Massive Bus Tragedy : ಹಿರಿಯೂರು-ಶಿರಾ ಬಳಿ ಭೀಕರ ಬಸ್ ದುರಂತ, ಐವರು ಸಜೀವ ದಹನ

ಚಿತ್ರದುರ್ಗ ಬಳಿ ಇಂದು ನಸುಕಿನ ಜಾವ ನಡೆದ ಭೀಕರ ಅಪಘಾತದಲ್ಲಿ ಐವರು ಸಜೀವ ದಹನವಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಡುವೆ ಬರುವ ಗೋರ್ಲತ್ತು ಗ್ರಾಮದ ಬಳಿ ಬೆಳಗಿನ ಜಾವ 2 ಗಂಟೆಗೆ ಈ ಘಟನೆ ನಡೆದಿದೆ.

author-image
Siddeshkumar H P
chitradurga-district-between-hiriyuru---sira-seabird-bus-accident
Advertisment
  • ಹಿರಿಯೂರು-ಶಿರಾ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ
  • ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್‌ ಬಸ್
  • ಡಿವೈಡರ್ ದಾಟಿ ಬಸ್ ಗೆ ಡಿಕ್ಕಿಯಾಗಿರುವ ಕಂಟೇನರ್ ಲಾರಿ

ಚಿತ್ರದುರ್ಗ ಬಳಿ ಇಂದು ನಸುಕಿನ ಜಾವ ನಡೆದ ಭೀಕರ ಅಪಘಾತದಲ್ಲಿ ಐವರು ಸಜೀವ ದಹನವಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಡುವೆ ಬರುವ ಗೋರ್ಲತ್ತು ಗ್ರಾಮದ ಬಳಿ ಬೆಳಗಿನ ಜಾವ 2 ಗಂಟೆಗೆ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್​ ಬಸ್​​ಗೆ ಹಿರಿಯೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್​​ ಲಾರಿ ಮುಖಾಮುಖಿ ಡಿಕ್ಕಿಯಾದ ಕಾರಣ ಈ ದುರಂತ ಸಂಭವಿಸಿದೆ.

chitradurga-district-between-hiriyuru---sira-seabird-bus-accident2

chitradurga-district-between-hiriyuru---sira-seabird-bus-accident1

ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನಲಾಗಿದ್ದು ಡಿವೈಡರ್​ ದಾಟಿ ಬಂದು ಡಿಕ್ಕಿ ಹೊಡೆದಿದೆ. ಸದ್ಯದ ಮಾಹಿತಿ ಪ್ರಕಾರ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಬಸ್ಸಿನಲ್ಲಿದ್ದ ನಾಲ್ವರು ಹಾಗೂ ಲಾರಿ ಚಾಲಕ ಸೇರಿ ಒಟ್ಟು ಐವರು ಪ್ರಾಣ ಕಳೆದುಕೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಮೃತರೆಲ್ಲರೂ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದವರೇ ಆಗಿದ್ದು ಗುರುತು ಹಿಡಿಯಲಾರದಷ್ಟು ಸುಟ್ಟು ಕರಕಲಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

bus tragedy bus accidnet
Advertisment