗಲ ತಾಲ್ಲೂಕಿನ ಮಾದನಾಯಕನಹಳ್ಳಿ- ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಟೆಕ್ಕಿ ಪ್ರಿಯಾಂಕ ಹಾಗೂ ಈಕೆಯ ಸೋದರ ಬೈಕ್ ನಲ್ಲಿ ಹೋಗುತ್ತಿದ್ದರು. ಹುಸ್ಕೂರು ಎಪಿಎಂಸಿ ರಸ್ತೆಯಿಂದ ಮಾದಾವರಕ್ಕೆ ತೆರಳುತ್ತಿದ್ದರು. ರಸ್ತೆ ಕಾಮಗಾರಿಯಿಂದ ರಸ್ತೆ ಸಂಪೂರ್ಣ ಹದಗೆಟ್ಟಿತ್ತು . ಈ ವೇಳೆ ರಸ್ತೆ ಗುಂಡಿ ತಪ್ಪಿಸಲು ಬೈಕ್ ಓಡಿಸುತ್ತಿದ್ದ ಟೆಕ್ಕಿ ಪ್ರಿಯಾಂಕ ಅಣ್ಣ ಯತ್ನಿಸಿದ್ದಾರೆ. ಈ ವೇಳೆ ಪ್ರಿಯಾಂಕ ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಪ್ರಿಯಾಂಕ ಮೇಲೆ ಎದುರಿನಿಂದ ಬಂದ ಲಾರಿ ಹರಿದಿದೆ. ಪ್ರಿಯಾಂಕ ತಲೆ ಮೇಲೆ ಲಾರಿ ಹರಿದಿದ್ದರಿಂದ ಪ್ರಿಯಾಂಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕೇಸ್ ದಾಖಲಿಸಿಕೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
/filters:format(webp)/newsfirstlive-kannada/media/media_files/2025/10/25/madanayakana-halli-police-station-2025-10-25-15-01-22.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us