/newsfirstlive-kannada/media/media_files/2026/01/23/rajiv-gowda-suspended-from-congress-party-2026-01-23-16-38-37.jpg)
ರಾಜೀವ್ ಗೌಡ ಕಾಂಗ್ರೆಸ್ ಪಕ್ಷದಿಂದ ಸಸ್ಪೆಂಡ್
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಾಜೀವ್ ಗೌಡನನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಸಭೆಯಲ್ಲಿ ಅಮಾನತು ತೀರ್ಮಾನ ತೆಗೆದುಕೊಳ್ಳಲಾಗಿದೆ. ಪ್ರಕರಣದ ಗಂಭೀರತೆ ಅರಿತು ಕೆಪಿಸಿಸಿ ಶಿಸ್ತು ಪಾಲನ ಸಮಿತಿಯಿಂದ ರಾಜೀವ್ ಗೌಡನನ್ನು ಅಮಾನತು ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ. ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಅವರು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರು ರಾಜೀವ್ ಗೌಡನನ್ನು ಪಕ್ಷದಿಂದ ಅಮಾನತು ಮಾಡುವಂತೆ ಶಿಸ್ತು ಪಾಲನಾ ಸಮಿತಿಗೆ ಶಿಫಾರಸ್ಸು ಮಾಡಿದ್ದರು.
ಈ ಶಿಫಾರಸ್ಸು ಆಧಾರದ ಮೇಲೆ ರಾಜೀವ್ ಗೌಡ ವಿರುದ್ಧ ಇರುವ ಸಾಕ್ಷಿಗಳನ್ನು ಪರಿಗಣಿಸಿ ಪಕ್ಷದಿಂದ ಅಮಾನತು ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯು ಹೇಳಿದೆ.
/filters:format(webp)/newsfirstlive-kannada/media/media_files/2026/01/14/complaiant-against-rajeev-gowda-2026-01-14-15-51-55.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us