/newsfirstlive-kannada/media/media_files/2025/09/13/mahesh-hegde-2025-09-13-08-53-54.jpg)
ಮಹೇಶ್ ವಿಕ್ರಂ ಹೆಗ್ಡೆ
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಫೋಟೋ ಎಡಿಟ್ ಮಾಡಿ ಕೋಮು ಪ್ರಚೋದನೆ ನೀಡಿದ ಆರೋಪದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆಯನ್ನ (Mahesh vikram hegde) ಬಂಧಿಸಲಾಗಿದೆ.
ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಿಕೊಂಡು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡಬಿದಿರೆ ಪಿಎಸ್ಸೈ ಕೃಷ್ಣಪ್ಪ ಎಂಬವರ ದೂರಿನಡಿ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಲಾಗಿತ್ತು. ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ. ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂಥಹ ಪ್ರಕರಣ ಮರುಕಳಿಸಲ್ಲ ಎಂದು ಪೋಸ್ಟ್ ಮಾಡಿರುವ ಆರೋಪ ಇವರ ಮೇಲಿದೆ.
ಈ ಹಿನ್ನೆಲೆ ಮಹೇಶ್ ವಿಕ್ರಂ ಹೆಗ್ಡೆಯನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ಸೋಮವಾರದವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪೋಸ್ಟ್ ಎರಡು ಧರ್ಮಗಳ ನಡುವೆ ವೈರತ್ವ ಮತ್ತು ದ್ವೇಷ ಭಾವನೆ ಮೂಡಿಸಿ ಕೋಮು ಗಲಭೆ ಸೃಷ್ಟಿಸುವ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಹದಗೆಡಿಸುವ ಉದ್ದೇಶ ಎಂದು ಹೊಂದಿದೆ ಆರೋಪಿಸಲಾಗಿದೆ. ಇದರನ್ವಯ ಅವರ ವಿರುದ್ಧ ಬಿಎನ್‌ಎಸ್ 353 (2) ಅಡಿ ಸೆಪ್ಟೆಂಬರ್ 9 ರಂದು ಮೂಡುಬಿದಿರೆ ಠಾಣೆಯಲ್ಲಿ ಕೇಸು ದಾಖಲಿಸಲಾಗಿತ್ತು.
ಇದನ್ನೂ ಓದಿ:ಬೈಕ್ ಅಡ್ಡ ಬಂದಿದ್ದೇ ಹಾಸನ ದುರಂತಕ್ಕೆ ಕಾರಣ.. 9 ಬಲಿ, 25 ಜನ ಗಂಭೀರ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ