/newsfirstlive-kannada/media/media_files/2025/11/10/actor-dhanveer-1-2025-11-10-10-30-45.jpg)
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಸ್ಯಾಂಡಲ್​ವುಡ್​ ನಟ ಧನ್ವೀರ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿಗೆ ಸಂಬಂಧಿಸಿದ ಕೆಲವು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ. ಶಂಕಿತ ಉಗ್ರನಿಗೆ, ವಿಕೃತ ಕಾಮಿ ಉಮೇಶ್ ರೆಡ್ಡಿ ಸೇರಿದಂತೆ ಅನೇಕ ಘೋರ ಅಪರಾಧಗಳನ್ನ ಮಾಡಿ ಜೈಲು ಸೇರಿರುವ ಕೆಲವು ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ವಿಡಿಯೋ ಅದಾಗಿದೆ.
ಈ ವಿಡಿಯೋ ವೈರಲ್ ಹಿಂದೆ ದರ್ಶನ್ ಆಪ್ತ, ನಟ ಧನ್ವೀರ್ ಇದ್ದಾರೆ ಎಂಬ ಅನುಮಾನ ಪೊಲೀಸರಿಗೆ ಮೂಡಿದೆ. ಜೈಲಿನ ವಿಡಿಯೋವನ್ನು ಧನ್ವೀರ್ ರಿಲೀಸ್ ಮಾಡಿದ್ದಾರೆ ಎಂಬ ಅನುಮಾನ ವ್ಯಕ್ತಪಡಿಸಿರುವ ಸಿಸಿಬಿ, ನಟನನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us