ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಆತಂಕ: 595 ಮಂದಿಗೆ ರಕ್ತ ಪರೀಕ್ಷೆ

ಶಿವಮೊಗ್ಗ ಜಿಲ್ಲೆಯಲ್ಲಿ ಯುವಕನೊಬ್ಬ ಮಂಗನ ಕಾಯಿಲೆಗೆ ಬಲಿಯಾಗಿದ್ದಾನೆ. ಇದರ ಬೆನ್ನಲ್ಲೇ ಪಕ್ಕದ ಚಿಕ್ಕಮಗಳೂರು ಜಿಲ್ಲೆಯಲ್ಲೂ ಹೆಲ್ತ್ ಹೈ ಆಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು ಜನರು ಕೂಡ ಮಂಗನ ಕಾಯಿಲೆ ಬಗ್ಗೆ ಭಯಭೀತರಾಗಿದ್ದಾರೆ. 595 ಮಂದಿಗೆ ರಕ್ತಪರೀಕ್ಷೆ ಮಾಡಲಾಗಿದೆ.

author-image
Chandramohan
MONKEY SCARE IN CHIKKAMAGALURU

ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಗೆ ಯುವಕ ಬಲಿ, ಹೆಲ್ತ್ ಆಲರ್ಟ್

Advertisment
  • ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಗೆ ಯುವಕ ಬಲಿ, ಹೆಲ್ತ್ ಆಲರ್ಟ್
  • ಪಕ್ಕದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಲ್ತ್ ಆಲರ್ಟ್
  • ಇದುವರೆಗೂ 595 ಮಂದಿಗೆ ರಕ್ತ ಪರೀಕ್ಷೆ


ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗಿದ್ದು, ಜಿಲ್ಲೆಯಾದ್ಯಂತ ಜಾಗರೂಕತೆ ವಹಿಸಲಾಗುತ್ತಿದೆ. ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಗೆ ಯುವಕನೊಬ್ಬ ಬಲಿಯಾದ ಬೆನ್ನಲ್ಲೇ, ನೆರೆಯ ಎನ್.ಆರ್. ಪುರ ತಾಲೂಕಿನಲ್ಲಿ ಒಂಬತ್ತು ಜನರಿಗೆ ಸೋಂಕು ದೃಢ ಪಟ್ಟಿದೆ. ಹೀಗಾಗಿ ಚಿಕ್ಕಮಗಳೂರಿನಲ್ಲೂ ಯಾರಿಗಾದರೂ ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ. ಈಗಾಗಲೇ 595 ಮಂದಿಗೆ ರಕ್ತ ಪರೀಕ್ಷೆ ಮಾಡಿಸಲಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

MONKEY DISEASE SCARE IN CHIKKAMAGALURU
Advertisment