/newsfirstlive-kannada/media/media_files/2025/12/11/chikkaballapura-accident-2025-12-11-08-34-31.jpg)
ಚಿಕ್ಕಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ತಡರಾತ್ರಿ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತಕ್ಕೀಡಾಗಿದೆ. ದೇವನಹಳ್ಳಿಯ ಹಾಲಗೊಂಡನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ.
ಮೋಹನ್ ಕುಮಾರ್ (33), ಸುಮನ್ (28), ಸಾಗರ್ (23) ಮೃತ ದುರ್ದೈವಿಗಳು. ಮೃತರೆಲ್ಲ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದವರು. ಸಾಗರ್ ಯಲಹಂಕದಲ್ಲಿ ಬಿಕಾಂ ಓದುತ್ತಿದ್ದ. ಸುಮನ್ ಹಾಗೂ ಮೋಹನ್ ಗ್ರಾನೈಟ್ ಉದ್ಯಮಿಗಳಾಗಿದ್ದವರು. ಮೂವರೂ ಸಾದಹಳ್ಳಿ ಗ್ರಾಮದ ಸ್ನೇಹಿತರಾಗಿದ್ದರು.
ಇದನ್ನೂ ಓದಿ: ಬೆಂಗಳೂರು ಐಟಿ ವಲಯಕ್ಕೆ ಡಿಸಿಎಂ ಡಿಕೆ ಶಿವಕುಮಾರ್​ ಗುಡ್​​ನ್ಯೂಸ್..!
/filters:format(webp)/newsfirstlive-kannada/media/media_files/2025/12/11/chikkaballapura-accident-1-2025-12-11-08-37-11.jpg)
ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ, ಎದುರು ಬರುತ್ತಿದ್ದ ಕೆಎಸ್ಆರ್​ಟಿಸಿ ಬಸ್‌ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ.
ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಜೈಲಲ್ಲಿರೋ ದರ್ಶನ್‌ಗೆ ಡೆವಿಲ್ ಸಕ್ಸಸ್ ಅದೆಷ್ಟು ಅಗತ್ಯ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us