/newsfirstlive-kannada/media/media_files/2026/01/14/complaiant-against-rajeev-gowda-2026-01-14-15-51-55.jpg)
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರನ್ನು ನಿಂದಿಸಿ, ಬೆದರಿಸಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸಲಾಗಿದೆ. ಕರ್ನಾಟಕ- ಕೇರಳ ಗಡಿಯಲ್ಲಿ ರಾಜೀವ್ ಗೌಡನನ್ನು ಬಂಧಿಸಲಾಗಿದೆ.
ಕಳೆದೊಂದು ವಾರದಿಂದ ರಾಜೀವ್ ಗೌಡ ಬಂಧನಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಯತ್ನಿಸಿದ್ದರು. ಮಂಗಳೂರಿಗೆ ತೆರಳಿ ಸ್ನೇಹಿತರ ಬಳಿ ರಾಜೀವ್ ಗೌಡ ಆಶ್ರಯ ಪಡೆದಿದ್ದ. ಚಿಂತಾಮಣಿ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು. ಜೊತೆಗೆ ಹೈಕೋರ್ಟ್ ನಲ್ಲಿ ತನ್ನ ವಿರುದ್ಧದ ಎಫ್ಐಆರ್ ರದ್ದುಗೊಳಿಸಬೇಕು. ಬಂಧನದಿಂದ ರಕ್ಷಣೆ ನೀಡಬೇಕೆಂದು ಮನವಿ ಮಾಡಿದ್ದ. ಆದರೇ, ಹೈಕೋರ್ಟ್ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿತ್ತು.
ಇನ್ನೂ ರಾಜೀವ್ ಗೌಡ ನಟೋರೀಯಸ್ ಆಗಿದ್ದು, ಈತನ ವಿರುದ್ಧ 16 ಕ್ರಿಮಿನಲ್ ಕೇಸ್ ಗಳು ದಾಖಲಾಗಿವೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ ಹೇಳಿದ್ದಾರೆ.
/filters:format(webp)/newsfirstlive-kannada/media/media_files/2026/01/26/rajeev-gowda-arrested-2026-01-26-18-10-46.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us