/newsfirstlive-kannada/media/media_files/2025/08/28/mahesh-timarodi1-2025-08-28-09-13-46.jpg)
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶ*ವಗಳನ್ನು ಹೂತು ಹಾಕಿದ್ದೇನೆ ಅಂತ ಆರೋಪಿಸಿದ್ದ ದೂರುದಾರ ಚಿನ್ನಯ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದ್ರೆ, ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಆಶ್ರಯ ಕೊಟ್ಟಿದ್ದ ತಿಮರೋಡಿ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಮಹಜರು ಮಾಡಿದ್ದರು. ನಿನ್ನೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಮೂರು ತಲವಾರುಗಳನ್ನು ಪತ್ತೆಯಾಗಿದ್ದವು.
ಇದನ್ನೂ ಓದಿ: ಅರಿಶಿಣ ಶಾಸ್ತ್ರದಲ್ಲಿ ಮಿಂದೆದ್ದ ಸ್ಟಾರ್ ನಿರೂಪಕಿ ಅನುಶ್ರಿ-ರೋಷನ್; PHOTOS
ಈಗ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಏರ್ ಗನ್ ಪತ್ತೆಯಾಗಿದೆ. ಸದ್ಯ ಏರ್ ಗನ್ ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ತಿಮರೋಡಿ ಅವರು ಆಶ್ರಯ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ತಿಮರೋಡಿ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಏರ್ ಗನ್, ತಲ್ವಾರ್, ಲ್ಯಾಪ್‌ಟಾಪ್, ಹಾರ್ಡ್ ಡಿಸ್ಕ್, ರಿಮೋಟ್, ಸಿಸಿಟಿವಿ ಕ್ಯಾಮೆರಾ, ಸಿಮ್ ಕಾರ್ಡ್, ಚೆನ್ನನ ಬಟ್ಟೆ ಬರೆ, ನಿತ್ಯ ಬಳಕೆ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಆದ್ರೆ, ಚೆನ್ನ ಇದ್ದ ಕೊಠಡಿಯಲ್ಲಿ ಆತನ ಆಧಾರ್ ಕಾರ್ಡ್ ಮಿಸ್ಸಿಂಗ್ ಆಗಿದೆ.
ನಿನ್ನೆ, ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಎಸ್ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಜೊತೆಗೆ ಮಹೇಶ್ ತಿಮರೋಡಿ ಪತ್ನಿ, ಮಗ ಹಾಗೂ ಅವರ ಮಗಳ ಮೊಬೈಲ್ಗಳನ್ನು ತೆಗೆದುಕೊಳ್ಳಲಾಗಿದೆ. ಇನ್ನು ಧರ್ಮಸ್ಥಳದ ವಿರುದ್ಧ ಸಂಚು ನಡೆಸಲು ಸಂಗ್ರಹಿಸಿದ್ದ ದಾಖಲೆ ಪತ್ರಗಳನ್ನು ಕೂಡ ವಶಕ್ಕೆ ಎಸ್ಐಟಿ ತೆಗೆದುಕೊಂಡಿದೆ.
ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರ ಚಿನ್ನಯ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಚಿನ್ನಯ್ಯ ಎಲ್ಲಿದ್ದ, ಈ ಮೊದಲು ಏನು ಮಾಡುತ್ತಿದ್ದ, ಯಾರಿಂದ ಹಣ ಪಡೆದ ಎನ್ನುವುದನ್ನು ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹೋದರ ಮೋಹನ್ ಮನೆಯಲ್ಲಿ ಮಹಜರು ಮಾಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ