/newsfirstlive-kannada/media/media_files/2025/08/28/mangalore-accident-2025-08-28-15-59-09.jpg)
ಮಂಗಳೂರು: ಕೇರಳ ಗಡಿಭಾಗ ತಲಪಾಡಿಯಲ್ಲಿ ಭೀಕರ ಅಪಘಾತ ಸಂಭವಿಸಿ ಒಂದು ಮಗು ಸೇರಿ ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ನಿಯಂತ್ರಣ ತಪ್ಪಿದ KSRTC ಬಸ್ ನಿಲ್ದಾಣ ಮತ್ತು ಆಟೋ ರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ ಒಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ಬ್ರೇಕ್ ಫೇಲ್ ಆಗಿದ್ದರಿಂದ ಅನಾಹುತ ಸಂಭವಿಸಿದೆ.
ಬಸ್ ನಿಲ್ದಾಣಕ್ಕೆ ಬಂದು ನುಗ್ಗಿದ್ದರಿಂದ ಅಲ್ಲಿ ನಿಂತಿದ್ದವರ ಮೇಲೂ ಹರಿದಿದೆ. ಅಲ್ಲದೇ ಪಕ್ಕದಲ್ಲಿದ್ದ ಆಟೋಗೂ ಬಂದು ಗುದ್ದಿದೆ. ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಮೃತಪಟ್ಟಿದ್ದಾರೆ. ಮೃತರೆಲ್ಲ ಒಂದೇ ಕುಟುಂಬದವರು ಎನ್ನಲಾಗಿದೆ. ಇದಲ್ಲದೇ ಒಂದು ಮಗು ಕೂಡ ಪ್ರಾಣ ಕಳೆದುಕೊಂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ