/newsfirstlive-kannada/media/media_files/2026/03/04/kerc-electricity-price-revision-3-2026-03-04-18-28-49.jpg)
ಕರ್ನಾಟಕದಲ್ಲಿ ಕೆಇಆರ್‌ಸಿ ಕೈಗಾರಿಕೆ ಮತ್ತು ವಾಣಿಜ್ಯ ಸಂಪರ್ಕದ ವಿದ್ಯುತ್ ದರವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ. ಅದೇ ವೇಳೆ ಕೃಷಿ ಪಂಪ್ ಸೆಟ್ ವಿದ್ಯುತ್ ದರವನ್ನು ಇಳಿಕೆ ಮಾಡಿದೆ. ಕೃಷಿ ಪಂಪ್ ಸೆಟ್ ವಿದ್ಯುತ್ ದರವನ್ನು ರಾಜ್ಯ ಸರ್ಕಾರ ಪಾವತಿಸುವುದರಿಂದ ರಾಜ್ಯ ಸರ್ಕಾರಕ್ಕೆ ಬರುವ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ. ಕೈಗಾರಿಕೆ ಮತ್ತು ವಾಣಿಜ್ಯ ಸಂಪರ್ಕದ ವಿದ್ಯುತ್ ದರವನ್ನು ಏರಿಕೆ ಮಾಡಲಾಗಿದೆ.
ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ಹಿಂದಿನ ಹಣಕಾಸು ವರ್ಷದಲ್ಲಿ ಆದಾಯ ನಷ್ಟ ಅನುಭವಿಸಿದ್ದವು. ಹೀಗಾಗಿ ವಿದ್ಯುತ್ ದರ ಹೆಚ್ಚಳ ಮಾಡಬೇಕೆಂದು ಕೆಇಆರ್‌ಸಿ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದವು. ಇದರ ಬಗ್ಗೆ ಕೆಇಆರ್‌ಸಿ ಸಾರ್ವಜನಿಕ ವಿಚಾರಣೆ ನಡೆಸಿ ಈಗ ವಿದ್ಯುತ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ. 2025-26 ನೇ ಸಾಲಿಗೆ ಪೂರ್ವಾನ್ವಯವಾಗುವಂತೆ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಅಂದರೇ, 2025ರ ಏಪ್ರಿಲ್ ನಿಂದಲೇ ವಿದ್ಯುತ್ ದರ ಏರಿಕೆ ಜಾರಿಯಾಗಲಿದೆ.
ಕಳೆದ ಹಣಕಾಸು ವರ್ಷದಲ್ಲಿ ಎಸ್ಕಾಂಗಳು 4,620 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದವು. ವಿದ್ಯುತ್ ದರ ಪರಿಷ್ಕರಣೆ ಮೂಲಕ ಈ ನಷ್ಟ ತುಂಬಿಕೊಡುವಂತೆ ಎಸ್ಕಾಂಗಳು ಕೆಇಆರ್‌ಸಿಗೆ ಮನವಿ ಮಾಡಿದ್ದವು. ಎಲ್‌ಟಿ -3ಎ ವಾಣಿಜ್ಯ ವಿದ್ಯುತ್ ದರವನ್ನು ಯೂನಿಟ್‌ಗೆ 7 ರೂಪಾಯಿಯಿಂದ 7 ರೂಪಾಯಿ 10 ಪೈಸೆಗೆ ಏರಿಕೆ ಮಾಡಲಾಗಿದೆ. ಎಲ್‌ಟಿ-5 ಕೈಗಾರಿಕೆ ವಿದ್ಯುತ್ ದರವನ್ನು ಯೂನಿಟ್‌ಗೆ 4.50 ರೂಪಾಯಿಯಿಂದ 5.20 ರೂಪಾಯಿಗೆ ಏರಿಕೆ ಮಾಡಲಾಗಿದೆ. ಎಚ್‌ಟಿ-2ಎ ಕೈಗಾರಿಕೆ ವಿದ್ಯುತ್ ದರವನ್ನು 6.60 ರೂಪಾಯಿಯಿಂದ 6.70 ರೂಪಾಯಿ ಏರಿಕೆ ಮಾಡಲಾಗಿದೆ. ಎಚ್‌ಟಿ-2ಬಿ ವಾಣಿಜ್ಯ ವಿದ್ಯುತ್ ದರವನ್ನು 5.95 ರೂಪಾಯಿಯಿಂದ 6.90 ರೂಪಾಯಿಗೆ ಏರಿಕೆ ಮಾಡಲಾಗಿದೆ.
ಇನ್ನೂ ಕೃಷಿಗೆ ಬಳಸುವ ವಿದ್ಯುತ್ ದರವನ್ನು ಕಡಿಮೆ ಮಾಡಲಾಗಿದೆ. ಕೃಷಿ ಪಂಪ್ ಸೆಟ್ ವಿದ್ಯುತ್ ಅನ್ನು ಪ್ರತಿ ಯೂನಿಟ್‌ಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 8.30 ರೂಪಾಯಿಯಿಂದ 6.57 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 7.40 ರೂಪಾಯಿ, ಚೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 7.70 ರೂಪಾಯಿ, ಹೆಸ್ಕಾಂ ವ್ಯಾಪ್ತಿಯಲ್ಲಿ 7.73 ರೂಪಾಯಿ, ಜೆಸ್ಕಾಂ ವ್ಯಾಪ್ತಿಯಲ್ಲಿ 7.79 ರೂಪಾಯಿಗೆ ಕಡಿಮೆ ಮಾಡಲಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಹೆಚ್ಚಿನ ಜಿಲ್ಲೆಗಳಿವೆ. ಜೊತೆಗೆ ಹೆಚ್ಚಿನ ಕೃಷಿ ಪಂಪ್ ಸೆಟ್ ಗಳೂ ಕೂಡ ಇವೆ. ಹೀಗಾಗಿ ಬೆಸ್ಕಾಂ ವ್ಯಾಪ್ತಿಯಲ್ಲಿ ಕಡಿಮೆ ವಿದ್ಯುತ್ ದರವನ್ನು ಕೃಷಿ ಪಂಪ್ ಸೆಟ್ ಗಳಿಗೆ ನಿಗದಿ ಮಾಡುವ ಮೂಲಕ ರಾಜ್ಯ ಸರ್ಕಾರ ಕೃಷಿ ಪಂಪ್ ಸೆಟ್ ವಿದ್ಯುತ್ ಗೆ ನೀಡುವ ಸಬ್ಸಿಡಿ ಪ್ರಮಾಣ ಕಡಿಮೆಯಾಗುವಂತೆ ಚಾಣಾಕ್ಷ ತಂತ್ರ ಅನುಸರಿಸಲಾಗಿದೆ.
ಕೃಷಿ ಪಂಪ್ ಸೆಟ್ ವಿದ್ಯುತ್ ದರವನ್ನು ಕಡಿಮೆ ಮಾಡಿರುವುದರಿಂದ ರಾಜ್ಯ ಸರ್ಕಾರವು ಕೃಷಿ ಪಂಪ್ ಸೆಟ್ ವಿದ್ಯುತ್‌ಗೆ ನೀಡುವ ಸಬ್ಸಿಡಿ ಮೊತ್ತವು 1,254 ಕೋಟಿ ರೂಪಾಯಿ ಕಡಿಮೆಯಾಗಲಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹಣದ ಉಳಿತಾಯವಾಗಲಿದೆ.
/filters:format(webp)/newsfirstlive-kannada/media/media_files/2026/03/04/kerc-electricity-price-revision-4-2026-03-04-18-32-57.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us