/newsfirstlive-kannada/media/media_files/2026/02/09/sonu-nigam-2026-02-09-10-16-35.jpg)
ಹುಬ್ಬಳ್ಳಿ: ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅವರು ಇಂದು ವಾಣಿಜ್ಯ ನಗರಿ ಹುಬ್ಬಳ್ಳಿಯ ಇತಿಹಾಸ ಪ್ರಸಿದ್ಧ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ್ದಾರೆ.
ನಗರಕ್ಕೆ ಆಗಮಿಸಿದ ಅವರು ನೇರವಾಗಿ ಸಿದ್ದಾರೂಢ ಮಠಕ್ಕೆ ತೆರಳಿ, ಸಿದ್ದಾರೂಢ ಸ್ವಾಮೀಜಿಗಳ ಗದ್ದುಗೆಯ ದರ್ಶನ ಪಡೆದರು. ಬಳಿಕ ವಿಶೇಷ ಪೂಜೆ ಸಲ್ಲಿಸಿ, ಭಕ್ತಿಯಿಂದ ನಮಸ್ಕರಿಸಿದರು.
10 ನಿಮಿಷ ಧ್ಯಾನ
ಗದ್ದುಗೆಯ ದರ್ಶನ ಪಡೆದ ನಂತರ, ಸೋನು ನಿಗಮ್ ಅವರು ಸಿದ್ದಾರೂಢರ ಸನ್ನಿಧಿಯಲ್ಲಿ ಸುಮಾರು ಹತ್ತು ನಿಮಿಷಗಳ ಕಾಲ ಮೌನವಾಗಿ ಕುಳಿತು ಧ್ಯಾನ ಮಾಡಿದರು. ಮಠದ ಪ್ರಶಾಂತ ವಾತಾವರಣದಲ್ಲಿ ಅವರು ಭಕ್ತಿಪರವಶರಾಗಿ ಕಂಡುಬಂದರು. ಮಠಕ್ಕೆ ಭೇಟಿ ನೀಡಿದ ವಿಶೇಷ ಅತಿಥಿಯನ್ನು ಸಿದ್ದಾರೂಢ ಮಠದ ಟ್ರಸ್ಟ್ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಮಠದ ಟ್ರಸ್ಟಿಗಳು ಸೋನು ನಿಗಮ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಇದೇ ವೇಳೆ ಸಿದ್ದಾರೂಢರ ಸುಂದರವಾದ ಮೂರ್ತಿಯನ್ನು ಸ್ಮರಣಿಕೆಯಾಗಿ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ: ವಾಣಿಜ್ಯ ನಗರಿಯಲ್ಲಿ ಸಾಂಸ್ಕೃತಿಕ ರಸದೌತಣ; ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಅದ್ದೂರಿ ತೆರೆ
/filters:format(webp)/newsfirstlive-kannada/media/media_files/2026/02/09/sonu-nigam-1-2026-02-09-10-16-50.jpg)
ಏಪ್ರಿಲ್ 2025 ರಲ್ಲಿ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ ಅಭಿಮಾನಿಗಳನ್ನು ಪಹಲ್ಗಾಮ್ ಉಗ್ರರ ದಾಳಿಗೆ ಹೋಲಿಸಿ, ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಆಕ್ರೋಶಗೊಂಡ ಕನ್ನಡಪರ ಸಂಘಟನೆಗಳು ದೂರು ದಾಖಲಿಸಿದವು. ಬೆಂಗಳೂರಿನ 'ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ'ಯಲ್ಲಿದ್ದ ಕಾರ್ಯಕ್ರಮದಲ್ಲಿ, ಅಭಿಮಾನಿಯೊಬ್ಬರು ಕನ್ನಡ ಹಾಡು ಕೇಳಿದಾಗ ಸೋನು ನಿಗಮ್ ಕಿರಿಕಿರಿಗೊಂಡರು. ಸೋನು ನಿಗಮ್ ವರ್ತನೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಇದನ್ನೂ ಓದಿ:‘ಖಾಲಿ ಟ್ರಂಕ್’ ಹಿಡಿದು ಪ್ರತಿಭಟಿಸ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us