/newsfirstlive-kannada/media/media_files/2025/08/10/dharmastala-2-2025-08-10-10-23-59.jpg)
ಮಂಗಳೂರು: ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು 6 ಜನರನ್ನು ಅರೆಸ್ಟ್ ಮಾಡಿದ್ದಾರೆ.
ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೀಗ ಈ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳ ಪೊಲೀಸರು 6 ಜನರನ್ನು ಬಂಧಿಸಿದ್ದು, 27 ಜನರಿಗಾಗಿ ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ: ಸಿರಾಜ್ಗೆ ರಾಖಿ ಕಟ್ಟಿದ ಖ್ಯಾತ ಗಾಯಕಿ ಆಶಾ ಭೋಸ್ಲೆ ಮೊಮ್ಮಗಳು.. ಇದಕ್ಕೆ ಬಲವಾದ ಕಾರಣವಿದೆ, ಏನದು?
/filters:format(webp)/newsfirstlive-kannada/media/media_files/2025/08/06/dharmastala-clash-2025-08-06-22-48-37.jpg)
ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ನಡೆದ ಗುಂಪು ಘರ್ಷಣೆ ನಡೆದಿತ್ತು. ಈ ಸಂಬಂಧ ಪೊಲೀಸರು ಸುಮೋಟೋ ಪ್ರಕರಣ ಅಡಿ 27 ಜನರ ವಿರುದ್ಧ ದೂರು ದಾಖಲು ಮಾಡಿಕೊಂಡಿದ್ದರು. ಬಳಿಕ ಹುಡುಕಾಟ ನಡೆದಿತ್ತು. ಸದ್ಯ 6 ಜನರನ್ನು ಅರೆಸ್ಟ್ ಮಾಡಲಾಗಿದೆ. ಗಲಾಟೆ ಮಾಡಿ ಪರಾರಿಯಾಗಿರುವವರಿಗಾಗಿ ಹುಡುಕಾಟ ಈಗಲೂ ನಡೆದಿದೆ.
ಎಸ್ಐಟಿ ಅಧಿಕಾರಿಗಳಿಗೆ ಅನಾಮಿಕ ತೋರಿಸಿದ ಸ್ಥಳದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿತ್ತು. ಈ ಕುರಿತು ಯೂಟ್ಯೂಬರ್ಗಳು ವರದಿ ಮಾಡುತ್ತಿದ್ದರು. ಇದನ್ನು ಪ್ರಶ್ನಿಸಿ ಅಲ್ಲಿನ ಕೆಲ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಮೊದಲು ಜಗಳವಾಗಿ, ಆ ನಂತರ ತಳ್ಳಾಟ, ನೂಕಾಟ ನಡೆದಿತ್ತು. ತೀವ್ರವಾದ ಉದ್ವಿಘ್ನ ಪರಿಸ್ಥಿತಿ ಏರ್ಪಡುತ್ತಿದ್ದಂತೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದರು. ಇನ್ನು ಗಾಯಗೊಂಡಿದ್ದ ಯೂಟೂಬರ್ಗಳನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ