ಇಂದು ಸಂಜೆ 4.30 ರ ನಂತರ ಶಾಸಕ ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ : ಕಲ್ಲೇಶ್ವರ ಮಿಲ್ ನಲ್ಲಿ ಅಂತ್ಯಕ್ರಿಯೆಗೆ ಸಿದ್ದತೆ

ನಿನ್ನೆ ಸಂಜೆ ಬೆಂಗಳೂರಿನಲ್ಲಿ ವಿಧಿವಶರಾದ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಇಂದು ಸಂಜೆ 4.30ರ ನಂತರ ನಡೆಯಲಿದೆ. ದಾವಣಗೆರೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಸಂಸ್ಕಾರ ನಡೆಸಲಾಗುತ್ತೆ.

author-image
Chandramohan
Shamanuru shivashankarappa

ನಿನ್ನೆ ಸಂಜೆ ಶಿವೈಕ್ಯರಾದ ಶಾಮನೂರು ಶಿವಶಂಕರಪ್ಪ

Advertisment
  • ಇಂದು ಸಂಜೆ 4.30 ರ ನಂತರ ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ
  • ದಾವಣಗೆರೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ಅಂತ್ಯಕ್ರಿಯೆ
  • ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸೇರಿ ಅನೇಕ ಗಣ್ಯರು ಭಾಗಿ

ನಿನ್ನೆ ಸಂಜೆ ಶಿವೈಕ್ಯರಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರಕ್ಕೆ ದಾವಣಗೆರೆಯ ಪುತ್ರ ಎಸ್‌.ಎಸ್.ಮಲ್ಲಿಕಾರ್ಜುನ ಮನೆಯಲ್ಲಿ ಕುಟುಂಬಸ್ಥರು ಪೂಜೆ ಪುನಸ್ಕಾರ ನೆರವೇರಿಸುತ್ತಿದ್ದಾರೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಪೂಜೆ  ಪುನಸ್ಕಾರ ನೆರವೇರಿಸಲಾಗುತ್ತಿದೆ. ಬೆಳಿಗ್ಗೆ 11:30 ರ ನಂತರ ಹೈಸ್ಕೂಲ್ ಮೈದಾನಕ್ಕೆ ಪಾರ್ಥೀವ ಶರೀರ ಶಿಫ್ಟ್ ಮಾಡಲಾಗುತ್ತೆ.  ಸಾರ್ವಜನಿಕ ಅಂತಿಮ ದರ್ಶನಕ್ಕೆ ಹೈ ಸ್ಕೂಲ್ ಗ್ರೌಂಡ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಂಜೆ 4:30 ರ ನಂತರ ಅಂತ್ಯ ಸಂಸ್ಕಾರ ನೆರವೇರಿಸುವ ಸಾಧ್ಯತೆ ಇದೆ. ದಾವಣಗೆರೆಯ  ಕಲ್ಲೇಶ್ವರ ಮಿಲ್ ನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಶಾಮನೂರು  ಶಿವಶಂಕರಪ್ಪ ಕುಟುಂಬದ ಒಡೆತನದ ಕಲ್ಲೇಶ್ವರ ಮಿಲ್ ನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
ಅಂತ್ಯಸಂಸ್ಕಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು  ಭಾಗಿಯಾಗುವರು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸಲು ಈಗಾಗಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

shamanur shivashankarappa (1)



ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

shamanur shivashankarappa
Advertisment