/newsfirstlive-kannada/media/media_files/2025/09/02/hit-and-run-bengalore-2025-09-02-15-11-28.jpg)
ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ಗೆ ಇಬ್ಬರು ಬೈಕ್ ಸವಾರರು ಪ್ರಾಣ ಕಳೆದುಕೊಂಡಿದ್ದಾರೆ. ಯಲಹಂಕದ ಕೋಗಿಲು ಕ್ರಾಸ್ ಬಳಿ ಘಟನೆ ನಡೆದಿದ್ದು, ಯಲಹಂಕ ಸಂಚಾರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಾಹನ ಚಾಲಕ…ಬೈಕ್ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಮೃತರ ಗುರುತು ಇನ್ನಷ್ಟೇ ತಿಳಿದು ಬರಬೇಕಿದೆ. ಕೆಲವು ವಿಡಿಯೋಗಳ ಆಧರಿಸಿ ಹೇಳೋದಾದರೆ, ಅಪರಚಿತ ವಾಹನ ವೇಗವಾಗಿ ಬಂದು ಬೈಕ್ ಸವಾರರಿಗೆ ಗುದ್ದಿದಂತೆ ಕಾಣ್ತಿದೆ.
ಬೈಕ್ ರಸ್ತೆ ಮಧ್ಯೆ ಬಿದ್ದಿದ್ದು, ಅದರ ಪಕ್ಕದಲ್ಲೇ ಓರ್ವ ಮೃತಪಟ್ಟಿದ್ದಾನೆ. ಮತ್ತೋರ್ವ ಸುಮಾರು 20 ಮೀಟರ್ ದೂರ ಹೋಗಿ ಬಿದ್ದಿದ್ದಾನೆ. ಇಬ್ಬರ ದೇಹಗಳು ನುಜ್ಜುಗುಜ್ಜಾಗಿವೆ. ಅಪಘಾತ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿತ್ತು. ಸಂಚಾರಿ ಪೊಲೀಸರ ಭೇಟಿ ಬಳಿಕ ಎಲ್ಲವೂ ಸರಿ ಹೋಗಿದೆ. ಜೊತೆಗೆ ಗುದ್ದೋಡಿದ ವಾಹನ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸ್ತಿದ್ದಾರೆ.
ಇದನ್ನೂ ಓದಿ:ಸಿನಿಮಾ ನಿರ್ದೇಶಕ ನಂದಕಿಶೋರ್ ಹಣ ವಾಪಸ್ ಕೊಡದೇ ಇದ್ದಿದ್ದಕ್ಕೆ ಸಾಲ ಕೊಟ್ಟ ಉದ್ಯಮಿಯೇ ಕಿಡ್ನ್ಯಾಪ್!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ