/newsfirstlive-kannada/media/media_files/2025/09/20/dasara-image-2025-09-20-09-19-30.jpg)
ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿಗಳ ದಸರಾ ರಜೆ ಇಂದಿನಿಂದ ಆರಂಭವಾಗಿದೆ. ಮೈಸೂರು ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವನ್ನು ಮಕ್ಕಳು ಸಹ ನೋಡಿ ಕಣ್ತುಂಬಿಕೊಳ್ಳಲಿ ಎಂದು ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಿಗೆ ದಸರಾ ಹಬ್ಬದ ರಜೆ ಘೋಷಿಸಿದೆ.
ಶಿಕ್ಷಣ ಇಲಾಖೆ ಘೋಷಿಸಿದ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿಗಳ ದಸರಾ ರಜೆ ಇಂದಿನಿಂದ ಆರಂಭವಾಗಲಿದೆ. ಈ ಮೂಲಕ ಮಕ್ಕಳಿಗೆ ನಾಡ ಹಬ್ಬದ ಪರಂಪರೆಯನ್ನಯ ಕಣ್ತುಂಬಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಗೆ ರಜೆ ಇಲ್ಲ
ಈ ಕುರಿತು ಶಿಕ್ಷಣ ಇಲಾಖೆ ಇಂದು ಆದೇಶ ಹೊರಡಿಸಿದ್ದು, ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರವರೆಗೆ ಸರ್ಕಾರಿ ಶಾಲೆಗಳಿಗೆ ಒಟ್ಟು 18 ದಿನ ಹಬ್ಬದ ರಜೆ ಇರುತ್ತದೆ. ಆದರೆ ಶಾಲಾ ಮಕ್ಕಳು ಕಡ್ಡಾಯವಾಗಿ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.
ಶಿಕ್ಷಣ ಇಲಾಖೆ ಹೊರಡಿಸಿರುವ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ 18 ದಿನ ರಜೆ ನೀಡಲಾಗಿದೆ. ಸೆಪ್ಟೆಂಬರ್ 22ರಂದು ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಚಾಲನೆ ನೀಡಲಾಗುತ್ತದೆ.
ಇದನ್ನೂ ಓದಿ: ನಿಮ್ಮ ಪ್ರೀತಿಯ ನ್ಯೂಸ್‌ಫಸ್ಟ್ ವಾಹಿನಿಗೆ ಐದನೇ ವರ್ಷದ ಸಂಭ್ರಮ