/newsfirstlive-kannada/media/media_files/2025/10/20/mangalore-cm-program-2025-10-20-17-11-59.jpg)
ದಕ್ಷಿಣ ಕನ್ನಡ: ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು.
ಪುತ್ತೂರು ಶಾಸಕ ಅಶೋಕ್ ರೈ (MLA Ashok Rai) ನೇತೃತ್ವದಲ್ಲಿ ‘ಅಶೋಕ ಜನಮನ -2025’ ಎಂಬ ಕಾರ್ಯಕ್ರಮವು ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದರು.
ಇದನ್ನೂ ಓದಿ: ರಘುಗೆ ಬರ್ತಿದ್ದಂತೆ ‘ಹೋಗ್ತಾ ಇರ್ಬೇಕು’ ಎಂದು ಗದರಿದ ಜಾಹ್ನವಿ -ಆಮೇಲೆ ಏನಾಯ್ತು..?
ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚಿನ ಜನರು ಭಾಗಿಯಾಗಿದ್ದರು. ಆಗ ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಅಸ್ವಸ್ಥರಾಗಿದ್ದಾರೆ. ಕುಡಿಯಲು ನೀರು ಸಿಗದೆ ಸಾರ್ವಜನಿಕರು ಪರದಾಟ ನಡೆಸಿದ್ದಾರೆ. ಸಣ್ಣ ಸಣ್ಣ ಮಕ್ಕಳನ್ನು ಜನರು ಕರೆದುಕೊಂಡು ಬಂದಿದ್ದರು.
ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿದ್ದು, ಅಸ್ವಸ್ಥರಿಗೆ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕ ಅಶೋಕ್ ರೈ ಮಾಲಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್​ನ ಕಾರ್ಯಕ್ರಮ ಇದಾಗಿದೆ. ದೀಪಾವಳಿ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತಟ್ಟೆ, ವಸ್ತ್ರ ಹಂಚಲು ಅಶೋಕ್ ಮುಂದಾಗಿದ್ದರು.
ಇದನ್ನೂ ಓದಿ: ರಘುಗೆ ಬರ್ತಿದ್ದಂತೆ ‘ಹೋಗ್ತಾ ಇರ್ಬೇಕು’ ಎಂದು ಗದರಿದ ಜಾಹ್ನವಿ -ಆಮೇಲೆ ಏನಾಯ್ತು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ