/newsfirstlive-kannada/media/media_files/2025/08/25/chinnayya-2025-08-25-08-32-57.jpg)
ಮಂಗಳೂರು: ಧರ್ಮಸ್ಥಳದ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾ ಮಾಡಿದೆ. ಇದರಿಂದ ಆರೋಪಿ ಚೆನ್ನ ಜೈಲಿನಲ್ಲಿಯೇ ದಿನ ಕಳೆಯಬೇಕಾಗಿದೆ.
ಚಿನ್ನಯ್ಯ ಜೈಲು ಸೇರಿದ ಮೇಲೆ ಅವರ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ ವಕೀಲರು ಜಾಮೀನು ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದರು. ಆದರೆ ಬೇಲ್ ನೀಡದಂತೆ ಎಸ್​ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದರು. ಈ ಸಂಬಂಧ ಸೆಪ್ಟೆಂಬರ್​ 12ರಂದು ವಾದ ಆಲಿಸಿ, ನ್ಯಾಯಾಧೀಶರು ಇಂದಿಗೆ ಆದೇಶ ಕಾಯ್ದಿರಿಸಿದ್ದರು. ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಧೀಶ ವಿಜಯೇಂದ್ರ ಅವರು ಇಂದು ಅರ್ಜಿ ವಜಾ ಮಾಡಿದ್ದಾರೆ.
/filters:format(webp)/newsfirstlive-kannada/media/media_files/2025/08/25/chinnayya-statement-2025-08-25-16-47-24.jpg)
ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ ಮಾಡಿ ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಹೆಚ್ಚುವರಿ ವ್ಯಾವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಾಧೀಶ ವಿಜಯೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಕಾನೂನು ಮತ್ತು ತನಿಖಾ ಹಂತದ ಆಧಾರಿತವಾಗಿ ಎಸ್​ಐಟಿ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಕೆ ಹಿನ್ನೆಲೆಯಲ್ಲಿ ಬೇಲ್ ನೀಡಲು ನಿರಾಕರಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us