/newsfirstlive-kannada/media/media_files/2026/01/06/cm-siddu-fans-nati-chicken-feast-at-nelamangala-1-2026-01-06-19-50-52.jpg)
ರಾಜ್ಯದಲ್ಲಿ ಅತಿ ಹೆಚ್ಚು ಅವಧಿಗೆ ಸಿಎಂ ಆದ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸಿಎಂ ಆಗಿ 2,792 ದಿನವನ್ನು ಪೂರೈಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಅಭಿಮಾನಿಗಳ ಖುಷಿಗೆ ಕಾರಣವಾಗಿದೆ. ಅಭಿಮಾನಿಗಳ ಖುಷಿಗೆ ಇಂದು ಪಾರವೇ ಇಲ್ಲ. ರಾಜ್ಯದ ಉದ್ದಗಲಕ್ಕೂ ಸಿದ್ದರಾಮಯ್ಯ ಅಭಿಮಾನಿಗಳು ಈ ದಿನವನ್ನು ಸಂಭ್ರಮಿಸುತ್ತಿದ್ದಾರೆ. ಬೀದರ್ ನಿಂದ ಹಿಡಿದು ಚಾಮರಾಜನಗರ ಜಿಲ್ಲೆಯವರೆಗೂ ಅಭಿಮಾನಿಗಳು ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಬೀದರ್ ನಲ್ಲಿ ಸಿದ್ದು ಕಟೌಟ್ ಹಿಡಿದು ಮೆರವಣಿಗೆ
ಬೀದರ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ 6 ಅಡಿ ಕಟೌಟ್ ಹಿಡಿದು ಮೆರವಣಿಗೆ ಮಾಡಿದ್ದಾರೆ. ಬೀದರ್ ನಗರದ ಅಂಬೇಡ್ಕರ್ ವೃತ್ತದಿಂದ ಬಸವೇಶ್ವರ ವೃತ್ತ, ಬೊಮ್ಮಗುಂಡೇಶ್ವರ ವೃತ್ತ, ಭಗತ್‌ಸಿಂಗ್ ವೃತ್ತದವರೆಗೆ ಮೆರವಣಿಗೆ ಮಾಡಿದ್ದಾರೆ. ಅಂಬೇಡ್ಕರ ವೃತ್ತ, ಬಸವೇಶ್ವರ ವೃತ್ತಗಳಲ್ಲಿ ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಹಿಂದ ನಾಯಕ ಸಿಎಂ ಸಿದ್ದು ಎಂದು ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದ್ದಾರೆ. ಅತಿ ಹೆಚ್ಚು ಕಾಲ ಸಿಎಂ ಆಗಿ ದೇವರಾಜ ಅರಸ್ ದಾಖಲೆ ಮುರಿದ ಸಿದ್ದರಾಮಯ್ಯ ಬಗ್ಗೆ ಜನರ ಅಭಿಮಾನ, ಪ್ರೀತಿ ಉಕ್ಕಿ ಬಂದಿದೆ. ದಾಖಲೆ ಬರೆದ ಅಹಿಂದ ನಾಯಕ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಮೆರವಣಿಗೆಯಲ್ಲಿ ಗ್ಯಾರಂಟಿ ಯೋಜನೆ ಜಿಲ್ಲಾ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಅಹಿಂದ ಸಂಘಟನೆಯ ಜಿಲ್ಲಾಧ್ಯಕ್ಷ ತುಕಾರಮ್ ಸೇರಿದಂತೆ ಸಿದ್ದು ಅಭಿಮಾನಿಗಳು ಭಾಗಿಯಾಗಿದ್ದರು.
ಮಂಡ್ಯ ಜಿಲ್ಲೆಯಲ್ಲಿ ಹಾಲಿನ ಅಭಿಷೇಕ, ಪಟಾಕಿ ಸಿಡಿತ
ಇನ್ನೂ ಮಂಡ್ಯ ಜಿಲ್ಲೆಯಲ್ಲೂ ಸಿದ್ದರಾಮಯ್ಯ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ವಿಶಿಷ್ಟವಾಗಿ ಅಭಿನಂದನೆಯನ್ನು ಅಭಿಮಾನಿಗಳು,ಜನರು ಸಲ್ಲಿಸಿದ್ದಾರೆ. ಪಟಾಕಿ ಸಿಡಿಸಿ, ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಾರಸಿಂಗನಹಳ್ಳಿ ಹಾಗೂ ಕೊರೆಮೇಗೌಡನಕೊಪ್ಪಲು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. "ದಾಖಲೆ ರಾಮಯ್ಯ ಸಿದ್ದರಾಮಯ್ಯಗೆ ಅಭಿನಂದನೆಗಳು". ಕುರಿ ಕಾಯ್ದ ಹುಡುಗನಯ್ಯ, ಕರ್ನಾಟಕಕ್ಕೆ ಅನ್ನಭಾಗ್ಯ ಕೊಟ್ಟ ಅನ್ನರಾಮಯ್ಯ ಎಂದು ಬೃಹತ್ ಪ್ಲೆಕ್ಸ್ ಅಳವಡಿಸಿದ್ದಾರೆ. ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ್ದಾರೆ. ಪಟಾಕಿ ಸಿಡಿಸಿ ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಹಾಲು ವಿತರಿಸಿ ಅನ್ನಸಂತರ್ಪಣೆ ಮಾಡಿದ್ದಾರೆ.
/filters:format(webp)/newsfirstlive-kannada/media/media_files/2026/01/06/cm-siddu-fans-nati-chicken-feast-at-nelamangala-3-2026-01-06-19-52-56.jpg)
ನೆಲಮಂಗಲದಲ್ಲಿ 2 ಕ್ವಿಂಟಾಲ್ ನಾಟಿ ಕೋಳಿ ಊಟ
ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿಯ ಭಕ್ತನಪಾಳ್ಯದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ವಿಶಿಷ್ಟವಾಗಿ ಸಂಭ್ರಮಾಚರಣೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಫೇವರಿಟ್ ನಾಟಿ ಕೋಳಿ, ಮುದ್ದೆ ಊಟವನ್ನು ಸಿದ್ದಪಡಿಸಿ ಜನರಿಗೆ ಬಡಿಸಿದ್ದಾರೆ. 2 ಕ್ವಿಂಟಾಲ್ ನಾಟಿ ಕೋಳಿಯ ನಾನ್ ವೆಜ್ ಊಟವನ್ನು ಜನರಿಗೆ ಬಡಿಸಿದ್ದಾರೆ.
/filters:format(webp)/newsfirstlive-kannada/media/media_files/2026/01/06/cm-siddu-fans-nati-chicken-feast-at-nelamangala-2-2026-01-06-19-51-13.jpg)
ಇನ್ನೂ ಅನೇಕ ಕಡೆ ಸಿದ್ದರಾಮಯ್ಯ ಅಭಿಮಾನಿಗಳು ಇಂದಿನ ದಿನವನ್ನು ಹಬ್ಬದಂತೆ ಆಚರಿಸಿದ್ದಾರೆ. ಜನರಿಗೆ ಸಿಹಿ ಹಂಚಿದ್ದಾರೆ. ಕುಣಿದು ಕುಪ್ಪಳಿಸಿದ್ದಾರೆ. ನಮ್ಮ ನಾಯಕ ದಾಖಲೆ ಮುರಿದ ನಾಯಕ ಎಂಬುದು ಅಭಿಮಾನಿಗಳ ಸಂತಸಕ್ಕೆ ಪಾರವೇ ಇಲ್ಲದಂತೆ ಮಾಡಿದೆ. ಅಂದು ದೇವರಾಜ ಅರಸ್ ಉಳುವವನೆ ಭೂಮಿಯ ಒಡೆಯ ಕಾಯಿದೆ ತಂದು ಭೂ ರಹಿತರನ್ನು ಭೂಮಾಲೀಕರನ್ನಾಗಿ ಮಾಡಿದ್ದರು. ಇಂದು ಸಿದ್ದರಾಮಯ್ಯ ಹಸಿದ ಹೊಟ್ಟೆಗೆ ಅನ್ನ ನೀಡಿದ್ದಾರೆ. ಅನ್ನರಾಮಯ್ಯ ಆಗಿದ್ದಾರೆ. ಈಗ ದಾಖಲೆ ರಾಮಯ್ಯ ಆಗಿರೋದು ಅಭಿಮಾನಿಗಳ ಖುಷಿಗೆ ಕಾರಣವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us