/newsfirstlive-kannada/media/media_files/2025/12/25/chitradurga-accident-1-2025-12-25-11-55-51.jpg)
ಚಿತ್ರದುರ್ಗ ಬಸ್ ದುರಂತದಲ್ಲಿ ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ.
ಬಸ್ ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಿಎಂ, ಬಳಿಕ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ 5 ಲಕ್ಷ ಸರ್ಕಾರದಿಂದ ಪರಿಹಾರ ನೀಡಲಾಗುವುದು. ಅದೇ ರೀತಿ, ಗಾಯಾಳುಗಳಿಗೆ ತಲಾ 50 ಸಾವಿರ ಘೋಷಣೆ ಮಾಡಿದ್ದಾರೆ.
ನಿನ್ನೆ ರಾತ್ರಿ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಬಸ್​ ದುರಂತಕ್ಕೆ ಒಳಗಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ಎದುರಿಗೆ ಬರುತ್ತಿದ್ದ ಲಾರಿ ಡಿವೈಡರ್​​ಗೆ ಡಿಕ್ಕಿ ಹೊಡೆದು, ಬಸ್​​ಗೆ ಬಂದು ಗುದ್ದಿದೆ. ಲಾರಿ, ನೇರವಾಗಿ ಬಸ್​​ನ ಡೀಸೆಲ್​ ಟ್ಯಾಂಕ್​​ಗೆ ಗುದ್ದಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿಯ ಜ್ವಾಲೆ ಜೋರಾಗಿ ಆವರಿಸಿ ಬಸ್ಸಿನಲ್ಲಿದ್ದ ನಾಲ್ವರು ಸಜೀವ ದಹನಗೊಂಡಿದ್ದಾರೆ. ಜೊತೆಗೆ ಲಾರಿ ಚಾಲಕ ಕೂಡ ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ 32 ಮಂದಿ ಇದ್ದರು. ಅವರಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅಪಘಾತ ಹಿನ್ನೆಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಯಾಕೆಂದರೆ ಬಸ್ಸಿನಲ್ಲಿದ್ದ ಬಹುತೇಕ ಪ್ರಯಾಣಿಕರು ನಿದ್ದೆಗೆ ಜಾರಿದ್ದರು.
ಇದನ್ನೂ ಓದಿ: ಮೈಸೂರು ಮೃಗಾಲಯದಲ್ಲಿ ಹೆಣ್ಣು ಹುಲಿ ದುರಂತ ಅಂತ್ಯ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us