Advertisment
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಮೊಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದರು. ಈ ವೇಳೆ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜೈ ಹಿಂದ್, ಜೈ ಕರ್ನಾಟಕ, ಜೈ ಹಿಂದೂ ಮುಸಲ್ಮಾನ್ ಎಂದು ಘೋಷಣೆ ಕೂಗಿದ್ದಾರೆ. ತಮ್ಮ ಭಾಷಣದ ಕೊನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಮಾತನ್ನು ಹೇಳಿದ್ದಾರೆ.
Advertisment
ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕೈ ಹಿಡಿದು ವೇದಿಕೆಗೆ ಕರೆದುಕೊಂಡು ಬಂದರು. ಈ ವೇಳೆ ಬಾಲಕನೊಬ್ಬ ಸಿಎಂ ಸಿದ್ದರಾಮಯ್ಯ ಜೊತೆ ಸೆಲ್ಫಿ ಕ್ಲಿಕ್ ಮಾಡಿಕೊಂಡು ಥ್ಯಾಂಕ್ಸ್ ಕೊಟ್ಟು ಖುಷಿ ಪಟ್ಟನು. ಸಮಾರಂಭದಲ್ಲಿ ಮುಸ್ಲಿಂ ಮುಖಂಡರು ಸಿಎಂ ಸಿದ್ದರಾಮಯ್ಯಗೆ ಶಾಲು ಹೊದಿಸಿ, ಟೋಪಿ ಹಾಕಿ ಸನ್ಮಾನ ಮಾಡಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us