/newsfirstlive-kannada/media/media_files/2025/09/22/mysore-dasara-8-2025-09-22-10-32-07.jpg)
ಮೈಸೂರು ದಸರಾ.. ಎಷ್ಟೊಂದು ಸುಂದರ! ಸಾಂಸ್ಕೃತಿಕ ನಗರಿಯಲ್ಲಿ ನಾಡಹಬ್ಬದ ಸಡಗರ ಜೋರಾಗಿದೆ. ದಸರಾ ವೈಭವಕ್ಕೆ ನಾಡಿನ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಅಧಿಕೃತವಾಗಿ ಚಾಲನೆ ನೀಡಿದರು.
ಇಂದು ಬೆಳಗ್ಗೆ ವೃಶ್ಚಿಕ ಶುಭ ಲಗ್ನದಲ್ಲಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ‘ಮೈಸೂರು ದಸರಾ’ಗೆ ಚಾಲನೆ ನೀಡಲಾಯಿತು. ಉತ್ಸವ ಮೂರ್ತಿಗೆ ಹಸಿರು ಸೀರೆಯುಡಿಸಿ ಬೆಳ್ಳಿ ರಥದ ಸಿಂಹಾಸನದಲ್ಲಿ ಅಲಂಕರಿಸಲಾಗಿದ್ದು, ತಾಯಿ ಚಾಮುಂಡಿ ಕಂಗೊಳಿಸುತ್ತಿದ್ದಾಳೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಸಚಿವರು, ಶಾಸಕರು ಮತ್ತು ಸಂಸದರು ಸಾಕ್ಷಿಯಾದರು. ಇಂದಿನಿಂದ ಅಕ್ಟೋಬರ್ 2ವರೆಗೆ ದಸರಾ ದರ್ಬಾರ್ ನಡೆಯಲಿದೆ.
ಪೊಲೀಸರಿಂದ ಭದ್ರತೆ
ದಸರಾ ಉದ್ಘಾಟನೆ ಮುಗಿಯುವವರೆಗೂ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಆಹ್ವಾನಿತರಿಗೆ ಮಾತ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಇದೆ. ವಿವಿಐಪಿ, ವಿಐಪಿ ಹಾಗೂ ಪಾಸ್ ಹೊಂದಿದವರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಇದೆ. ಈಗಾಗಲೇ ವೇದಿಕೆ ಸುತ್ತ ಬ್ಯಾರಿಕೇಡ್ ಹಾಕಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಅರಮನೆಯಲ್ಲೂ ದರ್ಬಾರ್ ಶುರು
ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದ್ರೆ.. ಇತ್ತ ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಸಿದ್ಧತೆ ಭರದಿಂದ ಸಾಗಿದೆ. ರತ್ನ ಖಚಿತ ಸಿಂಹಾಸನವೇರಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ಮಾಡಲಿದ್ದಾರೆ.
ಇದನ್ನೂ ಓದಿ: ಅರಮನೆಯಲ್ಲಿ ದಸರಾ ಸಂಭ್ರಮ - ಇವತ್ತು ರಾಜವೈಭವ ಹೇಗಿರುತ್ತೆ..?
ಬೆಳಗ್ಗೆ 5.30ರಿಂದ 5.45ರ ಶುಭ ಘಳಿಗೆಯಲ್ಲಿ ಸಿಂಹಾಸನಕ್ಕೆ ಸಿಂಹದ ಮುಖ ಜೋಡಣೆ ಮಾಡಲಾಗಿದೆ. ಇನ್ನು ಬೆಳಗ್ಗೆ 9.55-10.15ರೊಳಗೆ ಚಾಮುಂಡಿ ತೊಟ್ಟಿಯಲ್ಲಿ ಕಂಕಣಧಾರಣೆ ನಡೆಯಲಿದೆ. ಯದುವೀರ್​ ಒಡೆಯರ್​ಗೆ ತ್ರಿಷಿಕಾ ಕುಮಾರಿ ಒಡೆಯರ್ ಕಂಕಣ ಧಾರಣೆ ಮಾಡಲಿದ್ದಾರೆ. ಬಳಿಕ ಬೆಳಗ್ಗೆ 11: 35ಕ್ಕೆ ಅರಮನೆ ಆವರಣರಲ್ಲಿರುವ ಕೊಡಿ ಸೋಮೇಶ್ವರ ದೇವಸ್ಥಾನದ ಬಳಿ ಪಟ್ಟದ ಆನೆ, ಕುದುರೆ, ಹಸುಗಳಿಗೆ ಯದುವೀರ್ ಒಡೆಯರ್‌ರಿಂದ ಪೂಜೆ ಸಲ್ಲಿಸಲಿದ್ದಾರೆ. ಇದಾದ ನಂತರ. ಮಧ್ಯಾಹ್ನ 12.42 ರಿಂದ 12.58 ವರೆಗೆ ರತ್ನ ಖಚಿತ ಸಿಂಹಾಸನವನ್ನು ಅಲಂಕರಿಸಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ಖಾಸಗಿ ದರ್ಬಾರ್ ನಡೆಸಲಿದ್ದಾರೆ.
ಇದನ್ನೂ ಓದಿ: ಈ ಕಾರು ಖರೀದಿಸೋರಿಗೆ ಸೂಪರ್ ಸುದ್ದಿ.. 1.56 ಲಕ್ಷ ರೂಪಾಯಿವರೆಗೆ ಇಳಿಕೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ