/newsfirstlive-kannada/media/media_files/2025/08/15/cm_siddaramaiah_1-2025-08-15-09-02-19.jpg)
ಬೆಂಗಳೂರು: 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ಸಿಎಂ ತೆರೆದ ಜೀಪ್ನಲ್ಲಿ ಪರೇಡ್ ವೀಕ್ಷಣೆ ಮಾಡಿದರು.
79ನೇ ಸ್ವಾತಂತ್ರ್ಯೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ತೆರೆದ ಜೀಪ್ನಲ್ಲಿ ಪೆರೇಡ್ ವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಈ ಸಮಾರಂಭದಲ್ಲಿ ರಾಜ್ಯ ಸಂಪುಟ ಸಚಿವರು, ರಾಜ್ಯದ ಶಾಸಕರು, ಅಧಿಕಾರಿಗಳು ಹಾಗೂ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಭಾಗವಹಿಸಿದ್ದಾರೆ.
ಈ ಅದ್ಧೂರಿ ಕಾರ್ಯಕ್ರಮದಲ್ಲಿ 8 ಸಾವಿರ ಜನರು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿತ್ತು. ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಮೆರಗು ಪಡೆದುಕೊಂಡವು. ಕೆಎಸ್‌ಆರ್‌ಪಿ, ಸಿಆರ್‌ಪಿಎಫ್, ಬಿಎಸ್ ಎಫ್, ಗೋವಾ ಪೊಲೀಸ್ ತಂಡ ಸೇರಿ ವಿವಿಧ ಇಲಾಖೆಯ 35 ತುಕಡಿಗಳಲ್ಲಿ 1,150 ಮಂದಿಯಿಂದ ಪಥ ಸಂಚಲನ ಹಾಗೂ ಸರ್ಕಾರಿ ಮತ್ತು ಬಿಬಿಎಂಪಿಯ 1,150 ವಿದ್ಯಾರ್ಥಿಗಳು ಹಾಗೂ ಕರ್ನಾಟಕ ಪೊಲೀಸ್ ಸಮೂಹ ವಾದ್ಯಮೇಳದ 253 ಅಧಿಕಾರಿ, ಸಿಬ್ಬಂದಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿತು.
ಇದನ್ನೂ ಓದಿ:ಕೆಂಪು ಕೋಟೆಯಲ್ಲಿ PM ಮೋದಿ ಭಾಷಣ; ಆಪರೇಷನ್ ಸಿಂಧೂರು ನಮ್ಮ ಹೊಸ ಮಾದರಿ, ಎದುರಾಳಿಗೆ ಸಂದೇಶ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮೈದಾನದಲ್ಲಿ ವ್ಯಾಪಕ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಸಂಚಾರ ನಿರ್ವಹಣೆ ಹಾಗೂ ಆಚರಣೆಗೆ ಆಗಮಿಸುವ ಗಣ್ಯರು ಮತ್ತು ಸಾರ್ವಜನಿಕರಿಗೆ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು. ಭದ್ರತೆಗಾಗಿ ಡಿಸಿಪಿ, ಎಸಿಪಿ, ಪೊಲೀಸ್ ಅಧಿಕಾರಿಗಳು, ಪಿಎಸ್‌ಐ, ಎಎಸ್‌ಐ, ಪಿಸಿ, ಮಹಿಳಾ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.
ಮೈದಾನ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ ಹೆಚ್ಚುವರಿ 100 ಸಿಸಿ ಕ್ಯಾಮೆರಾ ವ್ಯವಸ್ಥೆ, ಬ್ಯಾಗೇಜ್ ಸ್ಕ್ಯಾನರ್, ಕೆಎಸ್‌ಆರ್‌ಪಿ ಮತ್ತು ಸಿಆರ್‌ತುಕಡಿ, ಎರಡು ಅಗ್ನಿಶಾಮಕ ವಾಹನ, ಎರಡು ಆ್ಯಂಬುಲೆನ್ಸ್ ವಾಹನ, ಕ್ಷಿಪ್ರ ಕಾರ್ಯಾಚರಣೆ ಪಡೆ, ಬಾಂಬ್ ನಿಷ್ಕ್ರಿಯ ದಳ ತಂಡದ ನಿಯೋಜನೆ ಮಾಡಲಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ