/newsfirstlive-kannada/media/media_files/2025/09/10/kukke-subramanya-temple-2025-09-10-13-19-22.jpg)
ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಬಿಎನ್ ಪುಂಗವ ಗೌಡಗೆ ರಾಜ್ಯ ಸರ್ಕಾರ ನೋಟಿಸ್ ಜಾರಿ ಮಾಡಿದೆ. ಸಮಿತಿಯ ಅಧ್ಯಕ್ಷರಾಗಿ ದೇಗುಲಕ್ಕೆ ಸಂಬಂಧಿಸಿದ ನಿಯಮಗಳ ವಿರುದ್ಧವಾಗಿ ನಡೆದುಕೊಂಡಿರೋದಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.
ನೋಟಿಸ್ನಲ್ಲಿ ನಿಯಮ ಮೀರಿ ವರ್ತಿಸಿದ ಸಂಬಂಧ ಮುಂದಿನ 7 ದಿನಗಳ ಒಳಗೆ ಸಮರ್ಪಕ ಕಾರಣ ನೀಡಬೇಕು, ಲಿಖಿತ ಉತ್ತರ ಕೊಡಿ. ತಪ್ಪಿದ್ದರೆ ಕಾನೂನು ಪ್ರಕಾರ ನಿಮ್ಮನ್ನು ಸದಸ್ಯತ್ವದಿಂದ ತೆಗೆದು ಹಾಕಲಾಗುತ್ತದೆ ಎಂದು ಎಚ್ಚರಿಸಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಿಂದ ನೋಟಿಸ್ ಜಾರಿಯಾಗಿದೆ.
ನೋಟಿಸ್ಗೆ ಕಾರಣ ಏನು..?
ರಾಜ್ಯ ಸರ್ಕಾರ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಿರುದ್ಧ ಉತ್ತರಾಧಿಮಠದವರು ಕರ್ನಾಟಕ ಹೈಕೋರ್ಟ್ನಲ್ಲಿ ಪ್ರಕರಣ ಹೂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಧ್ಯಕ್ಷ ಹರೀಶ್ ಅವರು, ಸಾರಿಗೆ ಮತ್ತು ಹಿಂದೂ ಧಾರ್ಮಿಕ ದತ್ತಿ ಸಚಿವರ ಜೊತೆ ಪತ್ರ ವ್ಯವಹಾರ ನಡೆಸಿದ್ದಾರೆ. ಪತ್ರ ವ್ಯವಹಾರ ನಡೆಸುವಾಗ ಇಲಾಖೆಯ ನಿಯಮಗಳನ್ನ ಮೀರಿ (ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ನಿಯಮಗಳ ಪ್ರಕಾರ), ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೂ ತರದೆ ಪತ್ರ ವ್ಯವಹಾರ ನಡೆಸಿರೋದು ಆಕ್ಷೇಪಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಐಫೋನ್ 17 ಸರಣಿ ರಿಲೀಸ್.. ಭಾರತದಲ್ಲಿ ರೇಟ್ ಎಷ್ಟು? ಯಾವಾಗ ಸಿಗುತ್ತೆ..?
ನೋಟಿಸ್ನಲ್ಲಿ ಏನಿದೆ..?
ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲ್ಲೂಕು, ಸುಬ್ರಹ್ಮಣ್ಯ ಗ್ರಾಮ, ಕುಕ್ಕೆ ಶ್ರೀ ಸುಬ್ರಹ್ಮಣ ದೇವಾಲಯಕ್ಕೆ ಉಲ್ಲೇಖ(1)ರ ನಡವಳಿ ಆದೇಶದಂತೆ ವ್ಯವಸ್ಥಾಪನಾ ಸಮಿತಿಯನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ಕಾಯ್ದೆ 2011ರ ಸೆಕ್ಷನ್ 25ರ ಅನ್ವಯ ರಚಿಸಲಾಗಿರುತ್ತದೆ.
ಸದರಿ ವ್ಯವಸ್ಥಾಪನಾ ಸಮಿತಿಗೆ ಹರೀಶ ಎಸ್. ಬಿನ್ ಬಿ. ಪುಂಗವ ಗೌಡ, ಇಂಜಾಡಿಮನೆ, ಸುಬ್ರಹ್ಮಣ್ಯ ಗ್ರಾಮ, ಕಡಬ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ ಆದ ನೀವು ಅಧ್ಯಕ್ಷರಾಗಿರುವುದು ಸರಿಯಷ್ಟೇ.
ರಾಜ್ಯ ಸರ್ಕಾರ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಿರುದ್ಧ ಉತ್ತರಾಧಿಮಠದವರು ಮಾನ್ಯ ಉಚ್ಚನ್ಯಾಯಾಲಯದಲ್ಲಿ ದಾವೆ ಪ್ರಕರಣ ಸಂಖ್ಯೆ: ಡ.ಬ್ಲೂ.ಪಿ ನಂ.11063/2020ರನ್ನು ದಾಖಲಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಸಾರಿಗೆ ಮತ್ತು ಹಿಂದೂ ಧಾರ್ಮಿಕ ದತ್ತಿ ಸಚಿವರ ಹೆಸರಿಗೆ ದಿನಾಂಕ:01.08.2025ರ ಪತ್ರವನ್ನು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೂ ಸಹ ತರದೆ ಪತ್ರ ವ್ಯವಹಾರ ನಡೆಸಿದ್ದು, ಈ ಬಗ್ಗೆ ಉಲ್ಲೇಖ(3)ರಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ವರದಿ ಮಾಡಿರುತ್ತಾರೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ವ ನಿಯಮಗಳು 2002ರ ನಿಯಮ 33ರನ್ನಯ ಅಧಿಸೂಚಿತ ಸಂಸ್ಥೆಯಲ್ಲಿ ಕಾರ್ಯನಿರ್ವಾಹಕ ಸಂಪ ಅಧಿಕಾರಿಗಳನ್ನು ನೇಮಕ ಮಾಡದಿರುವ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷನಿಗೆ ಜವಾಬ್ದಾರಿ ವಹಿಸಿರುವಂತೆ ಅಧಿಕಾರಿಗಳನ್ನು ಚಲಾಯಿಸಬೇಕಾಗಿರುತ್ತದೆ. ಆದರೆ ತಾವು ಸದರಿ ನಿಯಮದ ಅಧಿಕಾರ ವ್ಯಾಪ್ತಿಯನ್ನು ಮೀಗ ಮೀರಿ ಕಾರ್ಯನಿರ್ವಾಹಕ ಅಧಿಕಾರಿಗಳು ನೇಮಕವಾಗಿರುವ ಅಧಿಸೂಚಿತ ಸಂಸ್ಥೆಯ ವಿರುದ್ಧವಾಗಿ ಮಾನ್ಯ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣದ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳದೇ ಮತ್ತು ಪ್ರಕರಣದ ಪೂರ್ವಪರಗಳನ್ನು ಇಲಾಖೆಯ ಕಾಯ್ದೆ ಮತ್ತು ನಿಯಮಗಳ ಪರಿಧಿಯಲ್ಲಿ ಪರಿಗಣನೆಗೆ ತೆಗೆದುಕೊಳ್ಳದೆ ನೇರವಾಗಿ ಮಾನ್ಯ ಸಚಿವರೊಂದಿಗೆ ಪತ್ರ ವ್ಯವಹರಿಸಿರುವುದು ಆಕ್ಷೇಪಾರ್ಹವಾಗಿರುತ್ತದೆ.
ಈ ಮೇಲ್ಕಂಡ ಎಲ್ಲಾ ಅಂಶಗಳ ಹಿನ್ನಲೆಯಲ್ಲಿ ಸದರಿ ಪ್ರಮುಖ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗಾಧಿಯಲ್ಲಿರುವ ನೀವು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ನಿಯಮಗಳು 2002ರ ನಿಯಮ 33ರಲ್ಲಿ ಕಲ್ಪಿಸಿರುವ ಅಧಿಕಾರ ವ್ಯಾಪ್ತಿ ಮೀರಿ ವರ್ತಿಸಿರುವುದರಿಂದ ತಮ್ಮ ವಿರುದ್ಧ ಏಕೆ ನಿಯಮಾನುಸಾರ ಕ್ರಮ ಕೈಗೊಳ್ಳಬಾರದು ಎಂಬ ಬಗ್ಗೆ ಈ ನೋಟಿಸ್ ತಲುಪಿದ ಏಳು (7) ದಿನಗಳೊಳಗಾಗಿ ಈ ಕಛೇರಿಗೆ ತಮ್ಮ ಲಿಖಿತ ಸಮಜಾಯಿಸಿ/ಹೇಳಿಕೆ ಸಲ್ಲಿಸಲು ತಿಳಿಸಿದೆ.
ತಪ್ಪಿದ್ದಲ್ಲಿ ನಿಮ್ಮ ಸಮಜಾಯಿಷಿ/ಹೇಳಿಕೆ ಏನೂ ಇಲ್ಲವೆಂದು ಭಾವಿಸಿ ನಿಮ್ಮನ್ನು ವ್ಯವಸ್ಥಾಪನಾ ಸಮಿತಿಯ ಸದಸ್ಯತ್ವದಿಂದ ತೆಗೆದು ಹಾಕಲು ಕಾನೂನು ರೀತ್ಯಾ ಮುಂದಿನ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು
ಡಾ. ಎಂ.ವಿ.ವೆಂಕಟೇಶ್, ಆಯುಕ್ತರು
ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧಾರ್ಮಿಕ ಸಂಸ್ಥೆಗಳು
ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ
ಇದನ್ನೂ ಓದಿ: ‘ರಚಿತಾ ರಾಮ್ಗೂ ನನಗೂ ಯಾವುದೇ ಸಂಪರ್ಕವಿಲ್ಲ..’ ಒಡವೆ ಗಿಫ್ಟ್ ಬಗ್ಗೆ ಜಗ್ಗ ಹೇಳಿದ್ದೇನು..?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ