/newsfirstlive-kannada/media/post_attachments/wp-content/uploads/2023/11/Murugha-Swamiji-Arrest.jpg)
ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಸ್ವಾಮೀಜಿ
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ನಿರಪರಾಧಿ ಎಂದು ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯವು ಮಹತ್ವದ ಆದೇಶ ನೀಡಿದೆ. ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್ ಇವತ್ತಿಗೆ ತೀರ್ಪನ್ನು ಕಾಯ್ದಿರಿಸಿತ್ತು.
ಜೊತೆಗೆ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಿಡುಗಡೆಗೂ ಕೋರ್ಟ್ ಆದೇಶ ನೀಡಿದೆ. ಇಬ್ಬರು ಸಂತ್ರಸ್ಥೆಯರ ದೂರು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿತ್ತು. ಮೊದಲ ಕೇಸ್ ನಲ್ಲಿ ಪೊಲೀಸರು ಎರಡು ಚಾರ್ಜ್ ಷೀಟ್ ಸಲ್ಲಿಸಿದ್ದರು. ಮೊದಲ ಕೇಸ್ ನಲ್ಲಿ ಈಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ನಿರ್ದೋಷಿ ಎಂದು ಚಿತ್ರದುರ್ಗದ ಕೋರ್ಟ್ ತೀರ್ಪು ನೀಡಿದೆ. ಇದು ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗೆ ಸಿಕ್ಕ ದೊಡ್ಡ ರೀಲೀಫ್.
ಇದೀಗ ಶ್ರೀಗಳು ನಿರಪರಾಧಿ ಎಂದು ನ್ಯಾಯಾಧೀಶ ಗಂಗಾಧರ್ ಚನ್ನಬಸಪ್ಪ ಹಡಪದ ತೀರ್ಪು ಪ್ರಕಟಿಸಿದ್ದಾರೆ. ಮೊದಲ ಪೋಕ್ಸೋ ಕೇಸ್​ ಸಂಬಂಧ A ಮತ್ತು B ಚಾರ್ಜ್ ಶೀಟ್ ಸಲ್ಲಿಕೆ ಆಗಿದ್ದವು. ಅಂದರೆ ಎರಡು ಪ್ರತ್ಯೇಕ ಚಾರ್ಜ್​​ಶೀಟ್ ಸಲ್ಲಿಕೆ ಆಗಿದ್ದವು. ಡಿವೈಎಸ್ಪಿ ಅನಿಲ್ ನೇತೃತ್ವದ ತಂಡವು ವಿಚಾರಣೆ ನಡೆಸಿ ಕೋರ್ಟ್​ಗೆ ಚಾರ್ಚ್ ಶೀಟ್ ಸಲ್ಲಿಕೆ ಮಾಡಿತ್ತು. ಪೊಲೀಸ್ ಮೂಲದಿಂದ ಸಲ್ಲಿಕೆಯಾದ ಚಾರ್ಜ್​ಶೀಟ್​ನ ಅಂಶಗಳನ್ನ ನೋಡೋದಾದರೆ, ಒಟ್ಟು 694 ಪುಟಗಳ ಚಾರ್ಜ್​​​ಶೀಟ್. ಪೋಕ್ಸೋ, ಅಟ್ರಾಸಿಟಿ, ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆಯಡಿ ಶ್ರೀಗಳ ವಿರುದ್ಧ ಕೇಸ್ ದಾಖಲಾಗಿತ್ತು.
ಇದನ್ನೂ ಓದಿ: ನಾವು ಯಾಕೆ ನವೆಂಬರ್ 26 ರಂದು ಸಂವಿಧಾನ ದಿನ ಆಚರಿಸುತ್ತೇವೆ..?
A1 ಮುರುಘಾ ಶ್ರೀ, A2 ರಶ್ಮಿ, A 4 ಪರಮಶಿವಯ್ಯ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಮಾಡಲಾಗಿತ್ತು. ಲೇಡಿ ವಾರ್ಡನ್ ಮೂಲಕ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಶ್ರೀಗಳ ಮೇಲಿತ್ತು.
/filters:format(webp)/newsfirstlive-kannada/media/media_files/2025/11/26/muruga-math-shivamurthy-swamiji-acquitted-1-2025-11-26-15-21-16.jpg)
ಪ್ರಕರಣದ ಹಿನ್ನೆಲೆ
ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿತ್ತು. ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.
ಅದೇ ವರ್ಷ ಆಗಸ್ಟ್ 27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿತ್ತು. 2022ರ ಸೆಪ್ಟೆಂಬರ್ 1 ರಂದು ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಬಂಧನಕ್ಕೊಳಗಾಗಿದ್ದರು. ನಂತರ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅಕ್ಟೋಬರ್ 13 ರಂದು ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಿಸಿದ್ದರು. ಆ ಕೇಸಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿದ್ದರು.
ಇದನ್ನೂ ಓದಿ: ‘ಮದುವೆ ನಡೆಯುತ್ತದೆ..’ ಪಾಲಶ್ ಮುಚ್ಚಲ್ ತಾಯಿ ಹೇಳಿದ್ದೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us