/newsfirstlive-kannada/media/media_files/2025/12/10/bidar-student-accident-2025-12-10-10-38-19.jpg)
ಬೀದರ್/ಬಳ್ಳಾರಿ: ಶಾಲಾ ಬಸ್​ ಹರಿದು 8 ವರ್ಷದ ಬಾಲಕಿ ಮೃತಪಟ್ಟ ಘಟನೆ ಬೀದರ್‌ನ ಜನವಾಡಾ ಗ್ರಾಮದ ಪೊಲೀಸ್ ಕ್ವಾಟರ್ಸ್ ಬಳಿ ನಡೆದಿದೆ.
ಗಡಿಕುಶನೂರು ಗ್ರಾಮದ ರುತ್ವಿ, ಶಾಲೆಯಿಂದ ವಾಪಸ್ ಶಾಲಾ ವಾಹನದಲ್ಲಿ ಮನೆಗೆ ಬಂದವಳು ಸ್ಕೂಲ್ ಬಸ್ ಇಳಿದು ಬಸ್ ಪಕ್ಕಕ್ಕೇ ನಿಂತಿದ್ದಳು. ಬಾಲಕಿ ಬಸ್ ಬಳಿ ಇರುವುದನ್ನ ಗಮನಿಸದೆ ಆಕೆಯೆ ಮೇಲೆಯೇ ಬಸ್​ ಓಡಿಸಿದ್ದಾನೆ. ಈ ವೇಳೆ ಬಸ್‌ಗೆ ಸಿಲುಕಿ ರುತ್ವಿ ಸಾವನ್ನಪ್ಪಿದ್ದಾಳೆ. ಜನವಾಡಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಲಾರಿಗೆ ಬೈಕ್ ಡಿಕ್ಕಿ
ಮೈನಿಂಗ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಗ್ರಾಮದ ಬಳಿ ನಡೆದಿದೆ. ಸಂಡೂರಿನಿಂದ ನಡಗುರ್ತಿ ಗ್ರಾಮಕ್ಕೆ ತೆರಳುತ್ತಿದ್ದ ಶ್ರೀಧರ್, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ, ಸ್ಥಳದಲ್ಲೇ ಶ್ರೀಧರ್ ಸಾವನ್ನಪ್ಪಿದ್ದು, ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಶಿರಡಿ ಸಾಯಿಬಾಬಾಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us