/newsfirstlive-kannada/media/media_files/2025/08/27/girish-mattannavar-2025-08-27-18-48-13.jpg)
ಬೆಂಗಳೂರು: ಹೋರಾಟಗಾರ ಎಂದು ಗುರುತಿಸಿಕೊಂಡಿರುವ ಗಿರೀಶ್​​ ಮಟ್ಟಣ್ಣನವರ್​ (Girish Mattannanavar) ವಿರುದ್ಧ ಮಾನವ ಹಕ್ಕುಗಳ ಆಯೋಗದಲ್ಲಿ ದೂರು ದಾಖಲಾಗಿದೆ.
ಧರ್ಮಸ್ಥಳ ವಿರುದ್ಧ ಷ್ಯಡಂತ್ರದ ಆರೋಪ ಹೊತ್ತಿರುವ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಹಿಂದೂ ಮುಖಂಡ ಸುರೇಶ್ ಗೌಡ ದೂರು ದಾಖಲಿಸಿದ್ದಾರೆ. ಹುಬ್ಬಳ್ಳಿ ಮೂಲದ ರೌಡಿಶೀಟರ್ ಮದನ್ ಬುಗಾಡಿ ಎಂಬಾತನನ್ನ ಮಾನವಹಕ್ಕುಗಳ ಆಯೋಗದವರೆಂದು ಧರ್ಮಸ್ಥಳ ಪೊಲೀಸರಿಗೆ ಪರಿಚಯಿಸಿ, ಸುಳ್ಳು ಹೇಳಿ ವಂಚಿಸಿದ್ದಾರೆ. ಇಲಾಖೆಯ ಹೆಸರನ್ನು ಸುಳ್ಳು ಹೇಳೋಕೆ ಬಳಸಿಕೊಂಡಿದ್ದಾರೆಂದು ಆರೋಪಿಸಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ.
ಸ್ವತಃ ರೌಡಿಶೀಟರ್​​ ಮದನ್ ಬುಗಡಿ ಮಟ್ಟಣ್ಣನವರ್​ ಕಳ್ಳಾಟವನ್ನು ಬಯಲು ಮಾಡಿದ್ದಾನೆ. ಮದನ್ ಬುಗಡಿ ಎಂಬಾತ ತನ್ನ ರೌಡಿ ಶೀಟರ್ ಹಿನ್ನೆಲೆಯನ್ನು ಒಪ್ಪಿಕೊಂಡಿದ್ದಾನೆ. ಗಿರೀಶ್​​ ಮಟ್ಟಣ್ಣನವರ್​ ಹೇಳಿದ ಕಥೆಯ ಅಸಲಿ ಸತ್ಯಾಸತ್ಯತೆ ಬಾಯ್ಬಿಟ್ಟಿದ್ದಾನೆ. ಹೌದು ನಾನು ರೌಡಿಶೀಟರ್​. ಆದರೆ ಗಿರೀಶ್​ ಮಟ್ಟಣ್ಣನವರ್​ ಯಾಕೆ ಆ ರೀತಿ ಹೇಳಿದರು ಎಂದು ನನಗೆ ಗೊತ್ತಿಲ್ಲ ಎಂದಿದ್ದಾರೆ.
ಮಟ್ಟಣ್ಣನವರ್ ವಿರುದ್ಧ ಮಾನವ ಹಕ್ಕುಗಳ ಆಯೋಗದಲ್ಲಿ ದೂರು ದಾಖಲಾಗಿದೆ. ಇದಕ್ಕೂ ಮೊದಲು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲು ತೆರಳಿದ ಪೊಲೀಸರಿಗೆ ಅಡ್ಡಿಪಡಿಸಿದ ಆರೋಪದಡಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ದೂರು ದಾಖಲಾಗಿದೆ.
ಇದನ್ನೂ ಓದಿ: ಧರ್ಮಸ್ಥಳ ಬಗ್ಗೆ ಅಪಪ್ರಚಾರ.. ಗುಡುಗಿದ ದೇವೇಗೌಡ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ