ಬಾಗೇಪಲ್ಲಿ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್ : ಬಿಜೆಪಿ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ನಕಾರ

ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ ಶಾಸಕರಾಗಿ ಆಯ್ಕೆಯಾಗಿದ್ದನ್ನು ಅಸಿಂಧುಗೊಳಿಸಿ ಹೈಕೋರ್ಟ್ ಇಂದು ಆದೇಶ ನೀಡಿದೆ. ಚುನಾವಣಾ ಆಕ್ರಮಗಳ ಹಿನ್ನಲೆಯಲ್ಲಿ ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿದೆ. ಆದರೇ, ಬಿಜೆಪಿ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ.

author-image
Chandramohan
BAGEPALLI MLA SUBBAREDDY (1)

ಬಾಗೇಪಲ್ಲಿ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

Advertisment
  • ಬಾಗೇಪಲ್ಲಿ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್
  • ಚುನಾವಣಾ ಆಕ್ರಮಗಳ ಕಾರಣದಿಂದ ಆಯ್ಕೆ ಅಸಿಂಧು-ಹೈಕೋರ್ಟ್
  • ಪರಾಜಿತ ಅಭ್ಯರ್ಥಿ ಮುನಿರಾಜುರನ್ನು ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಕಾರ


ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ  ಶಾಸಕರಾಗಿ  ಆಯ್ಕೆಯಾಗಿದ್ದನ್ನು  ಅಸಿಂಧುಗೊಳಿಸಿ,  ನ್ಯಾ.ಎಂ.ಜಿ.ಎಸ್. ಕಮಲ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.  ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.  ಸುಬ್ಬಾರೆಡ್ಡಿ  ಆಯ್ಕೆ ಅಸಿಂಧು ಕೋರಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.  ಆದರೇ,  ಸಿ. ಮುನಿರಾಜು ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ.  
ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.    ಅಸಿಂಧುಗೊಳಿಸಿದ ಆದೇಶವನ್ನು  ಚುನಾವಣಾ ಆಯೋಗಕ್ಕೆ ರವಾನೆ ಮಾಡಲು ಹೈಕೋರ್ಟ್ ಆದೇಶಿಸಿದೆ.   ವಿಧಾನಸಭೆ ಕಾರ್ಯದರ್ಶಿಗೂ ಕಳುಹಿಸಲು ಹೈಕೋರ್ಟ್ ಆದೇಶ ನೀಡಿದೆ. 
ಮೇಲ್ಮನವಿ ಸಲ್ಲಿಕೆವರೆಗೆ ತನ್ನ ಆದೇಶಕ್ಕೆ ತಡೆಯಾಜ್ಞೆ ನೀಡಲು  ಎಸ್.ಎನ್.ಸುಬ್ಬಾರೆಡ್ಡಿ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ಮನವಿ ಮಾಡಿದ್ದರು. ಆದರೇ, ಈ ಮನವಿಗೆ ಅರ್ಜಿದಾರರ ಪರ ಹಿರಿಯ ವಕೀಲೆ ನಳಿನಾ ಮಾಯಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 
ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಗೆ ತಡೆಯಾಜ್ಞೆ ಕೋರಿ ಮೇಲ್ಮನವಿ ಸಲ್ಲಿಸಲು ಎಸ್‌.ಎನ್‌.ಸುಬ್ಬಾರೆಡ್ಡಿ ಅವರಿಗೆ ಅವಕಾಶ ಇದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ 6 ತಿಂಗಳೊಳಗಾಗಿ ತಡೆಯಾಜ್ಞೆ ನೀಡದಿದ್ದರೇ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಮರು ಚುನಾವಣೆ ನಡೆಸಬೇಕಾಗುತ್ತೆ. 

BAGEPALLI MLA SUBBAREDDY




ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BAGEPALLI MLA SUBBAREDDY DISQUALIFIED
Advertisment