/newsfirstlive-kannada/media/media_files/2025/11/08/kv-prabhakar-2025-11-08-15-49-37.jpg)
ಕೋಲಾರ: ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು ಮಹೋನ್ನತ ಪರಂಪರೆ ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.
ಕೋಲಾರ ಕುರುಬರ ಸಂಘ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನಕದಾಸರ ಹೆಸರನ್ನು ನಾವು ಕರೆಯುವಾಗ ಇವರ ಜೊತೆಗೆ ಬುದ್ದ, ಬಸವ, ಕನಕ ಎಂದು ಕರೆಯುತ್ತೇವೆ. ಅಂದರೆ ಬುದ್ದನಿಂದ ಶುರುವಾಗುವ ಮಹೋನ್ನತ ಪರಂಪರೆಯ ಭಾಗವಾಗಿ ಕನಕರನ್ನು ನಾವು ಆರಾಧಿಸುತ್ತೇವೆ. ಆದ್ದರಿಂದ ಕನಕ ಜಯಂತಿಯಂದು ನಾವು ನಮ್ಮ ಪರಂಪರೆಯ ಬೇರುಗಳಿಗೆ ಚೈತನ್ಯ ತುಂಬುವಂತಾಗಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: ಜೈಲಿನಲ್ಲಿ ವಿಕೃತ ಕಾಮಿ ಉಮೇಶ್ ರೆಡ್ಡಿ ಬಳಿ ಮೂರು ಪೋನ್ ಪತ್ತೆ! : ಉಮೇಶ್ ರೆಡ್ಡಿ ಪೋನ್ ನಲ್ಲಿ ಮಾತುಕತೆ ವಿಡಿಯೋ ಬಿಡುಗಡೆ!
/filters:format(webp)/newsfirstlive-kannada/media/media_files/2025/11/08/kv-prabhakar-1-2025-11-08-15-52-15.jpg)
ದಾಸಶ್ರೇಷ್ಠ ಕನಕರು ನಮ್ಮ ಪರಂಪರೆಯ ನೈತಿಕ ಮತ್ತು ಅಧ್ಮಾತ್ಮಿಕ ಶಕ್ತಿಯಾಗಿದ್ದಾರೆ. ಬಹಳ ಮಂದಿ ಕನಕದಾಸರಿಂದ ನಮ್ಮ ಪರಂಪರೆ ಆರಂಭವಾಗಿದೆ ಎನ್ನುವ ತಪ್ಪು ಕಲ್ಪನೆಯಲ್ಲಿದ್ದಾರೆ. ಅಲೆಮಾರಿಯಾಗಿದ್ದ ಮನುಷ್ಯ ಜನಾಂಗ ಕೃಷಿಗಿಂತ ಮೊದಲೇ ಪಶುಪಾಲನೆ ಕಂಡುಕೊಂಡಿತ್ತು. ಹಸು, ಕುರಿ, ಮೇಕೆ, ಕುದುರೆ ಸಾಕುತ್ತಿದ್ದವರೆಲ್ಲಾ ಕುರುಬರೇ ಅನ್ನಿಸಿಕೊಂಡ ಚರಿತ್ರೆ ಇದೆ.
ನಾಣ್ಯ ಮತ್ತು ನೋಟುಗಳು ಬರುವ ಮೊದಲು ಕುರಿ ಮತ್ತು ಹಸುಗಳೇ ನಾಣ್ಯಗಳಾಗಿದ್ದವು. ಕುರಿ, ಹಸುಗಳನ್ನು ಕೊಟ್ಟು ಇತರೆ ವಸ್ತು, ಪದಾರ್ಥಗಳನ್ನು ಕೊಳ್ಳಲಾಗುತ್ತಿತ್ತು. ಅಂದರೆ ಹೆಚ್ಚು ಕುರಿ, ಹಸು ಇರುವವನೇ ಹೆಚ್ಚು ಶ್ರೀಮಂತ, ಒಡೆಯನಾಗಿದ್ದ ಪರಂಪರೆ ನಮ್ಮದು. ಅಂದರೆ ಪ್ರಾಚೀನ ಭಾರತದ ಆರ್ಥಿಕತೆಯೇ ಕುರುಬರ, ಪಶುಪಾಲಕರ ಕೈಯಲ್ಲಿ ಇತ್ತು. ಇಡೀ ದೇಶದ ಆರ್ಥಿಕತೆಯನ್ನು ನಿಭಾಯಿಸುತ್ತಿದ್ದ ಪರಂಪರೆಯಿಂದ ಬಂದ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪರಂಪರೆಯ ಮುಂದುವರಿಕೆಯಾಗಿ 16 ಬಜೆಟ್​​ಗಳನ್ನು ಮಂಡಿಸಿ ದಾಖಲೆ ಮೆರೆದಿದ್ದಾರೆ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ಸೂಚಿಸಿದರು.
ಇದನ್ನೂ ಓದಿ: T20 World Cup 2026; ಪಂದ್ಯಗಳು ನಡೆಯುವುದು ಎಲ್ಲೆಲ್ಲಿ, ಬೆಂಗಳೂರಲ್ಲೂ ಮ್ಯಾಚ್​ ಇವೆಯಾ?
/filters:format(webp)/newsfirstlive-kannada/media/media_files/2025/11/08/kv-prabhakar-2-2025-11-08-15-52-30.jpg)
ನಮ್ಮ ಕುರುಬ ಪರಂಪರೆಗೆ ಧಾರ್ಮಿಕ ಸಹಿಷ್ಣುತೆ ಮತ್ತು ಜಾತ್ಯತೀತತೆಯ ಚರಿತ್ರೆಯೂ ಇದೆ. ಕನಕ ದಾಸರು "ತಲ್ಲಣಿಸದಿರು ತಾಳು ಮನವೇ" ಎಂದು ಹಾಡುವಾಗ ಬೌದ್ಧ, ಇಸ್ಲಾಂ, ಕ್ರೈಸ್ತ ಧರ್ಮಗಳ ಜೊತೆಗಿನ ಒಡನಾಟವನ್ನೂ ಹೇಳುತ್ತಾರೆ. ಏಸುಕ್ರಿಸ್ತರ ಮಡಿಲಲ್ಲೂ ಕುರಿ ಇದೆ. ಪೈಗಂಬರರೂ ಕುರಿಸಾಕಾಣಿಕೆಯ ಪರಂಪರೆ ಜೊತೆಗಿದ್ದವರು ಎನ್ನುವುದನ್ನು ಅಧ್ಯಯನಗಳು ಹೇಳುತ್ತವೆ.
ಕುರುಬರ ಕುಲದೈವಗಳು, ದೇವತೆಗಳು, ಸಾಂಸ್ಕೃತಿಕ ನಾಯಕರು, ನಾಯಕಿಯರನ್ನೆಲ್ಲಾ ನೋಡಿದರೆ ಅಂತರ್ಜಾತಿ ವಿವಾಹ ಮತ್ತು ಜಾತ್ಯತೀತ ಪರಂಪರೆಯೂ ನಮಗೆ ಗೊತ್ತಾಗುತ್ತದೆ. ಹೇಮರೆಡ್ಡಿ ಮಲ್ಲಮ್ಮ ಅಂದರೆ ರೆಡ್ಡಿ ಜನಾಂಗದ ಜೊತೆಗಿನ ನಮ್ಮ ಒಡನಾಟವನ್ನೂ ಹೇಳುತ್ತದೆ. ಹೀಗೆ ಬಲಿಜ, ಗೊಲ್ಲ, ನಾಯಕ, ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ ಜಾತಿಗಳ ಜೊತೆಗೆ ನಮ್ಮ ದೈವಗಳು, ಸಾಂಸ್ಕೃತಿಕ ಪುರುಷರು ಬೆರೆತು ಸಂಬಂಧಗಳನ್ನು ಏರ್ಪಡಿಸಿಕೊಂಡ ಜಾತ್ಯತೀತ ಪರಂಪರೆಯೂ ನಮ್ಮ ರಕ್ತದಲ್ಲೇ ಬಂದಿದೆ. ಇದನ್ನೆಲ್ಲಾ ಮುಂದೆ ಯಾವತ್ತಾದರೂ ವಿವರವಾಗಿ ಮಾತನಾಡುತ್ತೇನೆ ಎಂದರು.
ಹೀಗಾಗಿ ಕನಕದಾಸರ ಜಯಂತಿಯಂದು ನಾವು ನಮ್ಮ ಪರಂಪರೆಯ ಆಳ-ಅಗಲವನ್ನು ಅರಿಯುವ ಮೂಲಕ ನಮ್ಮ ಪರಂಪರೆಯ ಬೇರುಗಳನ್ನು ಗಟ್ಟಿಗೊಳಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us