/newsfirstlive-kannada/media/media_files/2025/12/03/cm-siddu-met-kc-venugopal-at-mangalore-2025-12-03-12-37-00.jpg)
ಮಂಗಳೂರಿನಲ್ಲಿ ಕೆ.ಸಿ.ವೇಣುಗೋಪಾಲ್ ಭೇಟಿಯಾದ ಸಿಎಂ ಸಿದ್ದರಾಮಯ್ಯ
ಕರ್ನಾಟಕದಲ್ಲಿ ನವಂಬರ್ 20 ರಿಂದ ಸಿಎಂ ಕುರ್ಚಿಗಾಗಿ ಫೈಟ್ ಶುರುವಾಗಿದೆ. ಡಿಸಿಎಂ ಡಿಕೆಶಿ ಅವರಿಗೆ ಸಿಎಂ ಸ್ಥಾನ ನೀಡಬೇಕೆಂದು ಬೆಂಬಲಿಗ ಶಾಸಕರು, ಸಚಿವರು ದೆಹಲಿ ಯಾತ್ರೆ ನಡೆಸಿದ್ದರು. ಹೀಗೆ ಎರಡು ಮೂರು ತಂಡಗಳು ದೆಹಲಿಗೆ ಹೋಗಿ ಬಂದಿವೆ. ಮಾಧ್ಯಮಗಳಲ್ಲೂ ಸಿಎಂ ಸ್ಥಾನ ಯಾರ ಪಾಲಾಗುತ್ತೆ ಎಂಬ ಬಗ್ಗೆ ದೊಡ್ಡ ಚರ್ಚೆಯಾಯಿತು. ಇದಾದ ಬಳಿಕ ಕಾಂಗ್ರೆಸ್ ಹೈಕಮ್ಯಾಂಡ್ ಮಧ್ಯಪ್ರವೇಶಿಸಿ, ಬ್ರೇಕ್ ಫಾಸ್ಟ್ ಮೀಟಿಂಗ್ ಆರೇಂಜ್ ಮಾಡಿತ್ತು. ಹೀಗಾಗಿ ಈಗ ತಾತ್ಕಾಲಿಕವಾಗಿ ಸಿಎಂ ಕುರ್ಚಿ ಫೈಟ್‌ಗೆ ಬ್ರೇಕ್ ಬಿದ್ದಿದೆ.
ಸಿಎಂ ಕುರ್ಚಿ ಫೈಟ್ ಶುರುವಾದ ಬಳಿಕ ಇದೇ ಮೊದಲ ಭಾರಿಗೆ ಸಿಎಂ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಮಂಗಳೂರಿನ ಕಾವೇರಿ ಅತಿಥಿ ಗೃಹದಲ್ಲಿ ಕೆ.ಸಿ.ವೇಣುಗೋಪಾಲ್ ರನ್ನು ಭೇಟಿ ಮಾಡಿದ್ದಾರೆ.
ಈ ವೇಳೆ ರಾಜ್ಯದಲ್ಲಿ ಸಿಎಂ ಹುದ್ದೆ ಹಾಗೂ ನಾಯಕತ್ವ, ಡಿಕೆಶಿ ಬೆಂಬಲಿಗ ಶಾಸಕರ ಚಟುವಟಿಕೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕೆ.ಸಿ.ವೇಣುಗೋಪಾಲ್ ಭೇಟಿಯ ವೇಳೆ ಸಿಎಂ ಸಿದ್ದರಾಮಯ್ಯ ನಗು ನಗುತ್ತಾ ಖುಷಿಯಾಗಿದ್ದರು ಅನ್ನೋದು ಪೋಟೋ ನೋಡಿದ ಯಾರಿಗಾದರೂ ಗೊತ್ತಾಗುತ್ತೆ.
ಸಿಎಂ ಸಿದ್ದರಾಮಯ್ಯ ಫುಲ್ ಜಾಲಿ ಮೂಡ್ ನಲ್ಲಿದ್ದಾರೆ. ಯಾವುದೇ ಟೆನ್ಷನ್ ಇಲ್ಲ. ಸಿದ್ದರಾಮಯ್ಯ ಕೂಲ್ ಕೂಲ್ ಆಗಿ ಮಂಗಳೂರಿನ ತಣ್ಣಗಿನ ವಾತಾವರಣವನ್ನು ಎಂಜಾಯ್ ಮಾಡುತ್ತಿದ್ದಾರೆ.
ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿ ನಡುವಿನ ಸಂವಾದದ ಶತಮಾನೋತ್ಸವವನ್ನು ಮಂಗಳೂರಿನಲ್ಲಿ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೆ.ಸಿ.ವೇಣುಗೋಪಾಲ್ ಕೇರಳದಿಂದ ಮಂಗಳೂರಿಗೆ ಆಗಮಿಸಿದ್ದಾರೆ. ಒಂದೇ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕೆ.ಸಿ.ವೇಣುಗೋಪಾಲ್ ಭಾಗಿಯಾಗುವರು.
ಇನ್ನೂ ಕೆ.ಸಿ.ವೇಣುಗೋಪಾಲ್ ಅವರು ಬರುತ್ತಿದ್ದಂತೆ, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕರ್ತರು ಡಿ.ಕೆ. , ಡಿಕೆ ಎಂಬ ಘೋಷಣೆ ಕೂಗಿದ್ದಾರೆ. ಡಿಕೆಶಿ ಅವರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಕೆ.ಸಿ. ವೇಣುಗೋಪಾಲ್ ಗೆ ಆಗ್ರಹಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us