Advertisment

ಬಂಡವಾಳ ಹೂಡಿಕೆಗೆ ನಿರ್ಣಯ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿ.ಎಂ ಸಿದ್ದರಾಮಯ್ಯ ಎಚ್ಚರಿಕೆ

ಸಿಎಂ ಸಿದ್ದರಾಮಯ್ಯ ಇಂದು ಕೈಗಾರಿಕೆ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಬಂಡವಾಳ ಹೂಡಿಕೆಗೆ ಸರ್ಕಾರದ ತೀರ್ಮಾನವನ್ನ ಸಕಾಲದಲ್ಲಿ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಬೇಗನೇ ಕೈಗಾರಿಕೆ ಸ್ಥಾಪನೆಗೆ ಅನುಮೋದನೆ ನೀಡಲು ಸೂಚಿಸಿದ್ದಾರೆ.

author-image
Chandramohan
cm siddu and mb patil n dks

ಸಿಎಂ ಅಧ್ಯಕ್ಷತೆಯಲ್ಲಿ ಬಂಡವಾಳ ಆಕರ್ಷಣೆ ಬಗ್ಗೆ ಉನ್ನತ ಮಟ್ಟದ ಸಭೆ

Advertisment
  • ಸಿಎಂ ಅಧ್ಯಕ್ಷತೆಯಲ್ಲಿ ಬಂಡವಾಳ ಆಕರ್ಷಣೆ ಬಗ್ಗೆ ಉನ್ನತ ಮಟ್ಟದ ಸಭೆ
  • ತ್ವರಿತಗತಿಯಲ್ಲಿ ಕೈಗಾರಿಕೆಗಳಿಗೆ ಅನುಮೋದನೆ ನೀಡಲು ಸಿಎಂ ಸೂಚನೆ
  • ಬಂಡವಾಳ ಹೂಡಿಕೆ ವಾತಾವರಣ ಉತ್ತಮಪಡಿಸಲು ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ಕೈಗಾರಿಕಾ ಇಲಾಖೆ ಹಾಗೂ ಬಂಡವಾಳ ಆಕರ್ಷಣೆಯ ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದ್ದರು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌,  ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ , ಕಾರ್ಮಿಕ ಸಚಿವ ಸಂತೋಷ್ ಲಾಡ್‌,  ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌ ಸೇರಿದಂತೆ ಅನೇಕ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು.

Advertisment

 ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ ಮುಖ್ಯಾಂಶಗಳು

•    ಕರ್ನಾಟಕ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಬಂಡವಾಳ ಹೂಡಿಕೆಗೆ ಪೂರಕವಾದ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಯಾವುದೇ ಕಾರಣಕ್ಕೂ ಅನುಮೋದನೆಗಳ ನೀಡಿಕೆಯಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದು. ಈ ಕುರಿತು ಮುಖ್ಯ ಕಾರ್ಯದರ್ಶಿಯವರು ಎಲ್ಲಾ ಇಲಾಖೆಗಳಿಗೆ ಸೂಕ್ತ ನಿರ್ದೇಶನಗಳನ್ನು ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಸೂಚನೆ ನೀಡಿದರು.

•    ಕೈಗಾರಿಕಾ ಸ್ನೇಹಿ ವ್ಯವಸ್ಥೆಯನ್ನು ಉತ್ತಮಪಡಿಸಲು ಕಾನೂನು ಮತ್ತು ನಿಯಮಾವಳಿಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು

•    ಕೈಗಾರಿಕೆಗಳ ಆರಂಭಕ್ಕೆ ಅಗತ್ಯವಾದ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು. 

Advertisment

•    ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಅನುಮೋದನೆ ನೀಡುವ ಕಾಲಮಿತಿಯನ್ನು ಮರು ನಿಗದಿಪಡಿಸಬೇಕು. ಕಾಲಮಿತಿಯಲ್ಲಿ ಅನುಮೋದನೆಗಳನ್ನು ನೀಡಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.

•    ಕೈಗಾರಿಕೆಗಳಿಗೆ ರಸ್ತೆ, ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.

•    ಹಸಿರು ಇಂಧನ ಮೂಲಗಳಿಂದ ಕೈಗಾರಿಕೆಗಳಿಗೆ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಅಸಾಂಪ್ರದಾಯಿಕ ಇಂಧನ ಮೂಲಗಳಿಗೆ ಆದ್ಯತೆ ನೀಡಬೇಕು. ಇದಕ್ಕಾಗಿ ವ್ಯವಸ್ಥಿತ ಯೋಜನೆ ರೂಪಿಸಬೇಕು.

Advertisment

•    ಕೇಂದ್ರ ಸರ್ಕಾರ 2 ಪ್ರಮುಖ ಕಾರ್ಮಿಕ ಸುಧಾರಣೆಗಳ ಅನುಷ್ಠಾನವನ್ನು ಪ್ರಸ್ತಾಪಿಸಿದೆ. ಕಾರ್ಮಿಕರ ಕೆಲಸದ ಅವಧಿಯನ್ನು ಮರು ನಿಗದಿಪಡಿಸುವ ಸಂದರ್ಭದಲ್ಲಿ ಕಾರ್ಮಿಕರ ಹಿತವನ್ನು ಗಮನದಲ್ಲಿಡಲಾಗುವುದು.

•    ಏಕಗವಾಕ್ಷಿ ವ್ಯವಸ್ಥೆಯಡಿ ಅರ್ಜಿಗಳ ವಿಲೇವಾರಿ ಆಗುತ್ತಿಲ್ಲ ಎಂದು ದೂರುಗಳಿವೆ. ಎಲ್ಲಾ ಸೇವೆಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ 29 ಸೇವೆಗಳು ಏಕಗವಾಕ್ಷಿ ವ್ಯವಸ್ಥೆಯಿಂದ ಹೊರಗಿದ್ದು, ಅವುಗಳನ್ನು ಸಹ ಇದರಡಿ ತರಬೇಕು. ಎಲ್ಲಾ ಅರ್ಜಿಗಳನ್ನು ಏಕಗವಾಕ್ಷಿ ವ್ಯವಸ್ಥೆಯಡಿ ಏಕೀಕೃತ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

•    ರಾಜ್ಯದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರೂ.10.27 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲಾಗಿದ್ದು, ಈಗಾಗಲೇ ಶೇ.60ರಷ್ಟು ಹೂಡಿಕೆಗಳು  ಅನುಷ್ಠಾನ ಹಂತದಲ್ಲಿವೆ.

Advertisment

•    ಸುಮಾರು ರೂ.1.5 ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ವಿವಿಧ ಹಂತದಲ್ಲಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. 

cm siddu and mb patil n dks02





ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

CM SIDDU INDUSTRY MINISTRY MEETING
Advertisment
Advertisment
Advertisment