/newsfirstlive-kannada/media/media_files/2025/08/01/prajwal-revanna-case-2025-08-01-12-53-38.jpg)
ಬೆಂಗಳೂರು: ಜಾಮೀನು ನಿರೀಕ್ಷೆಯಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna) ಮತ್ತೆ ಹಿನ್ನಡೆಯಾಗಿದೆ. ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿಡಲು ನಿರಾಕರಿಸಿರುವ ಹೈಕೋರ್ಟ್, ಅರ್ಜಿ ವಜಾ ಮಾಡಿದೆ.
ಕೆಳಹಂತದ ನ್ಯಾಯಾಲಯವು ತಮಗೆ ನೀಡಿರುವ ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಮನೆ ಕೆಲಸದಾಕೆಯ ಮೇಲೆ ಅತ್ಯಾ*ರ ನಡೆಸಿದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಿತಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ಮಂಜೂರು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಮತ್ತೆ ಸಾರ್ವಜನಿಕವಾಗಿ ಗಲ್ಲಿಗೇರಿಸಿ ವಿಕೃತಿ : 13 ವರ್ಷದ ಬಾಲಕನಿಂದ ಗುಂಡು ಹಾರಿಸಿ ಹತ್ಯೆ!
ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ಪೀಠ ಜಾಮೀನು ನೀಡಲು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಸದ್ಯಕ್ಕೆ ಜಾಮೀನು ಲಭ್ಯವಾಗುವುದಿಲ್ಲ ಎಂದು ಕೋರ್ಟ್ ಹೇಳಿದೆ.
ಕೆಳ ನ್ಯಾಯಾಲಯದ ತೀರ್ಪು ಏನು?
ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಆಗಸ್ಟ್ 2025ರಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಜ್ವಲ್​​ಗೆ ಜೀವಿತಾವಧಿ ಕಠಿಣ ಜೈಲು ಶಿಕ್ಷೆ ಮತ್ತು 11 ಲಕ್ಷಕ್ಕೂ ಅಧಿಕ ವಿಧಿಸಿ ಆದೇಶ ನೀಡಿದೆ. ವಿಧಿಸಲಾಗಿರುವ ದಂಡದ ಬಹುಪಾಲನ್ನು ಸಂತ್ರಸ್ತೆಗೆ ನೀಡುವಂತೆ ಕೋರ್ಟ್ ಹೇಳಿದೆ.
ವಿಶೇಷ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ, ಹೈಕೋರ್ಟ್​ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ಬಾಕಿ ಇರುವಾಗಲೇ ತಮಗೆ ವಿಧಿಸಲಾಗಿರುವ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು, ಜಾಮೀನು ನೀಡುವಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.
ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us