/newsfirstlive-kannada/media/media_files/2026/01/17/bhimmanna-khandre-is-no-more-3-2026-01-17-12-17-31.jpg)
ಇಂದು ಸಂಜೆ ಭಾಲ್ಕಿಯಲ್ಲಿ ಭೀಮಣ್ಣ ಖಂಡ್ರೆ ಅಂತ್ಯಸಂಸ್ಕಾರ
ಲೋಕನಾಯಕ ಭೀಮಣ್ಣ ಖಂಡ್ರೆ(102) ನಿಧನವಾದ ಹಿನ್ನಲೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಭಾಲ್ಕಿಯಲ್ಲಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅಂತಿಮದರ್ಶನ, ಅಂತ್ಯಕ್ರಿಯೆಗೆ ಸಕಲ ಸಿದ್ಧತೆಯನ್ನು ಮಾಡಲಾಗಿದೆ. ಪತ್ನಿ ಲಕ್ಷ್ಮೀಬಾಯಿ ಖಂಡ್ರೆಯವರ ಸಮಾಧಿ ಪಕ್ಕವೇ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಲಾಗುತ್ತಿದೆ. ಭಾಲ್ಕಿಯ ಚಿಕಲ್ ಚೆಂದ ರಸ್ತೆಯಲ್ಲಿರುವ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಲಾಗುತ್ತಿದೆ. ಭಾಲ್ಕಿಯ ಈಶ್ವರ್ ಖಂಡ್ರೆ ನಿವಾಸದ ಪಕ್ಕದಲ್ಲೇ ಸಾರ್ವಜನಿಕರಿಗೆ ಭೀಮಣ್ಣ ಖಂಡ್ರೆ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರ ಇಡುವುದಕ್ಕೆ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ವೇದಿಕೆ ಮುಂಭಾಗದಲ್ಲಿ ಶಾಮಿಯಾನ, ವಿದ್ಯುತ್ ಹಾಗೂ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಅಂತ್ಯಕ್ರಿಯೆ ಮಾಡುವ ಜಾಗದ ಪಕ್ಕದ ಜಮೀನುಗಳಲ್ಲಿ ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 1 ಗಂಟೆಯ ನಂತರ ಭಾಲ್ಕಿ ಪಟ್ಟಣದಾದ್ಯಂತ ಪಾರ್ಥಿವ ಶರೀರ ಮೆರವಣಿಗೆ ಮಾಡಲಾಗುತ್ತೆ. ಸಂಜೆ 5 ಗಂಟೆಗೆ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತೆ.
ಮಾಜಿ ಸಚಿವ ಭೀಮಣ್ಣ ಖಂಡ್ರೆ ಅಂತ್ಯಸಂಸ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯದ ಕ್ಯಾಬಿನೆಟ್ ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಸೇರಿದಂತೆ ಅನೇಕರು ಭಾಗಿಯಾಗುವರು. ಜೊತೆಗೆ ಹೈದರಾಬಾದ್ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ನಾಯಕರು, ವೀರಶೈವ ಲಿಂಗಾಯತ ಮಹಾಸಭಾದ ನಾಯಕರು ಭಾಗಿಯಾಗುವರು.
/filters:format(webp)/newsfirstlive-kannada/media/media_files/2026/01/17/bhimmanna-khandre-is-no-more-2026-01-17-12-03-12.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us