ರಾಜೀವ್‌ಗೌಡನಿಂದ ಎಫ್‌ಐಆರ್ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ: ಆರೋಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರನ್ನು ನಿಂದಿಸಿದ್ದ ರಾಜೀವ್ ಗೌಡ ತಮ್ಮ ವಿರುದ್ದ ದಾಖಲಾಗಿರುವ ಎಫ್ಐಆರ್ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್, ರಾಜೀವ್ ಗೌಡನನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

author-image
Chandramohan
High court slams rajiv gowda

ರಾಜೀವ್ ಗೌಡನನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

Advertisment
  • ರಾಜೀವ್ ಗೌಡನನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್
  • ತನ್ನ ವಿರುದ್ಧದ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಗೆ ರಾಜೀವ್ ಗೌಡ ಅರ್ಜಿ


ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕೆಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದೆ. ಹೈಕೋರ್ಟ್ ನ ಜಸ್ಟೀಸ್ ನಾಗಪ್ರಸನ್ನ  ಅವರ ಪೀಠದಲ್ಲಿ ಇಂದು ರಾಜೀವ್ ಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಿತು. ರಾಜೀವ್ ಗೌಡ ಪರ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ವಾದ  ಮಂಡಿಸಿದ್ದರು. 
ಫೋನ್ ಮೂಲಕ ಆಡಿದ ಮಾತಿಗೆ ಮಾಧ್ಯಮದಲ್ಲೇ ಕ್ಷಮೆ ಕೇಳಿದ್ದಾರೆ.  ಬಿಎನ್‌ಎಸ್‌ ಸೆಕ್ಷನ್ 132 ಈ ಕೇಸಿನಲ್ಲಿ ಅನ್ವಯಿಸುವುದಿಲ್ಲ.  ತನಿಖೆಗೆ ಸಹಕರಿಸಲು ಸಿದ್ದರಿರುವುದರಿಂದ ರಕ್ಷಣೆ   ನೀಡಬೇಕೆಂದು ಹೈಕೋರ್ಟ್ ಗೆ ಮನವಿ ಮಾಡಿಕೊಂಡರು.  ಸಾರ್ವಜನಿಕವಾಗಿ ಕ್ಷಮೆ ಕೇಳಲು ರಾಜೀವ್ ಗೌಡ ಸಿದ್ದರಿದ್ದಾರೆ ಎಂದು ವಕೀಲ ವಿವೇಕ್ ಸುಬ್ಬಾರೆಡ್ಡಿ ವಾದಿಸಿದ್ದರು. 
ಅರ್ಜಿದಾರ ರಾಜೀವ್ ಗೌಡ ಗೆ ಹೈಕೋರ್ಟ್ ತೀವ್ರವಾಗಿ ತರಾಟೆ ತೆಗೆದುಕೊಂಡಿತ್ತು.  ಅರ್ಜಿದಾರರ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 74, 79 ಯಾಕೆ ಹಾಕಿಲ್ಲ?  ಅರ್ಜಿದಾರನಿಗೆ ಮಹಿಳೆಯರೆಂದರೆ ಗೌರವ ಇಲ್ಲವೇ? ಎಂದು   ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಪ್ರಶ್ನೆ ಮಾಡಿತು.  ಅರ್ಜಿದಾರ ಇಂತಹ ಮಾತನ್ನೆಲ್ಲಾ ಹೇಗೆ ಆಡಲು ಸಾಧ್ಯ?  ಒಮ್ಮೆ ಮಾತನಾಡಿದರೆ ವಾಪಸ್ ಪಡೆಯಲು ಆಗುವುದಿಲ್ಲ. 
ನಿಯಂತ್ರಣವಿಲ್ಲದ ನಾಲಿಗೆಯೇ ಎಲ್ಲವನ್ನೂ ಹಾಳು ಮಾಡಬಲ್ಲದು.   ನೀವು ಕ್ಷಮೆ ಕೇಳಿದರೂ ಒಡೆದಿರುವುದು ಒಂದಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿತು. ರಾಜೀವ್ ಗೌಡ ಅರ್ಜಿ ಸಂಬಂಧ ವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ ಆದೇಶವನ್ನು ಕಾಯ್ದಿರಿಸಿದೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.

KAS OFFICER AMRUTHA GOWDA siddlghatta rajeev gowda amrutha gowda
Advertisment