Advertisment

ಹೆಚ್ಚುವರಿ 5Kg ಅಕ್ಕಿ ಬದಲು ಸರ್ಕಾರದಿಂದ ಇಂದಿರಾ ಕಿಟ್.. ಡಿಸಿಎಂ ಡಿ.ಕೆ ಶಿವಕುಮಾರ್ ಏನಂದ್ರು?

ಜನಸಾಮಾನ್ಯರು ಹಾಗೂ ಶಾಸಕರ ಜೊತೆ ಚರ್ಚಿಸಿ ತೀರ್ಮಾನ ಮಾಡಿದ್ದೇವೆ. ಸಾಮಾನ್ಯವಾಗಿ ಪ್ರತಿ ಕುಟುಂಬದಲ್ಲಿ ತಿಂಗಳಿಗೆ ವ್ಯಕ್ತಿಗೆ 5-6 ಕೆ.ಜಿಗೆ ಅಕ್ಕಿ ಮಾತ್ರ ಬಳಸುತ್ತಾರೆ. ಹೀಗಾಗಿ ನಾವು ಕೊಟ್ಟ ಮಾತನ್ನೂ ಉಳಿಸಿಕೊಳ್ಳುವುದಕ್ಕೆ ಇಂದಿರಾ ಕಿಟ್ ವಿತರಿಸಲು ಮಾರ್ಗದರ್ಶನ ನೀಡಲಾಗಿದೆ.

author-image
Bhimappa
dk shivakumar (6)

ಡಿಕೆ ಶಿವಕುಮಾರ್, ಉಪಮುಖ್ಯಮಂತ್ರಿ

Advertisment

ಬೆಂಗಳೂರು: ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿರುವ ಅಕ್ಕಿ ದುರ್ಬಳಕೆ ಆಗುತ್ತಿರುವುದನ್ನು ತಪ್ಪಿಸಲು, ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದಂತೆ ಐದಾರು ಪದಾರ್ಥ ಇರುವ ಇಂದಿರಾ ಕಿಟ್ ವಿತರಣೆ ಮಾಡಲು ಸರ್ಕಾರ ಚಿಂತನೆ ಮಾಡಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. 

Advertisment

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆದ ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಾತನಾಡಿ, ಈ ಸರ್ಕಾರ ಬರುವ ಮೊದಲು ಅನ್ನ ಭಾಗ್ಯ ಅಡಿ 5 ಕೆಜಿ ಅಕ್ಕಿಯನ್ನು 10 ಕೆಜಿಗೆ ಏರಿಸುವುದಾಗಿ ಭರವಸೆ ನೀಡಿದ್ದೇವು. ನಂತರ ಇದರ ದುರ್ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಸಚಿವ ಸಂಪುಟದಲ್ಲಿ ಹೊಸ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಹೇಳಿದ್ದಾರೆ. 

C,M SIDDU MEETING WITH MLC

ನಾವು ಯಾರ ಒತ್ತಡಕ್ಕೂ ಒಳಗಾಗಿ ಈ ತೀರ್ಮಾನ ಮಾಡಿಲ್ಲ. ಈ ವಿಚಾರವಾಗಿ ಸಮೀಕ್ಷೆ ನಡೆಸಿ, ಜನಸಾಮಾನ್ಯರು ಹಾಗೂ ಶಾಸಕರ ಜೊತೆ ಚರ್ಚಿಸಿ ತೀರ್ಮಾನ ಮಾಡಿದ್ದೇವೆ. ಸಾಮಾನ್ಯವಾಗಿ ಪ್ರತಿ ಕುಟುಂಬದಲ್ಲಿ ತಿಂಗಳಿಗೆ ವ್ಯಕ್ತಿಗೆ 5-6 ಕೆ.ಜಿಗೆ ಅಕ್ಕಿ ಮಾತ್ರ ಬಳಸುತ್ತಾರೆ. ಹೀಗಾಗಿ ನಾವು ಕೊಟ್ಟ ಮಾತನ್ನೂ ಉಳಿಸಿಕೊಳ್ಳುವುದಕ್ಕೆ ಇಂದಿರಾ ಕಿಟ್ ವಿತರಿಸಲು ಮಾರ್ಗದರ್ಶನ ನೀಡಲಾಗಿದೆ. ನಮ್ಮ ಸರ್ಕಾರ ಸಿಎಂ ಸಿದ್ದರಾಮಯ್ಯ ನೇತೃತ್ವ, ಸಚಿವ ಮುನಿಯಪ್ಪ ಮುಖಂಡತ್ವದಲ್ಲಿ ಐತಿಹಾಸಿಕ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. 

ಎಲ್ಲೆಡೆ ನಮ್ಮ ಗ್ಯಾರಂಟಿಗಳ ಬಗ್ಗೆ ಚರ್ಚೆ

ಈ ವಿಚಾರವಾಗಿ ರಾಜಕೀಯ ಚರ್ಚೆ ಮಾಡುತ್ತಾರೆ. ಬಿಎಸ್​ ಯಡಿಯೂರಪ್ಪ ಒಂದು ಕಾಳು ಕಡಿಮೆ ಕೊಟ್ಟರು ಹೋರಾಟ ಮಾಡುವುದಾಗಿ ಹೇಳುತ್ತಿದ್ದರು. ಅವರು ಭಾವನೆ ಮೇಲೆ ರಾಜಕಾರಣ ಮಾಡುತ್ತಾರೆ. ನಮ್ಮ ಸರ್ಕಾರ ಸದಾ ಬದುಕಿನ ಮೇಲೆ ರಾಜಕಾರಣ ಮಾಡುತ್ತದೆ. ಇಡೀ ದೇಶದಲ್ಲಿ ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡಿ ಅವರ ರಾಜ್ಯಗಳ ಯೋಜನೆ ನಿರ್ಣಯ ಮಾಡುತ್ತಿದ್ದಾರೆ ಎಂದು ಹೇಳಿದರು.

Advertisment

ಪ್ರತಿ ಹನಿ ನೀರಿಗೆ ಕೊಡುವ ಪ್ರಾಮುಖ್ಯತೆಯನ್ನು ಪ್ರತಿ ಅಗುಳು ಅನ್ನಕ್ಕೂ ನೀಡಬೇಕು. ನಾವೆಲ್ಲರೂ ಪ್ರಕೃತಿ ನಿಯಮದಲ್ಲಿ ಬದುಕುತ್ತಿದ್ದು, ಗಾಳಿ, ನೀರು, ಸೂರ್ಯನ ಜೊತೆಗೆ ಆಹಾರದ ಮೇಲೆ ಅವಲಂಬಿತ ಆಗಿದ್ದೇವೆ. ಪ್ರಕೃತಿ ಆಹಾರದ ಮೂಲಕ ನಮ್ಮನ್ನು ಕಾಪಾಡಿಕೊಂಡು ಬಂದಿದೆ. ಹಸಿದವನಿಗೆ ಮಾತ್ರ ಆಹಾರದ ಬೆಲೆ ಗೊತ್ತಿದೆ. ಎಲ್ಲರೂ ಕಷ್ಟಪಡುವುದೂ ಒಂದು ತುತ್ತು ಅನ್ನ, ಒಂದು ಗೇಣು ಬಟ್ಟೆಗಾಗಿ. ಇದರ ಹೊರತಾಗಿ ನಾವು ಏನೇ ಮಾಡಿದರೂ ಅವು ತಾತ್ಕಾಲಿಕ ಮಾತ್ರ ಎಂದು ಹೇಳಿದ್ದಾರೆ. 

ಬಡವರ ಬದುಕಿಗಾಗಿ ಕಾಂಗ್ರೆಸ್ ಯೋಜನೆಗಳು

ದೇಶದಲ್ಲಿ ಬಡವರ ಬದುಕಿನಲ್ಲಿ ಬದಲಾವಣೆ ತರಲು ಕಾಂಗ್ರೆಸ್ ನೆಹರೂ ಕಾಲದಿಂದ ಬಡವರಿಗೆ ಆಹಾರ ವಿತರಣೆ ಕಾರ್ಯಕ್ರಮ ರೂಪಿಸಲಾಗಿದೆ. ಇಂದಿರಾ ಗಾಂಧಿ ಹಾಗೂ ದೇವರಾಜ ಅರಸು ಅವರ ಕಾಲದಲ್ಲಿ ಉಳುವವನಿಗೆ ಭೂಮಿ ಕೊಡಲಾಯಿತು. ಬಡವರಿಗೆ ಪಡಿತರ ಜೊತೆಗೆ ಪಡಿತರ ಚೀಟಿ ವ್ಯವಸ್ಥೆ ಮಾಡಲಾಯಿತು. ಎಸ್.ಎಂ ಕೃಷ್ಣ ಕಾಲದಲ್ಲಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸಲು ಮಧ್ಯಾಹ್ನ ಬಿಸಿಯೂಟ ಆರಂಭಿಸಲಾಯಿತು. ಸಿಎಂ ಸಿದ್ದರಾಮಯ್ಯ ಬಸವ ಜಯಂತಿ ದಿನ ಅಧಿಕಾರ ಸ್ವೀಕರಿಸಿ ಮೊದಲ ದಿನವೇ ರಾಜ್ಯದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂದು ಅನ್ನಭಾಗ್ಯ ಜಾರಿಗೆ ತರಲಾಯಿತು. ಈ ಕಾರ್ಯಕ್ರಮಗಳನ್ನು ಯಾವುದೇ ಸರ್ಕಾರಗಳು ನಿಲ್ಲಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. 

ಇದನ್ನೂ ಓದಿ: ರೈತನ ಮೇಲೆ ಎರಗಿದ ಬೃಹತ್ ವ್ಯಾಘ್ರ.. ಹತ್ತಿ ಬಿಡಿಸುತ್ತಿದ್ದ ವ್ಯಕ್ತಿನ ಎಳೆದೊಯ್ದ ಹುಲಿ

Advertisment

Anna Bhagya: 5 ಕೆಜಿ ಅಕ್ಕಿ ಬದಲು ‘ಹಣ ಭಾಗ್ಯ’ಕ್ಕೆ ಚಾಲನೆ.. ಇವತ್ತಿನಿಂದ ನಿತ್ಯ 4 ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಸಂದಾಯ

ಟೀಕೆ ಮಾಡಿದವರೇ ನಮ್ಮನ್ನು ಕಾಪಿ ಮಾಡ್ತಿದ್ದಾರೆ

ಈ ಹಿಂದೆ ಉಚಿತ ಗ್ಯಾಸ್ ನೀಡುವ ಯೋಜನೆಗೆ ಮೋದಿ ಫೋಟೋ ಹಾಕಿ ಎಲ್ಲಾ ಪೆಟ್ರೋಲ್ ಬಂಕ್ ಗಳ ಮುಂದೆ ಹಾಕುತ್ತಿದ್ದರು. ಈಗ ಅದನ್ನು ನಿಲ್ಲಿಸಿದ್ದಾರೆ. 400 ರೂಪಾಯಿ ಇದ್ದ ಅಡುಗೆ ಅನಿಲ 1100ಕ್ಕೆ ಏರಿಕೆಯಾಗಿತ್ತು. ಎಲ್ಲದರ ಬೆಲೆಗಳು ಗಗನಕ್ಕೇರಿದೆ, ಆದಾಯ ಪಾತಾಳಕ್ಕೆ ಕುಸಿದಿದೆ ಎಂದು ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದೇವು. ಇದಕ್ಕೆ ಪ್ರತಿ ವರ್ಷ 53 ಸಾವಿರ ಕೋಟಿ ಅನುದಾನ ನೀಡುತ್ತಿದ್ದೇವೆ. ಪ್ರಧಾನಿ ಹಾಗೂ ಇತರೆ ನಾಯಕರು ನಮ್ಮ ಯೋಜನೆ ಟೀಕೆ ಮಾಡಿ, ಕೊನೆಗೆ ನಮ್ಮನ್ನೇ ಕಾಪಿ ಮಾಡಿದ್ದಾರೆ. ಬಿಹಾರದಲ್ಲಿ ಚುನಾವಣೆ ಘೋಷಣೆ ಮೊದಲೇ ಅಲ್ಲಿನ ಮಹಿಳೆಯರ ಖಾತೆಗೆ 10 ಸಾವಿರ ಹಾಕುತ್ತಿದ್ದಾರೆ. ಇಲ್ಲಿ ಜನರ ಹೊಟ್ಟೆಪಾಡು ವಿಚಾರ ಬಹಳ ಮುಖ್ಯ ಎಂದು ಸಾಬೀತಾಗುತ್ತದೆ ಎಂದು ಹೇಳಿದ್ದಾರೆ. 

ಏಷ್ಯಾ ಹಾಗೂ ನಮ್ಮ ದೇಶಗಳಲ್ಲಿ ಮಾತ್ರ ಬಿಸಿ ಬಿಸಿ ಆಹಾರ ತಿನ್ನುತ್ತೇವೆ. ಉಳಿದಂತೆ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಜಂಕ್ ಆಹಾರ, ಬ್ರೆಡ್, ಫಾಸ್ಟ್ ಫುಡ್ ಸೇವನೆ ಮಾಡುತ್ತಾರೆ. ನಮ್ಮ ದೇಶ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿ, ವಿದೇಶಗಳಿಗೆ ರಫ್ತು ಮಾಡುವ ಶಕ್ತಿ ಪಡೆದಿದ್ದೇವೆ. ಗುಜರಾತಿಗಿಂತ ಹೆಚ್ಚು ಹಾಲು ಉತ್ಪಾದನೆ ಮಾಡುತ್ತಿದ್ದೇವೆ. ನಮ್ಮ ಸರ್ಕಾರದ ಯೋಜನೆಗಳು ಜನಪರ ಕಾರ್ಯಕ್ರಮ. ದೇಶಕ್ಕೆ ಮಾದರಿ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

CM SIDDARAMAIAH DK Shivakumar
Advertisment
Advertisment
Advertisment