/newsfirstlive-kannada/media/media_files/2025/11/27/hubli-meghana-2025-11-27-11-25-42.jpg)
ಹುಬ್ಬಳ್ಳಿ: ವಿದ್ಯುತ್ ಶಾಕ್ ತಗುಲಿ 24 ವರ್ಷದ ಯುವತಿ ಜೀವ ಕಳೆದುಕೊಂಡ ದಾರುಣ ಘಟನೆ ನಗರದ ಮೂರು ಸಾವಿರ ಮಠದ ಬಳಿ ನಡೆದಿದೆ. ಮೇಘನಾ (24) ಮೃತ ದುರ್ದೈವಿ.
ಇನ್ನು ಘಟನೆಯ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಗೆ ಹಾಕಿದ್ದ ಮೋಟಾರ್ ಬಂದ್ ಮಾಡಲು ಹೋಗಿದ್ದ ವೇಳೆ ವಿದ್ಯುತ್​ ತಗುಲಿ ಮೇಘನಾ ತೀವ್ರ ಅಸ್ವಸ್ಥಗೊಂಡಿದ್ದಾಳೆ. ಕೂಡಲೇ ಮೇಘನಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೇಘನಾ ಮೃತಪಟ್ಟಿದ್ದಾಳೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.
ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us