ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನಲೆಯಲ್ಲಿ ಸಂಚಾರ ನಿರ್ಬಂಧ, ಈ ಮಾರ್ಗಗಳನ್ನು ನಾಳೆ ಅವೈಡ್ ಮಾಡಿ ಎಂದ ಪೊಲೀಸರು

ಪ್ರಧಾನಿ ಮೋದಿ ನಾಳೆ(ಆಗಸ್ಟ್ 10) ಸಿಲಿಕಾನ್ ಸಿಟಿ ಬೆಂಗಳೂರಿಗೆ ಬರುತ್ತಿದ್ದಾರೆ. ಮೋದಿ ಭೇಟಿಯ ಹಿನ್ನಲೆಯಲ್ಲಿ ನಾಳೆ ಬೆಂಗಳೂರಿನಲ್ಲಿ ಮೋದಿ ಸಂಚರಿಸುವ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಯಾವ್ಯಾವ ಮಾರ್ಗಗಳಲ್ಲಿ ಟ್ರಾಫಿಕ್ ನಿರ್ಬಂಧ ಇದೆ ಎಂಬ ವಿವರ ಇಲ್ಲಿದೆ ನೋಡಿ.

author-image
Chandramohan
PM NARENDR MODI2
Advertisment
  • ನಾಳೆ(ಆಗಸ್ಟ್ 10) ಮೋದಿ ಭೇಟಿ ಹಿನ್ನಲೆ, ಟ್ರಾಫಿಕ್ ನಿರ್ಬಂಧ
  • ಪ್ರಧಾನಿ ಮೋದಿ ಸಂಚರಿಸುವ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧ

       ನಾಳೆ(ಆಗಸ್ಟ್  10) ಪ್ರಧಾನಿ ಮೋದಿ ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಭಾನುವಾರ ಹಳದಿ ಮೆಟ್ರೋ ಮಾರ್ಗ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ  ಪ್ರಧಾನಿ ಮೋದಿ ಸೇರಿದಂತೆ ಗಣ್ಯ ವ್ಯಕ್ತಿಗಳು, ಸಾವಿರಾರು ಜನ ಸೇರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. 
ಬೆಳಿಗ್ಗೆ ಪ್ರಧಾನಿ ಮೋದಿ ಅವರು ಬೆಂಗಳೂರಿನ ಎಚ್‌ಎಎಲ್ ಏರ್ ಪೋರ್ಟ್ ಗೆ ಬಂದಿಳಿಯಲಿದ್ದಾರೆ. ಅಲ್ಲಿಂದ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಮೇಖ್ರಿ ಸರ್ಕಲ್ ಬಳಿ  ಇರುವ ಏರ್ ಪೋರ್ಸ್ ಕಮ್ಯಾಂಡ್ ಸೆಂಟರ್ ಗೆ ಬರುತ್ತಾರೆ. ಬಳಿಕ ಮೇಖ್ರಿ ಸರ್ಕಲ್ ನಿಂದ ಚಾಲುಕ್ಯ ಸರ್ಕಲ್ ಮೂಲಕ ರಸ್ತೆ ಮಾರ್ಗವಾಗಿ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೆ ತೆರಳಿ ವಂದೇ ಭಾರತ್ ಟ್ರೇನ್ ಗಳಿಗೆ ಚಾಲನೆ ನೀಡುತ್ತಾರೆ. ಬಳಿಕ ರಸ್ತೆ ಮಾರ್ಗವಾಗಿ ಆರ್‌.ವಿ. ರಸ್ತೆಯ ರಾಗಿಗುಡ್ಡದ  ಬಳಿಗೆ ತೆರಳಿ ಆರ್‌.ವಿ. ರಸ್ತೆ-  ಬೊಮ್ಮಸಂದ್ರ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡುವರು. ಬಳಿಕ ಐಐಟಿ ಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ  ಭಾಗಿಯಾಗುತ್ತಾರೆ. 
ಬೆಳಗ್ಗೆ 8.30 ರಿಂದ 12ರವರೆಗೆ ಸಂಚಾರ ನಿರ್ಬಂಧದ ಮಾರ್ಗಗಳು ಹೀಗಿವೆ. 
* ಮಾರೇನಹಳ್ಳಿ ಮುಖ್ಯ ರಸ್ತೆಯ ರಾಜಲಕ್ಷ್ಮೀ ಜಂಕ್ಷನ್ ನಿಂದ ಮಾರೇನಹಳ್ಳಿ 18ನೇ ಮುಖ್ಯ ರಸ್ತೆಯವರೆಗೆ
* ಮಾರೇನಹಳ್ಳಿ ಈಸ್ಟ್ ಎಂಡ್ ಮುಖ್ಯ ರಸ್ತೆ ಜಂಕ್ಷನ್ ನಿಂದ ಅರವಿಂದ ಜಂಕ್ಷನ್ ವರೆಗೆ
ಬೆಳಗ್ಗೆ 9:30 ರಿಂದ ಮಧ್ಯಾಹ್ನ 2:30 ರವರೆಗೆ ನಿರ್ಬಂಧಿತ ರಸ್ತೆಗಳು
* ಸಿಲ್ಕ್ ಬೋರ್ಡ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈ ಓವರ್ ಮತ್ತು ಹೊಸೂರು ರಸ್ತೆಯ ಮೂಲಕ ಹೊಸೂರು ಕಡೆಗೆ
* ಹೊಸೂರು ಕಡೆಯಿಂದ ಬೆಂಗಳೂರು ನಗರದ ಕಡೆಗೆ
* ಎಲೆಕ್ಟ್ರಾನಿಕ್ ಸಿಟಿ 1ನೇ ಹಂತದ ಇನ್‌ಫೋಸಿಸ್ ಅವೆನ್ಯೂ, ವೇಲಾಂಕಣಿ ರಸ್ತೆ, ಹೆಚ್.ಪಿ. ಅವೆನ್ಯೂ ರಸ್ತೆಗಳಲ್ಲಿ ನಿರ್ಬಂಧ

ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗಗಳು
* ಮಾರೇನಹಳ್ಳಿ ಮುಖ್ಯ ರಸ್ತೆಯ ರಾಜಲಕ್ಷ್ಮಿ ಜಂಕ್ಷನ್ ನಿಂದ ಮಾರೇನಹಳ್ಳಿ 18 ನೇ ಮುಖ್ಯ ರಸ್ತೆಯ ಮಾರ್ಗವಾಗಿ ಜಯದೇವ ಕಡೆಗೆ ಸಂಚರಿಸುವ ವಾಹನ ಸವಾರರು ಬನಶಂಕರಿ ಬಸ್ ನಿಲ್ದಾಣದ ಕಡೆಯಿಂದ ಸಾರಕ್ಕಿ ಮಾರ್ಕೆಟ್ ರಸ್ತೆ/9ನೇ ಕ್ರಾಸ್ ರಸ್ತೆಯಲ್ಲಿ ಎಡ ತಿರುವು ಪಡೆದು ಐ.ಜಿ ಸರ್ಕಲ್, ಆರ್.ವಿ. ಡೆಂಟಲ್ ಜಂಕ್ಷನ್ ಮಾರ್ಗವಾಗಿ 8ನೇ ಮುಖ್ಯ ರಸ್ತೆ 9ನೇ ಕ್ರಾಸ್ ರಸ್ತೆ ಜಂಕ್ಷನ್ ಮೂಲಕ ಜಯದೇವ ಕಡೆಗೆ ಸಂಚರಿಸಬಹುದಾಗಿರುತ್ತದೆ ಹಾಗೂ ಸಾರಕ್ಕಿ ಜಂಕ್ಷನ್ ಔಟರ್ ರಿಂಗ್ ರಸ್ತೆಯ ಮೂಲಕ ಸಹ ಬನ್ನೇರುಘಟ್ಟ ರಸ್ತೆ ಕಡೆಗೆ ಚಲಿಸಬಹುದು
* ನಾಲ್ಕನೇ ಮುಖ್ಯ ರಸ್ತೆ ಕಡೆಯಿಂದ ಜಯದೇವ ಕಡೆಗೆ ಸಂಚರಿಸುವ ವಾಹನ ಸವಾರರು ರಾಜಲಕ್ಷ್ಮೀ ಜಂಕ್ಷನ್ ನಲ್ಲಿ ಬಲ ತಿರುವು ಪಡೆದು ಸಾರಕ್ಕಿ ಮುಖ್ಯರಸ್ತೆಯಲ್ಲಿ ಎಡ ತಿರುವು ಪಡೆದುಕೊಂಡು ಐ.ಜಿ ಸರ್ಕಲ್ ಆರ್.ವಿ. ಡೆಂಟಲ್ ಮಾರ್ಗವಾಗಿ 8ನೇ ಮುಖ್ಯ ರಸ್ತೆ 9ನೇ ಕ್ರಾಸ್ ರಸ್ತೆ ಜಂಕ್ಷನ್ ಮೂಲಕ ಜಯದೇವ ಕಡೆಗೆ /ಬನ್ನೇರುಘಟ್ಟ ರಸ್ತೆ ಕಡೆಗೆ ಸಂಚರಿಸಬಹುದು
* ಈಸ್ಟ್ ಎಂಡ್ ಸರ್ಕಲ್ ಕಡೆಯಿಂದ ಬನಶಂಕರಿ ಕಡೆಗೆ ಸಂಚರಿಸುವ ವಾಹನ ಸವಾರರು 29ನೇ ಮುಖ್ಯ ರಸ್ತೆಯಲ್ಲಿ 28ನೇ ಮುಖ್ಯ ರಸ್ತೆಯಲ್ಲಿ ಎಡ ತಿರುವು ಪಡೆದು 8ನೇ ಮುಖ್ಯ ರಸ್ತೆ 9ನೇ ಕ್ರಾಸ್ ಜಂಕ್ಷನ್ ಮೂಲಕ ಡಾಲಿಯಾ ಜಂಕ್ಷನ್ ನಲ್ಲಿ ಬಲ ತಿರುವು ಪಡೆದು ಔಟರ್ ರಿಂಗ್ ರಸ್ತೆಯ ಮೂಲಕ ಸಾರಕ್ಕಿ ಜಂಕ್ಷನ್ ನಲ್ಲಿ ಬಲ ತಿರುವು ಪಡೆದು ಕನಕಪುರ ರಸ್ತೆ ಹಾಗೂ ಬನಶಂಕರಿ ಕಡೆಗೆ ಚಲಿಸಬಹುದು
* ಹೊಸೂರು ರಸ್ತೆಯಿಂದ ಕನಕಪುರ ರಸ್ತೆ, ಮೈಸೂರು ರಸ್ತೆ ಮತ್ತು ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಹೊಸೂರು ರಸ್ತೆ ಬೊಮ್ಮಸಂದ್ರ ಜಂಕ್ಷನ್‌ನಿಂದ ಜಿಗಣಿ ರಸ್ತೆ ಮುಖಾಂತರ ಬನ್ನೇರುಘಟ್ಟ ರಸ್ತೆಯಲ್ಲಿ ನೈಸ್‌ ರಸ್ತೆಯನ್ನು ತಲುಪಿ ಸಂಚರಿಸುವುದು.
* ನೈಸ್ ರಸ್ತೆಯಿಂದ ಹೊಸೂರು ಕಡೆಗೆ ಸಂಚರಿಸುವ ವಾಹನಗಳು ಬನ್ನೇರುಘಟ್ಟ ಜಂಕ್ಷನ್ನಲ್ಲಿ ಇಳಿದು ಜಿಗಣಿ ರಸ್ತೆ ಮುಖಾಂತರ ಬೊಮ್ಮಸಂದ್ರ ಜಂಕ್ಷನ್ ಹೊಸೂರು ರಸ್ತೆಯನ್ನು ತಲುಪಿ ಸಂಚರಿಸುವುದು.
* ಹೊಸೂರು ರಸ್ತೆಯಿಂದ ಸರ್ಜಾಪುರ ರಸ್ತೆ, ವರ್ತೂರು, ವೈಟ್‌ ಫೀಲ್ಡ್ ಹೊಸಕೋಟೆ ಕಡೆಗೆ ಸಂಚರಿಸುವ ವಾಹನಗಳು ಚಂದಾಪುರ ಜಂಕ್ಷನ್‌ನಿಂದ ದೊಮ್ಮಸಂದ್ರ ರಸ್ತೆ ಮುಖಾಂತರ ಸರ್ಜಾಪುರ ರಸ್ತೆಯನ್ನು ತಲುಪಿ ಸಂಚರಿಸುವುದು.
* ಹೆಚ್.ಎಸ್.ಆರ್.ಲೇಔಟ್, ಕೋರಮಂಗಲ, ಬೆಳ್ಳಂದೂರು, ವೈಟ್ ಫೀಲ್ಡ್ ಹಾಗೂ ನಗರದ ಕಡೆಯಿಂದ ಹೊಸೂರು ಕಡೆಗೆ ಸಂಚರಿಸುವ ವಾಹನಗಳು ಸರ್ಜಾಪುರ ರಸ್ತೆ ಮೂಲಕ ಚಂದಾಪುರ ತಲುಪಿ ಹೊಸೂರು ಕಡೆ ಸಂಚರಿಸುವುದು.
* ಎಲೆಕ್ಟ್ರಾನಿಕ್ ಸಿಟಿ 1ನೇ ಹಂತದಲ್ಲಿ ಸಂಚರಿಸುವ ವಾಹನಗಳು 2ನೇ ಕ್ರಾಸ್ ರಸ್ತೆ, ಶಿಕಾರಿಪಾಳ್ಯರಸ್ತೆ, ಹುಲಿಮಂಗಲ ರಸ್ತೆ, ಗೊಲ್ಲಹಳ್ಳಿ ರಸ್ತೆಗಳಲ್ಲಿ ಸಂಚರಿಸುವುದು.
ಬೆಂಗಳೂರಿನ ಟ್ರಾಫಿಕ್ ಪೊಲೀಸರು ಈ ಎಲ್ಲ ಮಾರ್ಗಗಳಲ್ಲಿ ಟ್ರಾಫಿಕ್ ನಿರ್ಬಂಧ ಜಾರಿಗೊಳಿಸುತ್ತಿದ್ದಾರೆ. ಈ ಬಗ್ಗೆ ಮುಂಚಿತವಾಗಿಯೇ ನಗರದ ಜನರಿಗೆ ಮಾಹಿತಿಯನ್ನು ನೀಡಿದ್ದಾರೆ. 

ಎಲೆಕ್ಟ್ರಾನಿಕ್ ಸಿಟಿ ಪ್ಲೈಓವರ್ ಮೇಲೆ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ವಾಹನ ಸಂಚಾರ ಇರಲ್ಲ


ಬೆಂಗಳೂರು ಸಂಚಾರ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಕೂಡ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾಳೆ (ಆಗಸ್ಟ 10)  ಪ್ರಧಾನ ಮಂತ್ರಿಯವರು ಬೆಂಗಳೂರಿಗೆ ಬರ್ತಾ ಇದ್ದಾರೆ…. ಹೀಗಾಗಿ ಕೆಲವು ರಸ್ತೆಗಳ ನಿರ್ಬಂಧ ಮಾಡಿ, ಡೈವರ್ಶನ್ ಮಾಡಲಾಗಿದೆ.  ಬೆಳಗ್ಗೆ ಬೆಂಗಳೂರಿನ ಹೃದಯ ಭಾಗದ ಶೇಷಾದ್ರಿ ರಸ್ತೆಯಲ್ಲಿ ಕೆ.ಆರ್. ಸರ್ಕಲ್ ವರೆಗೆ ಸಂಚಾರ ನಿರ್ಬಂಧ…ಮಾಡಲಾಗಿದೆ. ಲಾಲ್ ಬಾಗ್ ನಲ್ಲಿ ನಾರ್ತ್ ಹಾಗೂ ವೆಸ್ಟ್ ಗೇಟ್ ಬಂದ್ ಗೆ ಮನವಿ ಮಾಡಲಾಗಿತ್ತು. ಬೆಳಗ್ಗೆ ವಿವಿಐಪಿ ಮೂಮೆಂಟ್ ಇರುವಾಗ ಬಂದ್ ಮಾಡಲು ತೋಟಗಾರಿಕೆ ಇಲಾಖೆ‌ ಒಪ್ಪಿಕೊಂಡಿದೆ. ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಬೆಳಿಗ್ಗೆ 9.30 ಯಿಂದ 2.30ವರೆಗೆ ಸಂಚಾರ‌ ನಿರ್ಬಂಧ ಮಾಡಲಾಗುತ್ತೆ. ಹೆವಿ ವೆಹಿಕಲ್ ಸಿಟಿಯೊಳಗೆ ಪ್ರವೇಶ 11.30ರ ವರೆಗೆ ಇರಲ್ಲ.  ಬೆಳಿಗ್ಗೆ 9 ಗಂಟೆಯಿಂದ 2.30ರ ವರೆಗೆ ವಿವಿಐಪಿ ಮೂಮೆಂಟ್ ಇರುವ ಕಾರಣ ಸಂಚಾರ ನಿರ್ಬಂಧ…ಮಾಡಲಾಗುತ್ತಿದೆ. ಸಾರ್ವಜನಿಕರಿಗೆ ಡೈವರ್ಷನ್ ಗೆ ಟ್ರಾವೆಲ್ ಅಡ್ವೈಸರಿ ನೀಡಲಾಗಿದೆ. ಸಾರ್ವಜನಿಕರು ಸಹಕಾರ ನೀಡಬೇಕೆಂದು  ಎಂದು ಸಂಚಾರ ಜಂಟಿ ಆಯುಕ್ತ ಕಾರ್ತಿಕ್ ರೆಡ್ಡಿ ಮನವಿ ಮಾಡಿದ್ದಾರೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Pm Narendra Modi CM SIDDARAMAIAH
Advertisment